ಹೊಸ ತಾಲೂಕು ಹೆಸರಿಗಷ್ಟೇ ಸೀಮಿತ
ಇನ್ನೂ ತಪ್ಪದ ಹಳೇ ತಾಲೂಕಿನ ಅಲೆದಾಟವಿಶೇಷ ಅನುದಾನ-ಸಿಬ್ಬಂದಿ-ಸ್ವಂತ ಕಟ್ಟಡವೇ ಇಲ್ಲ
Team Udayavani, Sep 28, 2019, 2:47 PM IST
ಎಚ್.ಕೆ. ನಟರಾಜ
ಹಾವೇರಿ: ಕಾಯಂ ಸಿಬ್ಬಂದಿಗಳಿಲ್ಲ. ಕಚೇರಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಜನರು ಸರ್ಕಾರಿ ಕೆಲಸಗಳಿಗೆ ಹಳೆ ತಾಲೂಕು ಕೇಂದ್ರಕ್ಕೆ ಅಲೆದಾಡುವುದು ತಪ್ಪಿಲ್ಲ-ಇದು ಜಿಲ್ಲೆಯಲ್ಲಿ ರಚನೆಯಾದ ಹೊಸ ತಾಲೂಕು ರಟ್ಟಿಹಳ್ಳಿಯ ದುಸ್ಥಿತಿ. ರಟ್ಟಿಹಳ್ಳಿ ತಾಲೂಕು ರಚನೆಯಾಗಿ ಒಂದೂವರೆ ವರ್ಷ ಕಳೆದರೂ ಜನರು ಮಾತ್ರ ಇನ್ನೂ ಹಳೆ ತಾಲೂಕು ಕೇಂದ್ರ ಹಿರೇಕೆರೂರಿಗೆ ಅಲೆದಾಡುತ್ತಲೇ ಇದ್ದಾರೆ.
ಕಂದಾಯ ಇಲಾಖೆ ಕೆಲಸ ಹೊರತುಪಡಿಸಿದರೆ ಉಳಿದೆಲ್ಲ ಕಾರ್ಯಗಳಿಗೆ ಜನರು ಹಿರೇಕೆರೂರನ್ನೇ ಅವಲಂಬಿಸಿದ್ದು ಹೊಸ ತಾಲೂಕು ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಿಲ್ಲ. ಹೊಸ ತಾಲೂಕು ಘೋಷಣೆಯಾದ ಆರಂಭದಲ್ಲಿ ತಾಲೂಕು ಕೇಂದ್ರದ ಕಚೇರಿಗಳಿಗೆ ರಟ್ಟಿಹಳ್ಳಿಯ ತುಂಗಾ ಮೇಲ್ದಂಡೆ ಯೋಜನೆಯ 36 ಕಟ್ಟಡಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಇಲ್ಲಿ ಇಲಾಖಾ ಕಾರ್ಯಾ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಇಲ್ಲಿ ತಹಸೀಲ್ದಾರ್ ಕಚೇರಿ ಹಾಗೂ ಹೆಸ್ಕಾಂ ಕಚೇರಿ ಮಾತ್ರ ಕಾರ್ಯಾರಂಭಿಸಿದ್ದು ಉಳಿದ ಯಾವುದೇ ಕಚೇರಿ ತನ್ನ ಕಾರ್ಯವನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿಲ್ಲ. ಕೆಲವು ಕಟ್ಟಡಗಳಿಗೆ ಕಚೇರಿಯ ನಾಮಫಲಕಗಳನ್ನು ಬರೆಸಲಾಗಿದೆಯಾದರೂ ಅಲ್ಲಿ ಯಾವುದೇ ಸಿಬ್ಬಂದಿ ನೇಮಕವಾಗದೆ ಕಚೇರಿ ಕಾರ್ಯಗಳು ಶುರುವಾಗಿಲ್ಲ. ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಸಮಾಜ ಕಲ್ಯಾಣ ಇಲಾಖೆ, ಉಪನೋಂದಣಾಧಿಕಾರಿ ಕಚೇರಿ, ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿ ಸೇರಿದಂತೆ ಇನ್ನಿತರ ಕಚೇರಿ ಹೆಸರಿನ ಫಲಕಗಳನ್ನು ಕಟ್ಟಡಗಳಿಗೆ ಬರೆಯಿಸಲಾಗಿದೆ. ಆದರೆ, ಆ ಕಟ್ಟಡಗಳಿಗೆ ಯಾವ ಅಧಿಕಾರಿ, ಸಿಬ್ಬಂದಿಯೂ ಬಂದಿಲ್ಲ; ಕೆಲಸವೂ
ಆರಂಭಿಸಿಲ್ಲ.
ಹೊಸ ರಟ್ಟಿಹಳ್ಳಿ ತಾಲೂಕು 110975 ಜನಸಂಖ್ಯೆ ಹೊಂದಿದ್ದು 63 ಹಳ್ಳಿಗಳನ್ನು ಒಳಗೊಂಡಿದೆ. ಭೂದಾಖಲೆಗಳ ವಿಂಗಡಣೆ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಆದರೆ, ಕಂದಾಯ ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳ ದಾಖಲೆ ವಿಂಗಡಣೆ ಇನ್ನೂ ಮುಗಿದಿಲ್ಲ. ಹೀಗಾಗಿ ಜನರು ಹಿಂದಿನ ಹಿರೇಕೆರೂರು ತಾಲೂಕು ಕೇಂದ್ರಕ್ಕೆ ಹೋಗಿಯೇ ಸರ್ಕಾರಿ ಸೇವೆ, ಸೌಲಭ್ಯ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.
ವಿಶೇಷ ಅನುದಾನವಿಲ್ಲ: ನೂತನ ರಟ್ಟಿಹಳ್ಳಿ ತಾಲೂಕಿನ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಿಗಾಗಿ ಪ್ರತ್ಯೇಕ ಅನುದಾನ ಬರುತ್ತಿದೆ. ಆದರೆ, ನೂತನವಾಗಿ ರಚನೆಗೊಂಡ ತಾಲೂಕಿನ ಮೂಲಭೂತ ಅಭಿವೃದ್ಧಿಗಾಗಿ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಸರ್ಕಾರದಿಂದ 10 ಕೋಟಿ ರೂ. ಅನುಮೋದನೆ ಸಿಕ್ಕಿದೆಯಾದರೂ ಅನುದಾನ ಇನ್ನೂ ಬಂದಿಲ್ಲ; ಟೆಂಡರ್ ಪ್ರಕ್ರಿಯೆಯೂ ಆರಂಭವಾಗಿಲ್ಲ. ಹೀಗಾಗಿ ಎಲ್ಲ ಇಲಾಖೆಗಳು ಸ್ವಂತ ಕಟ್ಟಡದ ಸಮಸ್ಯೆ ಎದುರಿಸುತ್ತಿವೆ.
ಸಿಬ್ಬಂದಿ ಕೊರತೆ: ನೂತನ ತಾಲೂಕು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಸಿಬ್ಬಂದಿ ಕೊರತೆ ಪ್ರಮುಖವಾಗಿದೆ. ನೂತನ ತಾಲೂಕಿಗಾಗಿ ಬಹುತೇಕ ಎಲ್ಲ ಇಲಾಖೆಗಳಿಗೆ ಪ್ರತ್ಯೇಕ ಹುದ್ದೆಗಳು ಮಂಜೂರಾಗಿವೆ. ಆದರೆ, ಕಾಯಂ ಹುದ್ದೆ ತುಂಬುವ ಕಾರ್ಯ ಮಾತ್ರ ಈವರೆಗೂ ಆಗಿಲ್ಲ. ಹೀಗಾಗಿ ಹೊಸ ತಾಲೂಕಿನಲ್ಲಿ ಕಚೇರಿಗಳು ಇನ್ನೂ ಕಾರ್ಯಾರಂಭಿಸಿಲ್ಲ.
ತಹಸೀಲ್ದಾರ್ ಕಚೇರಿಗೆ ಒಟ್ಟು 17 ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ ಎರಡು ಶಿರಸ್ತೇದಾರ್ ಹುದ್ದೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ತಾತ್ಕಾಲಿಕವಾಗಿವೆ. ಇರುವ ಎರಡು ಶಿರಸ್ತೇದಾರ್ ಹುದ್ದೆಗಳಲ್ಲಿ ಎರಡೂ ಖಾಲಿಯಿದ್ದು, ಒಬ್ಬರು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದು ಉಪತಹಸೀಲ್ದಾರ್ ಹುದ್ದೆ, ಮೂರು ಪ್ರಥಮದರ್ಜೆ ಸಹಾಯಕ ಹುದ್ದೆ, ಒಂದು ಆಹಾರ ನಿರೀಕ್ಷಕರ ಹುದ್ದೆ ಪ್ರಭಾರ ಇದೆ. ದ್ವಿತೀಯ ದರ್ಜೆ ಸಹಾಯಕ ಹುದ್ದೆ ನಾಲ್ಕು ಇದ್ದು ಇದರಲ್ಲಿ ಒಬ್ಬರು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಒಟ್ಟಾರೆ ಹೊಸ ತಾಲೂಕು ಘೋಷಿಸಿದ ಬಳಿಕ ಸರ್ಕಾರ ಸಮಗ್ರ ಅಭಿವೃದ್ಧಿಯತ್ತ ಗಮನಹರಿಸಿಲ್ಲ. ಹೀಗಾಗಿ ರಟ್ಟಿಹಳ್ಳಿ ಪೂರ್ಣ ಪ್ರಮಾಣದಲ್ಲಿ ತಾಲೂಕಾಗಿ ಕಾರ್ಯನಿರ್ವಹಿಸುವಲ್ಲಿ ಹಿಂದೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.