ಗಣಿತ ಪರೀಕ್ಷೆಗೆ 20979 ವಿದ್ಯಾರ್ಥಿಗಳು ಹಾಜರು
Team Udayavani, Jun 28, 2020, 1:50 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,140 ವಿದ್ಯಾರ್ಥಿಗಳಲ್ಲಿ 20,979 ವಿದ್ಯಾರ್ಥಿಗಳು ಹಾಜರಾಗಿದ್ದು 161 ವಿದ್ಯಾರ್ಥಿಗಳು ಗೈರಾಗಿದ್ದರು. 691 ವಲಸೆ ವಿದ್ಯಾರ್ಥಿಗಳಲ್ಲಿ ನಾಲ್ವರು ಗೈರಾಗಿದ್ದರು.
ಕೋವಿಡ್ ಪ್ರಮಾಣಿಕೃತ ಮಾರ್ಗಸೂಚಿಯಂತೆ ಜಿಲ್ಲೆಯ ಎಲ್ಲ 75 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ನೀಡಲಾಯಿತು. ಮಾಸ್ಕ್ ಇಲ್ಲದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಯಿತು. ಕೋವಿಡ್ ಸೋಂಕಿತ ವ್ಯಕ್ತಿಗಳ ಮನೆಯಿರುವ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು, ಅಲ್ಲಿಯ 68 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಜ್ವರ, ನೆಗಡಿ ಇತ್ಯಾದಿ ಅನಾರೋಗ್ಯದಿಂದ ಬಳಲುತ್ತಿದ್ದ ನಾಲ್ವರು ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.