JDS ಕಾರ್ಯಕರ್ತರಿಂದ ಮಹಿಳೆ ಮೇಲೆ ಹಲ್ಲೆ ಆರೋಪ; ಕ್ರಮ ಕೈಗೊಳ್ಳಲು ಠಾಣೆ ಮುಂದೆ ಪ್ರತಿಭಟನೆ
Team Udayavani, Apr 19, 2022, 4:50 PM IST
ಆಲೂರು: ಜೆಡಿಎಸ್ ಕಾರ್ಯಕರ್ತರಿಂದ ಗ್ರಾಮದ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರೂ ಆಲೂರು ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಹಲ್ಲೆಗೊಳಗಾದ ಗ್ರಾಮಸ್ಥರು ಆಲೂರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಅಡಿಬೈಲು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಶ್ರೀ ರಂಗನಾಥಸ್ವಾಮಿ ದೇವರ ಉತ್ಸವ ಮಾಡುವ ವಿಚಾರವಾಗಿ ಸಭೆ ಕರೆಯಲಾಗಿತ್ತು. ಗ್ರಾಮದಲ್ಲಿರುವ ಕೆಲವು ಜೆಡಿಎಸ್ ಬೆಂಬಲಿತ ಕಾರ್ಯಕರ್ತರೆಂದು ಗುರುತಿಸಿಕೊಂಡಿರುವ ರಘು,ಮಂಜುನಾಥ್,ದರ್ಶನ್,ಹಾಗೂ ಚಂದನ್ ಸೇರಿ ಹಳೆಯ ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯವಿಟ್ಟು ಕೃಷ್ಣಚಾರಿ ಹಾಗೂ ದಿನೇಶ್ ನಿಗೆ ಎಲ್ಲಾ ವಿಷಯದಲ್ಲೂ ಪರವಾಗಿ ನಿಲ್ಲುತ್ತೀಯಾ ಎಂದು ಅದೇ ಗ್ರಾಮದ ಪುಟ್ಟರಾಜು ಹಾಗೂ ಆತನ ಪತ್ನಿ ಗೀತಾಳ ಮೇಲೆ ಹಲ್ಲೆ ಮಾಡಿದ್ದಾರೆ.
ಹಲ್ಲೆ ನಡೆದಿರುವ ವೀಡಿಯೊದೊಂದಿಗೆ ಆಲೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಅದರೆ ಆಲೂರು ಪೊಲೀಸ್ ಠಾಣೆ ಅಧಿಕಾರಿಗಳು ಯಾವುದೇ ಕ್ರಮಕೊಂಡಿರಲಿಲ್ಲ ಇದನ್ನೇ ಬಂಡವಾಳ ಮಾಡಿಕೊಂಡ ಜೆಡಿಎಸ್ ಕಾರ್ಯಕರ್ತರಾದ ರಘು, ಮಂಜುನಾಥ್, ದರ್ಶನ್, ಚಂದನ್, ಅವರು ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದೀರಾ ಎಂದು ಅಮಾಯಕರ ಮನೆಗೆ ನುಗ್ಗಿ ಮಂಗಳವಾರ ಬೆಳಿಗ್ಗೆ ಪುಟ್ಟರಾಜು,ಆತನ ಹೆಂಡತಿ ಗೀತಾ,ಇವರ ಮಗ ಸಂಜಯ್ ಹಾಗೂ ಗ್ರಾಮದ ಮುಖಂಡ ದಿನೇಶ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು ಹಲ್ಲೆಗೊಳಗಾದವರೂ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.
ಹಲ್ಲೆಗೆ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಜೆಡಿಎಸ್ ನ ಕೆಲವು ನಾಯಕರ ಚಿತಾವಣೆಯಿಂದ ಆಲೂರು ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ನವರ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿ ಅಡಿಬೈಲು ಗ್ರಾಮದ ಮಹಿಳೆಯರು ಠಾಣೆ ಮುಂದೆ ಧಿಡೀರ್ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಸಂತೋಷ ಪಾಟೀಲ ಮನೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್
ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶ್ರೀ ರಂಗನಾಥಸ್ವಾಮಿ ಉತ್ಸವ ನಡೆಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು ಅದರೆ ಉದ್ದೇಶ ಪೂರ್ವಕವಾಗಿ ಜೆಡಿಎಸ್ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಬೆಂಬಲಿಗರು ಈ ಭಾಗದಲ್ಲಿ ಜೆಡಿಎಸ್ ಹಿಡಿತ ಕೈತಪ್ಪುತ್ತಿದೆ ಎನ್ನುವ ಮನೋಭಾವನೆಯಿಂದ ನಮ್ಮ ಮೇಲೆ ಹಲ್ಲೆ ಮಾಡಿಸಲಾಗುತ್ತಿದೆ ಇದುವರೆವಿಗೂ ನಾವುಗಳು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದೇವು ಜೆಡಿಎಸ್ ನ ಕೆಲವು ಮುಖಂಡರ ಕೀಳು ಮಟ್ಟದ ರಾಜಕೀಯದಿಂದ ನಮ್ಮ ನೆಮ್ಮದಿಯನ್ನು ಕಿತ್ತುಕೊಂಡಿದ್ದಾರೆ ಹಲ್ಲೆ ಮಾಡಿರುವ ವೀಡಿಯೊ ಸಹಿತ ದೂರು ನೀಡಿ ಮೂರು ದಿನಗಳಾದರೂ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಇಷ್ಟೊಂದು ಅವಾಂತರಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಹರಿಹಾಯ್ದರಲ್ಲದೇ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.
ಇತ್ತೀಚಿನ ದಿನಗಳಲ್ಲಿ ಆಲೂರು ತಾಲ್ಲೂಕಿನಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು ಆಲೂರು ಪೊಲೀಸ್ ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಉದಾಹರಣೆಗೆ ಪತ್ರಕರ್ತರ ಮೇಲೆ ಹಲ್ಲೆ,ಕೂಲಿ ಕಾರ್ಮಿಕರ ಮೇಲಿನ ಹಲ್ಲೆ,ರಸ್ತೆಯಲ್ಲಿ ಓಡಾಡುವ ಅಮಾಯಕರ ಮೇಲೆ ಹಲ್ಲೆ,ರಸ್ತೆ ಬದಿಯಲ್ಲಿ ಕ್ಯಾಂಟೀನ್ ಇಟ್ಟು ಜೀವನ ನಡೆಸುವ ಮಹಿಳೆಯರ ಲೈಂಗಿಕ ಕಿರುಕುಳ,ಸೇರಿದಂತೆ ದಿನನಿತ್ಯ ಇಂತಹ ಹತ್ತಾರು ಪ್ರಕರಣಗಳು ನಡೆಯುತ್ತವೆ ಅದರೂ ಪೊಲೀಸ್ ಅಧಿಕಾರಿಗಳು ಅವರ ಮೇಲೆ ಗಟ್ಟಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಇಂತಹ ಅಧಿಕಾರಿಗಳಿಂದ ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಸಾದ್ಯವೇ ಎನ್ನುವುದು ಜನಸಾಮಾನ್ಯರ ಪ್ರಶ್ನೆಯಾಗಿದೆ.
ಪ್ರತಿಭಟನೆಯಲ್ಲಿ ಮಣಿ,ಕುಶಲ,ಪ್ರೇಮ,ಜಾನಕಿ,ಚಂದನ್,ಅಪ್ಪಣ್ಣ,ದೇವರಾಜೇಗೌಡ,ಮೋಹನ್ ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.