ಜಲಮೂಲ ರಕ್ಷಣೆಗೆ ಮುಂದಾಗಿ: ಪರಮೇಶ್
Team Udayavani, Mar 18, 2020, 3:00 AM IST
ಚನ್ನರಾಯಪಟ್ಟಣ: ವಿಶ್ವ ಜಲದಿನ ಹಾಗೂ ವಿಶ್ವ ಭೂದಿನದಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಜಲಮೂಲ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಹಸಿರು ಭೂಮಿ ಪ್ರತಿಷ್ಠಾನ ನಡೆಸಿದ ಜಲ ಸಂಕಷ್ಟದಿಂದ ಜಲ ಸಂಮೃದ್ಧಿಯಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾ.22 ರಂದು ವಿಶ್ವ ಜಲದಿನ ಮಾ.22 ರಂದು ವಿಶ್ವ ಭೂಮಿ ದಿನಾಚರಣೆಯನ್ನು ವಿನೂತನವಾಗಿ ಆಚರಿಸಬೇಕು ಎಂದು ಹೇಳಿದರು.
ಕೆರೆ, ಕಟ್ಟೆ, ಕಲ್ಯಾಣಿ ಸ್ವಚ್ಛಗೊಳಿಸಿ: ತಾಲೂಕು 41 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಯಾಣಿ, ಕಟ್ಟೆಗಳ ಸ್ವಚ್ಛತೆ ಹಾಗೂ ಅಭಿವೃದ್ಧಿ ಪಡಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಕೆರೆ, ಕಲ್ಯಾಣಿಗಳ ಪುನಶ್ಚೇತನಕ್ಕೆ ಗ್ರಾಮಗಳ ಸ್ತ್ರೀಶಕ್ತಿ ಸಂಘಗಳು ಹಾಗೂ ಸಂಘ ಸಂಸ್ಥೆಗಳ ನೆರವು ಪಡೆಯಬೇಕು ಎಂದರು.
ನರೇಗಾ ಸದ್ಬಳಕೆಯಾಗಲಿ: ನರೇಗಾ ಮೂಲಕ ಜನಸಂವರ್ಧನೆಗೆ ಯೋಜನೆ ರೂಪಿಸುವುದರಿಂದ ಕೂಲಿ ಕಾರ್ಮಿಕರಿಗೆ ಹಾಗೂ ಜಾಬ್ ಕಾರ್ಡ್ ಹೊಂದಿರುವವರಿಗೆ ಉದ್ಯೋಗ ಖಾತ್ರಿ ಮೂಲಕ ಕೂಲಿ ಕೆಲಸ ನೀಡಬಹುದಾಗಿದೆ. ಜಿಲ್ಲೆಯಲ್ಲಿ 2.47 ಲಕ್ಷ ಮಂದಿ ಜಾಬ್ ಕಾರ್ಡ್‌ದಾರರಿದ್ದಾರೆ, ಇನ್ನು ಎಂಟರಿಂದ ಒಂಬತ್ತು ಲಕ್ಷ ಮಂದಿ ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆ ವಾರ್ಷಿಕ 100 ದಿವಸ ಕೂಲಿ ಕೊಡಬೇಕಾಗಿದೆ ಎಂದು ಹೇಳಿದರು.
ಹಸಿರುಭೂಮಿ ಪ್ರತಿಷ್ಠಾನದಿಂದ ಬಹುಮಾನ: ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಲ ಮರುಪೂರಣ ಯೋಜನೆಯನ್ನು ಉತ್ತಮವಾಗಿ ಮಾಡಿದರೆ ಹಸಿರು ಭೂಮಿ ಪ್ರತಿಷ್ಠಾನದಿಂದ ಬಹುಮಾನ ನೀಡಲಾಗುವುದು. ಜಿಲ್ಲೆಯ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲೂಕು ನೀರಿನ ಸಮಸ್ಯೆ ಹೊಂದಿದೆ ಅಲ್ಲಿನ ಪಿಡಿಒಗಳು ಉತ್ತಮ ಕೆಲಸ ಮಾಡಿ ನಗದು ಬಹುಮಾನ ಪಡೆಯಲಿ ಎನ್ನುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳನ್ನು ಗುರಿ ಸಾಧನೆಗೆ ಮಾತ್ರ ಸೀಮಿತ ಮಾಡುತ್ತಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿ ಯೋಜನೆಗಳು ನಡೆಯುತ್ತಿಲ್ಲ. ಪ್ರತಿ ಮನೆಯಲ್ಲಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ನೀರಿನ ಬಜೆಟ್ ತಯಾರು ಮಾಡಿಕೊಳ್ಳುವುದು ಸೂಕ್ತ ಇದರಿಂದ ನೀರಿನ ಮಹತ್ವ ಪ್ರತಿಯೊಬ್ಬರಿಗೂ ತಿಳಿಯಲಿದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸಿಇಒ ಮಹೇಶ್, ಯೋಜನಾಧಿಕಾರಿ ನಾಗರಾಜು, ಇಒ ಚಂದ್ರಶೇಖರ್, ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಅಪ್ಪಾಜಿಗೌಡ, ಸಿ.ಎನ್.ಅಶೋಕ, ಗ್ರಾಮ ಪಂಚಾಯಿತಿ ಪಿಡಿಒ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಲ ಜಾಗೃತಿ ಮೂಡಿಸಲು ಕ್ರಮ: ಹಸಿರು ಭೂಮಿ ಪ್ರತಿಷ್ಠಾನ ಸಂಸ್ಥೆಯ ಸಂಸ್ಥಾಪಕಿ ರೂಪಾ ಹಾಸನ ಮಾತನಾಡಿ, ಮಾ.22 ರಿಂದ ಏ.22ರ ವರೆಗೆ ಒಂದು ತಿಂಗಳು ನಿರಂತರವಾಗಿ ಜಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿ ಜಲ ಸಂವರ್ಧನೆಗೆ ಯಾವ ರೀತಿಯಲ್ಲಿ ಕಾರ್ಯೋನ್ಮುಖರಾಗ ಬೇಕು ಎನ್ನುವು ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಲಾಗುತ್ತಿದೆ ಇದನ್ನು ನೋಡಿದ ಪಿಡಿಒಗಳು ಇಂದಿನಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.
ಜಲ ಮರುಪೂರಣ ಮಾಡಿ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾವಿರಾರು ಲೀ. ಲಕ್ಷಾಂತ ಲೀಟರ್ ನೀರನ್ನು ಚರಂಡಿಗೆ ಹರಿಸುತ್ತಿದ್ದೇವೆ. ಗ್ರಾಮಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ನೀರಿಂಗಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡುವ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಇದಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್‌ಗಳು ಸಹಕಾರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.