86ನೇ ಸಾಹಿತ್ಯ ಸಮ್ಮೇಳನ: ಸ್ಪರ್ಧಾತ್ಮಕ ವಿಷಯ ಕಲಿಕೆಗೆ ಸಿಗಲಿ ಆದ್ಯತೆ
Team Udayavani, Jan 8, 2023, 6:15 AM IST
ಹಾವೇರಿ: ಉತ್ತರ ಭಾರತದ ವಿಶ್ವವಿದ್ಯಾಲಯ ಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ವಿಷಯಗಳನ್ನು ಅಭ್ಯಸಿಸುವುದರಿಂದ ಅಲ್ಲಿನ ಅಭ್ಯರ್ಥಿಗಳು ಹೆಚ್ಚಾಗಿ ಯುಪಿಎಸ್‌ಸಿ ಪರೀಕ್ಷೆ ಯಲ್ಲಿ ಆಯ್ಕೆಯಾಗುತ್ತಿದ್ದಾರೆ. ಅದರಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲೂ ಸ್ಪರ್ಧಾತ್ಮಕ ವಿಷಯಗಳ ಸೇರ್ಪಡೆಗೆ ಸರ್ಕಾರ ಮುಂದಾ ಗಬೇಕೆಂದು ಕೇಂದ್ರ ಸರ್ಕಾರದ ವರಮಾನ ತೆರಿಗೆ ಇಲಾಖೆ ನಿವೃತ್ತ ಪ್ರಧಾನ ಮುಖ್ಯ ಆಯುಕ್ತ ಕೆ.ಸತ್ಯನಾರಾಯಣ ಹೇಳಿದರು.
ನಗರದಲ್ಲಿ ನಡೆಯುತ್ತಿರುವ 86ನೇ ಸಾಹಿತ್ಯ ಸಮ್ಮೇಳನದ ಶ್ರೀ ಹಾನಗಲ್ಲ ಕುಮಾರ ಶಿವ ಯೋಗಿಗಳ ವೇದಿಕೆಯಲ್ಲಿ ಶನಿವಾರ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉತ್ತರ ಭಾರತದ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸ್ನಾತಕೋತ್ತರ ಪದವಿಗಳ ಅಧ್ಯಯನಕ್ಕೆ ಅಳವಡಿಸಿರುವ ವಿಷಯದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ಅಳವಡಿಕೆಯಾಗಬೇಕು. ಕನ್ನಡ ಐಚ್ಛಿಕ ವಿಷಯದಲ್ಲಿ ಪರೀಕ್ಷೆ ತೆಗೆದುಕೊಂಡರೆ ನಾವುಗಳು ಇತರ ಪ್ರಾದೇಶಿಕ ಭಾಷೆಗಳ ಅಭ್ಯರ್ಥಿಗಳಿಗೆ ಸ್ಪರ್ಧಿಗಳಾಗುತ್ತೇವೆ. ಕನ್ನಡ ಐಚ್ಛಿಕ ವಿಷಯಗಳು ಸುಲಭ ಎಂಬುದು ತಪ್ಪು ಕಲ್ಪನೆ. ಪರೀಕ್ಷಾ ಪ್ರಶ್ನೆಪತ್ರಿಕೆಯಲ್ಲಿ ಎಲ್ಲ ವಲಯಗಳ ಆಳ ಜ್ಞಾನ ಅರಿತವರು ಮಾತ್ರ ಆಯ್ಕೆಯಾಗಬಲ್ಲರು. ಪರೀಕ್ಷೆಯಲ್ಲಿ ಆಯ್ಕೆ ಬಯಸುವ ಅಭ್ಯರ್ಥಿಗಳು ಸಾಹಿತ್ಯ, ಸಂಸ್ಕೃತಿಯ ಜೊತೆ ಜೊತೆಗೆ ಇತಿಹಾಸ, ಪ್ರಸ್ತುತ ವಿದ್ಯಮಾನಗಳ ಸಾಮಾನ್ಯ ಜ್ಞಾನ ಹೊಂದಿರಬೇಕು ಎಂದರು.
ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಐಚ್ಛಿಕ ಕನ್ನಡ ಹಾಗೂ ಶೈಕ್ಷಣಿಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕುರಿತು ಮಹಮ್ಮದ ರಫಿ ಪಾಶಾ ಮಾತನಾಡಿ, ಶೈಕ್ಷಣಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು ಮುಂದೆ ಆಗಾಧ ಸಾಧನೆ ಮಾಡಲು ಸಾಧ್ಯ. ಇಚ್ಛಾಶಕ್ತಿ ಪ್ರಬಲವಾಗಿರಬೇಕು. ಯಾವುದೇ ತೊಂದರೆ ಗಳಿಗೆ ಎದೆಗುಂದದೆ ಮುನ್ನುಗ್ಗುವ ಎದೆಗಾರಿಕೆ ಅಳವಡಿಸಿಕೊಂಡು ಸಾಗಬೇಕು ಎಂದರು.
ಪರೀಕ್ಷೆಗೆ ಕುಳಿತುಕೊಳ್ಳುವವರು ಎಚ್ಚರ ವಾಗಿ ಹಾಗೂ ಜಾಗೃತರಾಗಿ ಸಿದ್ಧತೆ ಮಾಡಿ ಕೊಳ್ಳಬೇಕು. ದುರ್ಬಲರು ಅವಕಾಶಗಳಿಗಾಗಿ ಕಾಯುತ್ತಾರೆ. ಪ್ರಬಲರು ಅವಕಾಶಗಳನ್ನು ಸೃಷ್ಟಿಸುತ್ತಾರೆ. 1986ರಲ್ಲಿ ಕೆಪಿಎಸ್‌ಸಿ ಪರೀಕ್ಷೆ ಯಲ್ಲಿ ಕಡ್ಡಾಯ ಕನ್ನಡ ಪತ್ರಿಕೆ ಜಾರಿಗೆ ತಂದಿದೆ. ಐಬಿಪಿಎಸ್, ಬ್ಯಾಂಕಿಂಗ್ ಪರೀಕ್ಷೆಗಳು ಕನ್ನಡದಲ್ಲಿ ಆಗಬೇಕು. ಇದರಿಂದ ಹೆಚ್ಚು ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯ ವಾಗಲಿವೆ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗ ಳಂತೆ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆಗೆ ಅವಕಾಶ ದೊರೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.