ವಾರ್ಡ್‌ ವಾರು ಮೀಸಲು ನಿಗದಿ ಅವೈಜಾನಿಕ

ಮೀಸಲು ಮರುನಿಗದಿಗೆ ಬಿಜೆಪಿ ನಿಯೋಗದಿಂದ ಎಡೀಸಿ ಕವಿತಾಗೆ ಮನವಿ

Team Udayavani, Feb 3, 2021, 5:53 PM IST

Ward farm reserves

ಬೇಲೂರು: ಪುರಸಭಾ ಚುನಾವಣೆ ಸಂಬಂಧ ವಾರ್ಡ್ ವಾರು ಮೀಸಲು ನಿಗದಿ ಸಮರ್ಪಕವಾಗಿಲ್ಲ, ಹೀಗಾಗಿ ಬದಲಾವಣೆ ಮಾಡುವಂತೆ ತಾಲೂಕು ಬಿಜೆಪಿ ಅಧ್ಯಕ್ಷ ಅಡಗೂರು ಆನಂದ್‌ ನೇತೃತ್ವದ ನಿಯೋಗ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂಗೆ ಮನವಿ ಸಲ್ಲಿಸಿತು.

ಪಟ್ಟಣದ 23 ವಾರ್ಡ್‌ಗೆ ಮೀಸಲು ನಿಗದಿಮಾಡಿ ಸರ್ಕಾರ ರಾಜಸ್ವ ಪತ್ರ ಹೊರಡಿಸಿದ್ದು, ಅದರಲ್ಲಿ ಸಾಕಷ್ಟು ವ್ಯತ್ಯಾಸಗಳಾಗಿವೆ. ಇದರಿಂದ ವೀರಶೈವರು,ಬ್ರಾಹ್ಮಣ,ಒಕ್ಕಲಿಗರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ನಿಯಮಾನುಸಾರ ಶೇ.50 ಮಹಿಳಾ ಮೀಸಲಾತಿ ಇಲ್ಲ. ಪರಿಶಿಷ್ಟ ಜಾತಿ, ವರ್ಗದ ಮತದಾರರು ಇರುವ ವಾರ್ಡ್‌ ಅನ್ನು ಸಾಮಾನ್ಯ ವಾರ್ಡ್‌ ಆಗಿ ಮಾರ್ಪಡಿಸಿದ್ದು, ಸಾಮಾನ್ಯ ವರ್ಗದವರು ಇರುವ ವಾರ್ಡ್‌ಅನ್ನು ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.

ವಾರ್ಡ್‌ 21, 22 ಸಾಮಾನ್ಯ ಮಹಿಳೆಗೆ,ವಾರ್ಡ್‌ 23 ಸಾಮಾನ್ಯ ವರ್ಗಕ್ಕೆ ನಿಗದಿಯಾಗಿದೆ. ಈ ಮೂರೂ ವಾರ್ಡ್‌ಗಳಲ್ಲಿ ಶೇ.80ಕ್ಕಿಂತಲೂ ಹೆಚ್ಚು ಮತದಾರರು ಅಲ್ಪ ಸಂಖ್ಯಾತರಾಗಿದ್ದಾರೆ. ವಾರ್ಡ್‌ 22, 23ರಲ್ಲಿ ಇದುವರೆಗೆ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಅಲ್ಪಸಂಖ್ಯಾತರೇ ಆಗಿದ್ದಾರೆ. ಈ ವಾರ್ಡ್‌ಗಳಿಗೆ ಸಾಮಾನ್ಯ ಮೀಸಲಿನ ಅಗತ್ಯ ಇಲ್ಲದಿದ್ದರೂ ನಿಗದಿಪಡಿಸಲಾಗಿದೆ ಎಂದು ವಿವರಿಸಿದ್ದಾರೆ.

ಈಗಿನ ಮತದಾರರ ಪಟ್ಟಿಯಲ್ಲಿನ ಹೆಸರುಗಳು ಎರಡು ವಾರ್ಡ್‌ಗಳಲ್ಲಿ ಇದೆ. ವಾರ್ಡ್‌ 19ರಲ್ಲಿ 40 ಮತದಾರರ ಹೆಸರು ಬದಲಾವಣೆ ಆಗಿದೆ. ತಂದೆ,ಗಂಡನ ಹೆಸರು ಬೇರೆ ಆಗಿರುವುದು ಇದೆ ಎಂದು ದೂರಿನಲ್ಲಿ ಮುಖಂಡರು ಉಲ್ಲೇಖಿಸಿದ್ದಾರೆ.

ದೂರು ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಮೀಸಲು ನಿಗದಿಯಲ್ಲಿ ಆಗಿರುವ ವ್ಯತ್ಯಾಸ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಗೋಪಾಲಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್‌, ಮಹಿಳಾ ಮೋರ್ಚಾ ಕೋಶಾಧ್ಯಕ್ಷೆ ಸುರಭಿ ರಘು ಗಮನಕ್ಕೆ ತರಲಾಗಿದೆ ಎಂದು ಅಡಗೂರು ಆನಂದ್‌ ತಿಳಿಸಿದರು.

ಇದನ್ನೂ ಓದಿ :ನಾನು ಇರುವವರೆಗೂ ಜಿ.ಟಿ.ಡಿ ಯನ್ನು ವಾಪಸ್ ಜೆಡಿಎಸ್‌ಗೆ ಸೇರಿಸಿಕೊಳ್ಳುವುದಿಲ್ಲ: HDK ಆಕ್ರೋಶ

ನಿಯೋಗದಲ್ಲಿ ನಗರ ಬಿಜೆಪಿ ಅಧ್ಯಕ್ಷ ವಿನಯ್‌, ಎಪಿಎಂಸಿ ಮಾಜಿ ಸದಸ್ಯ ಪೈಂಟ್‌ರವಿ, ಪ್ರಮುಖರಾದ ವಿಷ್ಣು, ಜಯಕುಮಾರ್‌, ವಕೀಲ ಜಯಶಂಕರ್‌, ಜಿತೇಂದ್ರ, ರಂಗನಾಥ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.