ಸ್ವಯಂಪ್ರೇರಿತ ಹಾಫ್ ಲಾಕ್ಡೌನ್
Team Udayavani, Jul 7, 2020, 7:07 AM IST
ಸಕಲೇಶಪುರ: ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಿತರಾಗಿ ಹಾಫ್ ಲಾಕ್ ಡೌನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು. ಸೋಮವಾರ ಪಟ್ಟಣದ ಪುರಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ವರ್ತಕರ ಸಭೆಯಲ್ಲಿ ಮಾತನಾಡಿದರು.
ಹಾಸನ ಸೇರಿದಂತೆ ಪಕ್ಕದ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿದೆ. ತಾಲೂಕಿನಲ್ಲೂ ಸಹ ಸುಮಾರು 3 ಪ್ರಕರಣಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಾರದ 6ದಿನ ಮುಂಜಾನೆ 7ರಿಂದ ಮಧ್ಯಾಹ್ನ 3ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಭಾನುವಾರ ಸರ್ಕಾರದ ಆದೇಶದಂತೆ ಸಂಪೂರ್ಣ ಲಾಕ್ಡೌನ್ ಇರುತ್ತದೆ.
ಮಧ್ಯಾಹ್ನ 3 ಗಂಟೆ ನಂತರ ಅಗತ್ಯ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ ಎಂದರು. ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಮಾತನಾಡಿ, ಕೋವಿಡ್ 19 ನಿಯಂತ್ರಣಕ್ಕೆ ವರ್ತಕರು ಸ್ವಯಂ ಪ್ರೇರಿತವಾಗಿ ಹಾಫ್ ಲಾಕ್ಡೌನ್ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು. ವರ್ತಕರು ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಮತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ವರ್ತಕರ ಸಂಘದ ಅಧ್ಯಕ್ಷ ಹರೀಶ್, ತಹಶೀಲ್ದಾರ್ ಮಂಜುನಾಥ್, ತಾಪಂ ಇಒ ಹರೀಶ್ , ಡಿವೈಎಸ್ಪಿ ಗೋಪಿ, ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್, ಪುರಸಭಾ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ತಾ ಪಂ ಸದಸ್ಯ ಯಡೇಹಳ್ಳಿ ಮಂಜುನಾಥ, ಟಿಎಪಿಸಿಎಂಎಸ್ ಅಧ್ಯಕ್ಷ ಲೋಹಿತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.