ಕಾರ್ಮಿಕರಿಗಾಗಿ ನಿತ್ಯ 5 ಸಾವಿರ ಲೀ. ಹಾಲು ಪೂರೈಕೆ
Team Udayavani, Apr 4, 2020, 4:47 PM IST
ಹಾವೇರಿ: ಜಿಲ್ಲೆಯ ಕಾರ್ಮಿಕರಿಗಾಗಿ ಜಿಲ್ಲೆಗೆ ಪ್ರತಿನಿತ್ಯ ಐದು ಸಾವಿರ ಲೀಟರ್ ಹಾಲು ಕೆಎಂಎಫ್‌ನಿಂದ ಪೂರೈಕೆಯಾಗುತ್ತಿದ್ದು, ನಗರ ಸ್ಥಳೀಯ ಸಂಸ್ಥೆ, ಕೆಎಂಎಫ್ ಹಾಗೂ ಪಶು ವೈದ್ಯಕೀಯ ಇಲಾಖೆ ಮೂಲಕ ಉಚಿತವಾಗಿ ವಿತರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.
ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಕೊಳಗೇರಿಗಳು, ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೊಳಗೇರಿಗಳು, ಕಟ್ಟಡ ಕಾರ್ಮಿಕರ ವಸತಿ ತಾಣಗಳು ಮತ್ತು ವಲಸಿಗ ಕಾರ್ಮಿಕರಿಗಾಗಿ ಆರಂಭಿಸಿರುವ ಪುನರ್ ವಸತಿ ಶಿಬಿರಗಳಲ್ಲಿ ಕುಟುಂಬವೊಂದಕ್ಕೆ ದಿನ ಒಂದು ಲೀಟರ್ ನಂತೆ ಹಾಲು ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ. ಇಂದಿನಿಂದ ಏ. 14ರವರೆಗೆ ಉಚಿತವಾಗಿ ಸರ್ಕಾರ ಕೆಎಂಎಫ್ ಮೂಲಕ ಹಾಲು ವಿತರಣೆ ಮಾಡಲಿದೆ ಎಂದರು.
ಜಿಲ್ಲೆಯ ಆಯಾ ತಹಶೀಲ್ದಾರ್‌ಗಳಿಂದ ಹಾಗೂ ನಗರಸಭೆ, ಪುರಸಭೆಗಳಿಂದ ಕಾರ್ಮಿಕರ ವಿವರ ಪಡೆದು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕೆಎಂಎಫ್ ಸಹಯೋಗದಲ್ಲಿ ವಿತರಣೆಗೆ ಕ್ರಮವಹಿಸಲು ಸೂಚಿಸಿದರು.
ವಲಸಿಗ ಕಾರ್ಮಿಕರಿಗೆ ವಸತಿ: ಜಿಲ್ಲೆಯಲ್ಲಿ ಹೊರ ರಾಜ್ಯದ 486 ವಲಸಿಗರಿದ್ದು, 153 ಜನರಿಗೆ ಹಾವೇರಿ ತಾಲೂಕಿನ ಹೊಸರಿತ್ತಿ ಗುತ್ತಲ ವಸತಿ ನಿಲಯಗಳು, ಸವಣೂರಿನ ಸಮುದಾಯ ಭವನ ಮತ್ತು ಶಿಗ್ಗಾಂವ ತಾಲೂಕಿನ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಪತ್ರ, ಸೋಪು, ಮಾಸ್ಕ್, ಸ್ಯಾನಿಟೈಸರ್ ಬಾಟಲ್ ಒಳಗೊಂಡ ಕಿಟ್ ಗಳನ್ನು ರೆಡ್‌ಕ್ರಾಸ್ ಸಂಸ್ಥೆ ಮೂಲಕ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಪಡಿತರ: ಜಿಲ್ಲೆಯ 1ರಿಂದ 10ನೇ ತರಗತಿಯ 1,36,590 ಮಕ್ಕಳಿಗೆ 21 ದಿನಗಳ ಮಧ್ಯಾಹ್ನ ಬಿಸಿಯೂಟದ ಬದಲು ಆಹಾರ ಧಾನ್ಯ ವಿತರಿಸಲು 3530.16 ಕ್ವಿಂಟಾಲ್ ಅಕ್ಕಿ ಹಾಗೂ 1765.08 ಕ್ವಿಂಟಾಲ್ ತೊಗರಿ ಬೆಳೆ ವಿತರಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ಹಾನಗಲ್, ಸವಣೂರು ಮತ್ತು ಶಿಗ್ಗಾಂವ ತಾಲೂಕು ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ಆರಂಭಿಸಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಹೊಸ ಸೇರ್ಪಡೆ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Rain: 5 ವಿದ್ಯುತ್ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.