ಹೊಯ್ಸಳೇಶ್ವರ ದೇಗುಲಕ್ಕೆ ಅಧಿಕಾರಿಗಳ ಭೇಟಿ


Team Udayavani, May 25, 2019, 3:16 PM IST

hasan-tdy-2..

ವಿಶ್ವ ಪ್ರಸಿದ್ಧ್ದ ಹೊಯ್ಸಳೇಶ್ವರ ದೇವಾಲಯಕ್ಕೆ ಕೇಂದ್ರ ಪುರಾತತ್ವ ಇಲಾಖೆ ಮಹಾ ನಿರ್ದೇಶಕಿ ಉಷಾ ಶರ್ಮಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಳೇಬೀಡು: ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯದಲ್ಲಿ ನೀರಿನ ಸಮಸ್ಯೆ, ದೇವಾಲಯದ ಮಾರ್ಗದರ್ಶಕರ ಸಮಸ್ಯೆ, ಉದ್ಯಾನವನ ಕಳಪೆ ನಿರ್ವಹಣೆ, ನಗರೇಶ್ವರ ದೇವಾಲಯದ ಕಾಪೌಂಡ್‌ ಕಳಪೆ ಕಾಮಗಾರಿ ಸೇರಿದಂತೆ ದೇವಾಲಯ ಹಲವು ಸಮಸ್ಯೆಗಳ ಆಗಾರವಾಗಿದೆ ಎಂದು ಉದಯ ವಾಣಿ ದಿನ ಪತ್ರಿಕೆಯಲ್ಲಿ ವಿಸ್ತೃತವಾಗಿ ವರದಿ ಪ್ರಕಟವಾದ ನಂತರ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಯ್ಸಳೇಶ್ವರ ದೇವಾಲಯ ಸೇರಿದಂತೆ ಹಳೇಬೀಡು ಸುತ್ತಮುತ್ತಲಿನ ರಾಷ್ಟ್ರೀಯ ಸ್ಮಾರಕಗಳ ಸೌಕರ್ಯಗಳ ಕೊರತೆ, ಹಾಗೂ ಕಳಪೆ ನಿರ್ವಹಣೆಯನ್ನು ಗಮನಿಸಿದ ಕೇಂದ್ರ ಪುರಾತತ್ವ ಇಲಾಖೆ ಮಹಾ ನಿರ್ದೇಶಕಿ ಉಷಾ ಶರ್ಮ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳಿಗೆ ತರಾಟೆ: ದೇವಾಲಯದ ಆವರಣವನ್ನು ಸುಮಾರು ಒಂದು ಘಂಟೆಗೂ ಹೆಚ್ಚುಕಾಲ ವೀಕ್ಷಣೆ ಮಾಡಿ ಮಹಾ ನಿರ್ದೇಶಕಿ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದೇ ನಿರ್ಲಕ್ಷ್ಯವಹಿಸಲಾಗಿದೆ ಎಂದು ಕೇಂದ್ರ ಪುರಾತತ್ವ ಇಲಾಖೆಯ ಅಧೀಕ್ಷಕಿ ಮುರ್ತೇಶ್ವರಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತರಾತುರಿಯಲ್ಲಿ ನಡೆದ ಸ್ವಚ್ಛತೆ ಯನ್ನು ಗಮನಿಸಿದ್ದಲ್ಲದೇ ವಸ್ತು ಸಂಗ್ರಹಾಲಯದಲ್ಲಿ ತುಕ್ಕು ಹಿಡಿ ಯುತ್ತಿದ್ದ ಪೋಲೀಸ್‌ ಚೌಕಿ ಬಾಕ್ಸ್‌ನ್ನು ಕಾರ್ಮಿಕರ ಸಹಾಯದಿಂದ ಹೊರಹಾಕಲು ಸೂಚಿಸಿ, ಅದಕ್ಕೆ ಸರಿಯಾದ ರೂಪ ಕೊಟ್ಟು ಪೋಲೀಸರನ್ನು ಭದ್ರತೆಗೆ ನಿಯೋಜಿಸಿ ಎಂದು ತಾಕೀತು ಮಾಡಿದರು.

ಉತ್ಖನನ  ಸ್ಥಳ ಪರಿಶೀಲನೆ: ಹೊಸದಾಗಿ ದೇವಾಲಯದ ಆವರಣದಲ್ಲಿ ನಡೆಯು ತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ, ಸರಿಯಾದ ಸಮಯಕ್ಕೆ ಹಾಗೂ ಯಾವುದೇ ಹೊಯ್ಸಳರ ಕಾಲದ ವಿಗ್ರಹಗಳಿಗೆ ತೊಂದರೆ ಯಾಗದಂತೆ ಸಂರಕ್ಷಣೆ ಮಾಡಬೇಕು ಹಾಗೂ ಪ್ರತಿ ಯೊಂದು ಉತ್ಖನದ ಮಾಹಿತಿ ಯನ್ನು ಸಮಯಕ್ಕೆ ಸರಿಯಾಗಿ ತಿಳಿಸುವಂತೆ ವಸ್ತು ಸಂಗ್ರಹಾಲಯದ ಸಂರಕ್ಷಣಾಧಿಕಾರಿ ಅರಾವಜಿ ಅವರಿಗೆ ಸೂಚಿಸಿದರು. ಜೊತೆಗೆ ಈ ಕಾರ್ಯದಲ್ಲಿ ತೊಡಗಿರುವ ಡಿ.ಜಿ. ಕಾರ್ಮಿಕರಿಗೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಸುವಂತೆ ತಿಳಿಸಿದರು.

ದೇವಾಲಯದ ಬಳಿ ಬಾರದ ಡಿ.ಜಿ.: ಪ್ರತಿ ನಿತ್ಯ ದೇವಾಲಯದ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಬರುವ ಸ್ಥಳದಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯಗಳ ಕೊರತೆಗಳಿಗೆ ಅವುಗಳ ಬಗ್ಗೆ ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿ ಉಷಾ ಶರ್ಮ ಅವರಿಗೆ ಗಮನಕ್ಕೆ ತರಲು ಕಾಯುತ್ತಿದ್ದ ಸ್ಥಳೀಯರು ದೇವಾಲಯದ ಮೆಟ್ಟಿಲನ್ನೂ ಹತ್ತದ ಅಧಿಕಾರಿಗಳ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇವಾಲಯ ವಸ್ತು ಸಂಗ್ರಹಾಲಯವನ್ನು ಹೊರತುಪಡಿಸಿ ಮತ್ತೆಲ್ಲೂ ನೀರಿನ ವ್ಯವಸ್ಥೆ ಇಲ್ಲ. ವಿದ್ಯುತ್‌ ದೀಪಗಳು ಉರಿಯದೇ ಹಲವು ವರ್ಷಗಳೇ ಕಳೆದಿವೆ. ದೇವಾಲಯದ ಒಳಭಾಗ ಕತ್ತಲೆಯ ಕೋಣೆಯಂತಾಗಿದೆ. ಸೂಕ್ತ ನಿರ್ವಹಣೆ ಇಲ್ಲದೇ ದೇವಾಲಯದ ಒಳಭಾಗದ ವಿಗ್ರಹಗಳು ಬಿಳಿ ಬಣ್ಣಕ್ಕೆ ತಿರುಗಿವೆ. ದೇವಾಲಯಕ್ಕೆ ಸಂಬಂಧಿಸಿದಂತೆ ಸೂಕ್ತ ನಾಮಫ‌ಲಕಗಳೂ ಇಲ್ಲ ಎಂಬ ಇತ್ಯಾದಿ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಲು ಕಾಯುತ್ತಿದ್ದೆವು ಆದರೆ ಸ್ಮಾರಕಗಳನ್ನೇ ಗಮನಿಸದ ಅಧಿಕಾರಿಗಳಿಗೆ ಮೇಲಧಿಕಾರಿಗಳು ದಾರಿ ತಪ್ಪಿಸಿದ್ದಾರೆ ಎಂದು ಸ್ಥಳೀ ಯರು ತಮ್ಮ ಸಹನೆಯನ್ನು ಹೊರಹಾಕಿದರು

ವ್ಯವಸ್ಥೆ ಸುಧಾರಣೆಗೆ ಕ್ರಮ: ಪ್ರಾಚ್ಯವಸ್ತು ಇಲಾಖೆ ಅಧೀನದಲ್ಲಿರುವ ಎಲ್ಲಾ ಸ್ಮಾರಕಗಳ ರಕ್ಷಣೆ ಹಾಗೂ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ ಕೆಳ ಹಂತದಿಂದ ಯೋಜನೆ ಗಳನ್ನು ತಯಾರಿಸಿ ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಉಷಾ ಶರ್ಮ ಹೇಳಿದರು.

ಹೇಬೀಡು ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀಲ ನಕ್ಷೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿ, ಇದಕ್ಕೆ ಸಂಬಂದಿಸಿ ದಂತೆ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಇಲಾಖೆ ಅಧಿಕಾರಿ ಶಿವಲಿಂಗಪ್ಪ ಕುಂಬಾರ್‌, ಪುರಾತತ್ವ ಸಂರಕ್ಷಣಾಧಿಕಾರಿ ಅರಾವಜಿ, ಸಹಾಯಕ ಸಂರಕ್ಷಣಾಧಿಕಾರಿ ಎಲ್.ಬಿ. ಕಾಮತ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.