Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Team Udayavani, Sep 6, 2024, 3:52 PM IST
ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ದಶಕಗಳ ಹಿಂದೆ ಕರಾವಳಿ ಮೂಲದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ಯೋಜನೆಗೆ ಬುನಾದಿ ಹಾಕಿದ್ದರು. ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ಅವರು ಆ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಾಗಿ ವಾಗ್ಧಾನ ನೀಡಿದ್ದರು. ಈಗ ಅದೇ ಕಾಂಗ್ರೆಸ್ ಅವಧಿಯಲ್ಲಿ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ದೊರಕಿದೆ.
ಯೋಜನೆ ಮುಖ್ಯಾಂಶಗಳು:
– 2010ರಲ್ಲಿ ಎತ್ತಿನಹೊಳೆ ಯೋಜನೆ ಪ್ರಸ್ತಾವನೆ
– 2014ರ ಮಾರ್ಚ್‌ನಲ್ಲಿ ಶಂಕುಸ್ಥಾಪನೆ
– 2012ರಲ್ಲಿ 8,323 ಕೋಟಿ ರೂ. ಅನುಮೋದನೆ
– 2022ರಲ್ಲಿ ವೆಚ್ಚ 23,252 ಕೋ.ರೂ.ಗೆ ಪರಿಷ್ಕರಣೆ
– 2027ರ ಮಾರ್ಚ್‌ಗೆ ಯೋಜನೆ ಮುಕ್ತಾಯ ನಿರೀಕ್ಷೆ
ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಶಾಸಕರು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Bengaluru: ಅಶ್ವಿನಿ ಪುನೀತ್‌ಗೆ ನಿಂದನೆ: ಫಿಲ್ಮ್ ಚೇಂಬರ್‌ಗೆ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.