ತ್ಯಾಜ್ಯ ವಿಲೇವಾರಿಗೆ ಒಪ್ಪದ ಗ್ರಾಮಸ್ಥರು


Team Udayavani, Nov 18, 2020, 4:31 PM IST

hasan-tdy-2

ಸಕಲೇಶಪುರ: ತಾಲೂಕಿನ ಮಳಲಿ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪಟ್ಟಣದ ಕಸ ವಿಲೇವಾರಿ ಮಾಡುವ ಕುರಿತು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಪುರಸಭೆ ಹಾಗೂ ಗ್ರಾಮಸ್ಥರ ನಡುವೆ ನಡೆದ ಪೂರ್ವಭಾವಿ ಸಭೆ ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಫ‌ಲವಾಯಿತು.

ತಾಲೂಕಿನ ಮಳಲಿ ಗ್ರಾಮದಲ್ಲಿನ ಘನ ತ್ಯಾಜ್ಯವಿಲೇವಾರಿಘಟಕದಲ್ಲಿಕಸವಿಲೇವಾರಿ ಮಾಡುವ ನಿಟ್ಟಿನಲ್ಲಿ ಐದು ತಿಂಗಳ ಹಿಂದೆ ಪುರಸಭೆಯವರು ಕಸ ತೆಗೆದುಕೊಂಡು ಹೋದಾಗ ಗ್ರಾಮಸ್ಥರು ತೀವ್ರ ವಿರೋಧವ್ಯಕ್ತಪಡಿಸಿದ್ದರು. ಈ ವೇಳೆ ಕಸ ವಿಲೇವಾರಿಘಟಕದಲ್ಲಿ ವೈಜ್ಞಾನಿಕ ಯಂತ್ರೋಪಕರಣ ಅಳವಡಿಸಲಾಗುವುದು ಎಂದು ಎಸಿ ಗಿರೀಶ್‌ನಂದನ್‌ ಗ್ರಾಮಸ್ಥರಿಗೆ ತಿಳಿಸಿದ್ದರು.

ಅದರಂತೆ ಪುರಸಭೆಯವರು 2 ಕೋಟಿ ರೂ.ವೆಚ್ಚದಲ್ಲಿವೈಜ್ಞಾನಿಕವಾಗಿಕಸವಿಲೇವಾರಿ ಮಾಡಲು ಟೆಂಡರ್‌ ಕರೆದಿದ್ದು, ಇದೀಗ ಟೆಂಡರ್‌ ಪ್ರಕ್ರಿಯೆ ಮುಗಿದು, ಕಾಮಗಾರಿ ಆರಂಭಿಸಬೇಕಿದೆ. ಈ ಬಗ್ಗೆ ಚರ್ಚೆ ನಡೆಸಲುಪುರಸಭೆ ಹಾಗೂ ಗ್ರಾಮಸ್ಥರ ಪೂರ್ವಭಾವಿ ಸಭೆ ಮಂಗಳವಾರಕರೆಯಾಗಿತ್ತು. ಸಭೆಯಲ್ಲಿಹಾಜರಿದ್ದ ಗ್ರಾಮಸ್ಥರು, ಗ್ರಾಮದಲ್ಲಿ ಬಹುತೇಕವಾಗಿ ಬಡ ದಲಿತರು ಹಲವಾರು ವರ್ಷಗಳಿಂದ ವಾಸವಾಗಿದ್ದಾರೆ. ಉದ್ದೇಶಪೂರ್ವಕ ವಾಗಿಯೇ ಗ್ರಾಮದಲ್ಲಿ ಘನತ್ಯಾಜ್ಯವಿಲೇವಾರಿ ಘಟಕ ಮಾಡಲಾಗಿದೆ ಎಂದು ಆರೋಪಿಸಿದರು.

ಪುರಸಭೆಯ ಕೆಲವು ಅಧಿಕಾರಿಗಳು ಇಲ್ಲಿ ಯಾರು ವಾಸವಾಗಿಲ್ಲ ಎಂದು ಸುಳ್ಳು ವರದಿ ನೀಡಿದ್ದರಿಂದ, ನಾವು ತೊಂದರೆ ಅನುಭವಿಸ ಬೇಕಾಗಿದೆ. ಇಲ್ಲಿಯವರೆಗೆ ಘನತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಹೋರಾಟ ಮಾಡಿ ಕೊಂಡುಬಂದಿದ್ದೇವೆ.ಯಾವುದೇಕಾರಣಕ್ಕೂ ನಾವು ಇಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಮಾಡಲು ಬಿಡುವುದಿಲ್ಲ, ಮಾಡುವುದಾದರೆ ಇಲ್ಲಿ ಪ್ರಭಾವಿಯೋರ್ವರು ಒತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸಿ ಅಲ್ಲಿ ಘಟಕ ಮಾಡಲಿ ಎಂದು ಹೇಳಿದರು.

ಘಟಕ ಸ್ಥಳಾಂತರಿಸಿ: ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯ ಬೇಡ, ಕಸ ವಿಲೇವಾರಿ ಘಟಕಕ್ಕಾಗಿ 11 ಎಕರೆ ಜಾಗ ಬಫ‌ರ್‌ ಜೋನ್‌ ಎಂದು ಘೋಷಣೆ ಮಾಡಲಾಗಿದೆ. ಇದರಲ್ಲಿ8 ಎಕರೆ ಜಾಗದಲ್ಲಿ ಗ್ರಾಮ ಸ್ಥರು ವಾಸವಾಗಿದ್ದಾರೆ. ಬಫ‌ರ್‌ ಜೋನ್‌ ಘೋಷಣೆಯಿಂದ ತೊಂದರೆ ಆಗಿದೆ. ಕೂಡಲೆ, ಮಾನವೀಯತೆ ದೃಷ್ಟಿಯಿಂದ ಇಲ್ಲಿನ ಘನತ್ಯಾಜ್ಯ ಘಟಕವನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಕೆ ಕುಮಾರಸ್ವಾಮಿ ಮಾತನಾಡಿ, ಕಳೆದ12 ವರ್ಷಗಳಿಂದ ಗ್ರಾಮಸ್ಥರ ಹಿತಕ್ಕಾಗಿ ನಾನು ಗ್ರಾಮದಲ್ಲಿಕಸವಿಲೇವಾರಿ ಮಾಡಲುಅವಕಾಶ ನೀಡಿಲ್ಲ. ನಾನು ಕೇವಲ ಮಳಲಿ ಗ್ರಾಮಕ್ಕೆ ಮಾತ್ರ ಶಾಸಕನಲ್ಲ, ಪುರಸಭೆ ಸೇರಿದಂತೆ ಕ್ಷೇತ್ರದ ಜನರ ಹಿತಕಾಯಬೇಕಾಗಿದೆ.ಘನ ತ್ಯಾಜ್ಯ ವಿಲೇವಾರಿಘಟಕ ನಿರ್ಮಾಣವಾಗುವ ಸಮಯದಲ್ಲೆ ಗ್ರಾಮಸ್ಥರು ಸರಿಯಾಗಿ ವಿರೋಧ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಆತಂಕ ಪಡುವುದು ಬೇಡ: ಇದೀಗ ನ್ಯಾಯಾಲಯದ ಆದೇಶವನ್ನು ನಾವೆಲ್ಲ ಪರಿ ಪಾಲನೆ ಮಾಡಬೇಕಾಗಿರುವುದಿರಂದ ಗ್ರಾಮ ಸ್ಥರು ಗ್ರಾಮದ ತ್ಯಾಜ್ಯವಿಲೇವಾರಿಘಟಕದಲ್ಲಿ ಕಸ ವಿಲೇವಾರಿ ಮಾಡಲು ಅವಕಾಶ ನೀಡ ಬೇಕು. ಈಗಾಗಲೇ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು2 ಕೋಟಿ ರೂ. ವೆಚ್ಚದ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಗ್ರಾಮಸ್ಥರು ಈ ಕುರಿತು ಯಾವುದೇ ಆತಂಕ ಪಡುವುದು ಬೇಡ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌ ಮಾತನಾಡಿ, ಈ ಹಿಂದೆ ಕಸವನ್ನು ಟಿಪ್ಪರ್‌ ಗಳಲ್ಲಿ ತಂದು ಸುರಿಯಲು ಬಂದಾಗ ಗ್ರಾಮಸ್ಥರು ವೈಜ್ಞಾನಿಕವಾಗಿ ಕಸ ಸುರಿಯಲಿ ಎಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ವೈಜ್ಞಾನಿಕ ವಾಗಿ ಕಸ ವಿಲೇವಾರಿ ಮಾಡಲು ಟೆಂಡರ್‌ ಕರೆಯಲಾಗಿದೆ. ಇದೀಗಕಾಮಗಾರಿ ಆರಂಭಿಸಬೇಕಾಗಿದೆ. ನ್ಯಾಯಾಲಯದ ಆಜ್ಞೆಯನ್ನು ನಾವು ಪಾಲನೆ ಮಾಡಬೇಕಾಗಿದೆ. ಇದೀಗ ಗ್ರಾಮಸ್ಥರು ಕಸ ಹಾಕಲು ಬಿಡುವುದಿಲ್ಲ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಂತಿಮವಾಗಿ ಸಭೆಯಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರು ಒಪ್ಪದ ಹಿನ್ನೆಲೆಯಲ್ಲಿ ಸಭೆಯನ್ನು ಮೊಟಕುಗೊಳಿಸಲಾಯಿತು.ಸಭೆಯಲ್ಲಿ ತಹಶೀಲ್ದಾರ್‌ ಮಂಜುನಾಥ್‌, ಪುರಸಭಾಮುಖ್ಯಾಧಿಕಾರಿ ಸ್ಟೀಫ‌ನ್‌ಪ್ರಕಾಶ್‌, ಪುರಸಭಾ ಅಧ್ಯಕ್ಷ ಕಾಡಪ್ಪ, ಉಪಾಧ್ಯಕ್ಷ ಜರೀನಾ, ಗ್ರಾಮಸ್ಥರಾದ ಶಿವಣ್ಣ, ಶಾಂತ ಕುಮಾರ್‌, ವೇಣು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.