ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಅರಿವು ಅಗತ್ಯ
Team Udayavani, Mar 24, 2021, 3:06 PM IST
ಹಾವೇರಿ: ಇಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿವಿಲ್ಲ. ಯುವ ಸಮೂಹ, ವಿದ್ಯಾರ್ಥಿ ಸಮೂಹಕ್ಕೆ ದೇಶಪ್ರೇಮ, ಸ್ವಾತಂತ್ರ್ಯ ಹೋರಾಟದ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಪಂ ಅಧ್ಯಕ್ಷ ಏಕನಾಥ ಭಾನುವಳ್ಳಿ ಹೇಳಿದರು.
ನಗರದ ಹುತಾತ್ಮ ಮೈಲಾರ ಮಹಾದೇವಪ್ಪನವರ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ 75ನೇ ಭಾರತದ ಸ್ವಾತಂತ್ರ್ಯೊತ್ಸವದಅಮೃತ ಮಹೋತ್ಸವ ಹಾಗೂ ವಿಜಯ ದಿವಸ್, ಕಿಸಾನ ದಿವಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶಾದ್ಯಂತ ಭಾರತ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ. ವರ್ಷಪೂರ್ತಿ ನಡೆಯುವ ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯಕ್ಕಾಗಿ ಮೈಲಾರ ಮಹದೇವಪ್ಪ ಸೇರಿದಂತೆ ನಮ್ಮ ಹಿರಿಯರು ನಡೆಸಿದ ಹೋರಾಟ, ತ್ಯಾಗ, ಬಲಿದಾನದ ಪರಿಚಯವನ್ನು ಯುವ ಪೀಳಿಗೆಗೆ ಮಾಡಿಸಬೇಕು ಎಂದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಭಾರತ ಸ್ವಾತಂತ್ರ್ಯಗಳಿಸಿ 75 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲೂ 75 ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ಬೇರೆ ಬೇರೆ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಾವೇರಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಮೈಲಾರ ಮಹಾದೇವ ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು. ಇಂತಹ ಮಹಾನ್ ವ್ಯಕ್ತಿಗಳ ತ್ಯಾಗ, ಬಲಿದಾನಕ್ಕೆಎಲ್ಲರೂ ತಲೆಬಾಗಬೇಕು. ಮೈಲಾರ ಮಹಾದೇವ ಅವರು ಕ್ವಿಟ್‌ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದು ನಾವು ಹೆಮ್ಮೆಪಡುವ ವಿಷಯವಾಗಿದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರು ಬಲಿದಾನ ಮಾಡಿದ್ದರ ಫಲವಾಗಿ ಇಂದು ನಾವು ಆರಾಮವಾಗಿ ಹಾಗೂ ಸ್ವತ್ಛಂದವಾಗಿ ಹಾರಾಡುತ್ತಿದ್ದೇವೆ. ಆದರೆ ಸ್ವಾತಂತ್ರ್ಯಕ್ಕೆ ಕಾರಣರಾದವರನ್ನು ಮರೆಯುತ್ತಿರುವ ಭಯ ಕಾಡುತ್ತಿದೆ. ನಮ್ಮ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದಬಗ್ಗೆ ತಿಳಿಸಬೇಕಾಗಿದೆ. ಮೈಲಾರ ಮಹದೇವಪ್ಪ ಸೇರಿದಂತೆ ಜಿಲ್ಲೆಯ ಹಲವಾರು ಹೋರಾಟ ಗಾರರನ್ನು ಯಾರೂ ಮರೆಯಬಾರದು. ದೇಶದ ಭದ್ರತೆಗೆ ಹೋರಾಡುವ ಯೋಧರನ್ನು ಹಾಗೂ ರೈತರನ್ನು ಸ್ಮರಿಸಬೇಕು. ನಗರದ ವಿವಿಧ ಬಡಾವಣೆಗಳಿಗೆ, ವೃತ್ತಗಳಿಗೆ ಹಾಗೂಉದ್ಯಾನವನಗಳಿಗೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಇಡಲು ತೀರ್ಮಾನಿಸಲಾಗಿದೆ ಎಂದರು.
ವಿ.ಎಲ್.ತಿಪ್ಪನಗೌಡ್ರ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮೋಟೆ ಬೆನ್ನೂರಿನ ಲಿಂಗಪ್ಪ ಕೃಷ್ಣಪ್ಪ ಕುಲಕರ್ಣಿ ಹಾಗೂ ಹಿರೇಅಣಜಿಯ ಸಿದ್ದಪ್ಪ ಮಲ್ಲಪ್ಪ ಕೊಪ್ಪದ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಕನ್ನಪ್ಪಳವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಮುಖ್ಯ ಯೋಜನಾಧಿಕಾರಿ ನಿರ್ಮಲಾ, ತಹಶೀಲ್ದಾರ್ ಸವದಿ, ಪೌರಾಯುಕ್ತ ಪರಶುರಾಮ ಚಲವಾದಿ ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.