ಯೋಗ ಪ್ರದರ್ಶನ; ಸಾವಿರಾರು ಜನ ಭಾಗಿ
Team Udayavani, Jun 22, 2019, 3:00 AM IST
ಜಿಲ್ಲಾದ್ಯಂತ ವಿಶ್ವಯೋಗ ದಿನಾಚರಣೆಯನ್ನು ಸರ್ಕಾರದ ವಿವಿಧ ಇಲಾಖೆಗಳು, ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಾಸನದ ಜಿಲ್ಲಾ ಕ್ರೀಡಾಂಣದಲ್ಲಿ ಸಾವಿರಾರು ಜನರು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ ಶಾಲಾ, ಕಾಲೇಜುಗಳಲ್ಲೂ ಯೋಗ ದಿನಾಚರಣೆ ನಡೆಯಿತು.
ಹಾಸನ: ಯೋಗ ಎಂಬುದು ಮನುಷ್ಯರ ಆರೋಗ್ಯದ ಸಮತೋಲನಕ್ಕೆ ಮದ್ದು. ದೇಹ ಮತ್ತು ಮನಸ್ಸನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಯೋಗ ಸಹಕಾರಿ ಎಂದು ಶಾಸಕ ಪ್ರೀತಂ ಜೆ.ಗೌಡ ತಿಳಿಸಿದರು.
ಹಾಸನದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗಾ ಸಮಿತಿ, ಕೆಎಂಎಫ್ ಹಾಗೂ ಯೋಗ ತರಬೇತಿ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿ ಮಾತನಾಡಿದರು.
ಕೆಲ ಸಮಯವನ್ನು ಯೋಗಾಭ್ಯಾಸಕ್ಕೆ ಮೀಸಲಿಡುವುದರಿಂದ ದೇಹದ ಆರೋಗ್ಯ ವೃದ್ಧಿಸುವುದಲ್ಲದೇ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಯೋಗ ಮಾಡುವುದರಿಂದ ಆರೋಗ್ಯ ಸುಧಾರಿಸಿ ಜೀವನ ಮಟ್ಟ ಹೆಚ್ಚಿಸಿಕೊಳ್ಳಲು ಸಾಧ್ಯ.
ಹೀಗಾಗಿ ಈಗ ವಿಶ್ವಾದ್ಯಂತ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿ, ಯೋಗವು ಪ್ರಪಂಚಕ್ಕೆ ಭಾರತದ ಕೊಡುಗೆ. ಯೋಗ ಆರೋಗ್ಯಕ್ಕೆ ಉತ್ತಮ ಆಯಾಮ. ಯೋಗ ನಮ್ಮ ಆರೋಗ್ಯ ಸುಧಾರಿಸುವುದಲ್ಲದೆ ಮನಸ್ಸಿನ ಆರೋಗ್ಯ ವೃದ್ಧಿಯಾಗುತ್ತದೆ.
ದೇಶದಲ್ಲಿ ಶಾಂತಿ ನೆಲೆಸಿ ಸಮಾಜದಲ್ಲಿ ಒಂದು ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು. ಯೋಗದಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು. ಯೋಗ ಮೈಗೂಡಿಸಿಕೊಂಡರೆ ನಿರ್ಮಲವಾದ ಮನಸ್ಸು ಹಾಗೂ ಚಿಂತನೆಗಳಲ್ಲೂ ಬದಲಾವಣೆ ಕಾಣಬಹುದು ಎಂದರು.
ಪತಂಜಲಿ ಪರಿವಾರದಿಂದ ಪ್ರಾರಂಭಿಸಿರುವ ವಾರ್ತಾ ಪತ್ರವನ್ನು ಜಿಲ್ಲಾಧಿಕಾರಿ ಅಕ್ರಂಪಾಷಾ ಇದೇ ವೇಳೆ ಬಿಡುಗಡೆಗೊಳಿಸಿದರು. ಬೆಳಗ್ಗೆ 7ಕ್ಕೆ ಪ್ರಾರಂಭವಾದ ಯೋಗದಲ್ಲಿ ಶಾಸಕರು, ಜಿಲ್ಲಾಧಿಕಾರಿ, ಜಿಪಂ ಉಪಾಧ್ಯಕ್ಷರು, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪೊಲೀಸ್ ಇಲಾಖೆ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಿದರು.
ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್‌ಮೂರ್ತಿ ವಿವಿಧ ಆಸನದ ಮಹತ್ವ ಬಗ್ಗೆ ತಿಳಿಸಿದರು. ಪತಂಜಲಿ ಪರಿವಾರದ ಯೋಗ ಪಟುಗಳು ಮತ್ತು ಸಾವಿರಾರು ಜನರು ಒಂದು ಗಂಟೆಗಳ ಕಾಲ ಯೋಗಾಸನದಲ್ಲಿ ಪಾಲ್ಗೊಂಡಿದ್ದರು. ಪತಂಜಲಿ ಯೋಗ ಸಮಿತಿ ಜಿಲ್ಲಾ ಮಾರ್ಗದರ್ಶಕರಾದ ಪ್ರಭಾರಿ ಹರಿಹರಪುರ ಶ್ರೀಧರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಎಸ್ಪಿ ಪ್ರಕಾಶ್‌ಗೌಡ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು, ಅಪರ ಜಿಲ್ಲಾಧಿಕಾರಿ ವೈಶಾಲಿ, ಜಿಪಂ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್, ಹಾಸನ ತಾಪಂ ಅಧ್ಯಕ್ಷ ನಿಂಗೇಗೌಡ, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ಪ್ರಸನ್ನ ಎನ್.ರಾವ್, ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಹಿರಿಯ ಪತ್ರಕರ್ತರಾದ ಆರ್.ಪಿ.ವೆಂಕಟೇಶ್ ಮೂರ್ತಿ, ಉದಯ್ ಕುಮಾರ್, ಸ್ವಾತಂತ್ರ ಹೋರಾಟಗಾರ ಶಿವಣ್ಣ, ಭಾರತ್ ಸ್ವಾಭಿಮಾನ್ ಟ್ರಸ್ಟ್ ಜಿಲ್ಲಾ ಪ್ರಭಾರಿ ಶೇಷಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.