686 ಕ್ವಿಂಟಲ್ ಅಕ್ರಮ ಮೆಕ್ಕೆಜೋಳ ಬೀಜ ವಶ
Team Udayavani, Jun 10, 2021, 6:40 PM IST
ಹಾವೇರಿ: ಕೃಷಿ ಇಲಾಖೆ ಜಿಲ್ಲಾ ಅಧಿಕಾರಿಗಳ ತಂಡ ರಾಣಿಬೆನ್ನೂರ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಶ್ರೀ ಮಾತಾ ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿ ಮೇಲೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು 2.1 ಕೋಟಿ ಮೌಲ್ಯದ ಒಟ್ಟು 686 ಕ್ವಿಂಟಲ್ ಮೆಕ್ಕೆಜೋಳ ಬಿತ್ತನೆ ಬೀಜ ವಶಪಡಿಸಿಕೊಂಡಿದೆ.
ಬುಧವಾರ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ರಾಣಿಬೆನ್ನೂರ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಶ್ರೀ ಮಾತಾ ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿ ಅನಧಿ ಕೃತವಾಗಿ ದಾಸ್ತಾನು ಮಾಡಿದ್ದ 2.1 ಕೋಟಿ ಮೌಲ್ಯದ ಒಟ್ಟು 686 ಕ್ವಿಂಟಲ್ ಮೆಕ್ಕೆಜೋಳ ಬಿತ್ತನೆ ಬೀಜ ವಶಪಡಿಸಿಕೊಂಡು ಸಂಬಂಧಿಸಿದ ದಾಸ್ತಾನುಗಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಮಾರಾಟಗಾರರು ಪರವಾನಗಿ ಇಲ್ಲದೇ ಬಿತ್ತನೆ ಬೀಜ, ರಸಗೊಬ್ಬರ ಮಾಡುವುದು ಕಂಡುಬಂದಲ್ಲಿ ಅಂಥವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಪರವಾನಗಿ ಹೊಂದದೇ ದಾಸ್ತಾನು ಮಳಿಗೆ, ಗೋದಾಮುಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಮಾಡಿದ್ದಲ್ಲಿ ಅಂತಹ ಮಾರಾಟಗಾರರು/ದಾಸ್ತಾನುಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಎಲ್ಲ ಮಾರಾಟಗಾರರು ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಮಾಡಬೇಕು, ಕಡ್ಡಾಯವಾಗಿ ರೈತರಿಗೆ ರಶೀದಿ ನೀಡಬೇಕು, ಅನಧಿಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಅವ ಧಿ ಮುಗಿದ ಕೃಷಿ ಪರಿಕರ ಮಾರುವುದು ಹಾಗೂ ಅನ ಧಿಕೃತವಾಗಿ ಬೀಜ-ರಸಗೊಬ್ಬರ ಪರಿಕರಗಳನ್ನು ದಾಸ್ತಾನು ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ಪರವಾನಗಿ ಅಮಾನತು ಹಾಗೂ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಲಾಗಿದೆ.
ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ರಾಣಿಬೆನ್ನೂರಿನ ಉಪ ಕೃಷಿ ನಿರ್ದೇಶಕರಾದ ಸ್ಫೂರ್ತಿ, ಸಹಾಯಕ ಕೃಷಿ ನಿರ್ದೇಶಕ (ಜಾರಿದಳ-2) ಪ್ರಾಣೇಶ, ಸಹಾಯಕ ಕೃಷಿ ನಿರ್ದೇಶಕ (ಜಾರಿದಳ-1) ನಾರನಗೌಡ, ಸಹಾಯಕ ಕೃಷಿ ನಿರ್ದೇಶಕ (ಕೇಂದ್ರ) ಸುನೀಲ್ ನಾಯ್ಕ, ರಾಣಿಬೆನ್ನೂರು ಸಹಾಯಕ ಕೃಷಿ ನಿರ್ದೇಶಕ ಹಿತೇಂದ್ರ ಗೌಡಪ್ಪಳವರ ಇತರರು ಇದ್ದರು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.