ಆರೋಗ್ಯವಂತ ವ್ಯಕ್ತಿ ದೇಶದ ಸಂಪತ್ತು

ಜಿಲ್ಲೆಯ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಮೇಳ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

Team Udayavani, Apr 22, 2022, 5:01 PM IST

23

ಸವಣೂರು: ಆರೋಗ್ಯವಂತ ವ್ಯಕ್ತಿ ದೇಶದ ಸದೃಢ ಸಂಪತ್ತು. ಆದ್ದರಿಂದ, ಒಂದೇ ಸೂರಿನಡಿ ಜನರಿಗೆ ಆರೋಗ್ಯ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದ ಮೇರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕು ಆಸ್ಪತ್ರೆ ಸವಣೂರ ಹಾಗೂ ಎಸ್‌ಡಿಎಂ ನಾರಾಯಣ ಹಾರ್ಟ್‌ ಸೆಂಟರ್‌ ಧಾರವಾಡ, ಜೆಸಿಐ ನಮ್ಮ ಸವಣೂರು ಸಹಯೋಗದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ರೂಪಾಂತರಿ 4ನೇ ಅಲೆಯೊಂದಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕವಾಗಿದೆ. ತಾಲೂಕಿಗೆ 100 ಹಾಸಿಗೆ ಹೆಚ್ಚುವರಿ ಆಸ್ಪತ್ರೆ ಮಂಜೂರಾಗಿದ್ದು, ಸ್ಥಳ ಗುರುತಿಸಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು. ಎಲ್ಲರಿಗೂ ಆರೋಗ್ಯ ನೀಡುವ ದೃಷ್ಟಿಯಿಂದ, ಆರೋಗ್ಯ ಮೇಳದಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಿದಲ್ಲಿ ಮತ್ತೂಂದು ಬಾರಿ ಆರೋಗ್ಯ ಮೇಳ ಕೈಗೊಳ್ಳಲಾಗುವುದು ಎಂದು ಹೇಳಿದರು.

ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ ಎಚ್‌.ಎಸ್‌. ಮಾತನಾಡಿದರು. ಟಿಎಚ್‌ಒ ಡಾ|ಚಂದ್ರಕಲಾ ಜೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅಧ್ಯಕ್ಷತೆ ವಹಿಸಿದ್ದರು.

ವೀರಯ್ಯ ಸಂಕೀನಮಠ ಹಾಗೂ ಸಂಗಡಿಗರಿಂದ ಹಮ್ಮಿಕೊಳ್ಳುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೇಟಿ ಬಚಾವೋ, ಬೇಟಿ ಪಡಾವೋ ಜನ ಜಾಗೃತಿ ಬೀದಿ ನಾಟಕಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಚಾಲನೆ ನೀಡಿದರು.

ಆರೋಗ್ಯ ಮೇಳದಲ್ಲಿ ವಿವಿಧ ರೋಗಗಳಿಗಾಗಿ 1528 ಮಂದಿ ಚಿಕಿತ್ಸೆ ಪಡೆದರು. ಜೆಸಿಐ ನಮ್ಮ ಸವಣೂರು ಘಟಕ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪೊಲೀಸ್‌ ಸಿಬ್ಬಂದಿ ವಿನಾಯಕ ಚಿನ್ನೂರ 25ನೇ ಬಾರಿ, ಶ್ರೀನಿವಾಸ ವೆಂಕಣ್ಣನವರ 9ನೇ ಬಾರಿ, ಬಿಜೆಪಿ ತಾಲೂಕು ಅಧ್ಯಕ್ಷ ಗಂಗಾಧರ ಬಾಣದ, ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ 19 ಜನರು ರಕ್ತದಾನ ಮಾಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಗಂಗಾಧರ ಬಾಣದ, ತಹಶೀಲ್ದಾರ್‌ ಅನಿಲಕುಮಾರ ಜಿ., ಐಎಂಎ ತಾಲೂಕು ಘಟಕದ ಅಧ್ಯಕ್ಷ ಡಾ|ಪ್ರವೀಣ ಸಿಂಧೂರ, ಜಿಲ್ಲಾ ಮಾನಸಿಕ ತಜ್ಞ ಡಾ|ವಿಜಯಕುಮಾರ ಬಳಿಗಾರ, ತಾಪಂ ಇಒ ಮುನಿಯಪ್ಪ ಪಿ., ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಶಂಕರಗೌಡ ಹಿರೇಗೌಡ್ರ, ಜೆಸಿಐ ನಮ್ಮ ಸವಣೂರು ಘಟಕದ ಅಧ್ಯಕ್ಷ ಪರಶುರಾಮ ಹೊಳಲ, ಪದಾಧಿಕಾರಿಗಳು ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.