ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಎರಡು ತಿಂಗಳು ಕಾಲ ಜಿಲ್ಲೆಯಾದ್ಯಂತ ಈ ಜಾನಪದ ಕ್ರೀಡೆಯಾಗಿ ನಿರಂತರವಾಗಿ ನಡೆಯುತ್ತದೆ

Team Udayavani, Nov 4, 2024, 3:13 PM IST

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

■ ಉದಯವಾಣಿ ಸಮಾಚಾರ
ಹಾವೇರಿ: ಹಾವೇರಿ ರಾಕ್‌ಸ್ಟಾರ್‌, ಅನ್ನದಾತ, ಜನನಾಯಕ, ಘಟಸರ್ಪ, ಇತಿಹಾಸಕಾರ, ಮಿಡಿ ನಾಗರ ಸೇರಿದಂತೆ ಹತ್ತು ಹಲವು ಘಟಾನುಘಟಿಗಳು ಗತ್ತು ಗಮ್ಮತ್ತಿನೊಂದಿಗೆ ಆಖಾಡಕ್ಕಿಳಿದಿದ್ದರು. ಇವರನ್ನು ನೋಡಲೆಂದೇ ಸಾವಿರಾರು ಜನರು ಜಮಾಯಿಸಿದ್ದರು. ಅಖಾಡದಲ್ಲಿ ಇವರ ಓಟ ನೋಡುಗರನ್ನು ರೋಮಾಂಚನಗೊಳಿಸಿತು.

ಅಷ್ಟಕ್ಕೂ ಇವರು ಓಟಗಾರರಲ್ಲ, ಕ್ರೀಡಾಪಟುಗಳೂ ಅಲ್ಲ. ಇವರೆಲ್ಲ ಸ್ಪರ್ಧೆಗೆ ಬಂದಿದ್ದ ಹೋರಿಗಳು(ಎತ್ತುಗಳು).. ಝಗಮಗಿಸುವ ವಸ್ತ್ರಾಲಂಕಾರ, ಹೂ ಹಾರ, ಮಿಂಚುವ ಝರಿ ಹಾರ, ಕೊಡುಗಳಿಗೆ ರಿಬ್ಬನ್‌, ಬಲೂನ್‌ಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಹೋರಿಗಳು ಛಂಗನೆ ಜಿಗಿದು ದಿಕ್ಕೆಟ್ಟು ಓಡಿದಾಗ ಇತ್ತ ನೆರೆದ ಜನರಲ್ಲಿ, ಸಿಳ್ಳೆ ಕೇಕೆ ಹರ್ಷೋದ್ಗಾರ ಮುಗಿಲು
ಮುಟ್ಟುತ್ತಿತ್ತು.

ಇದು ನಗರದ ವೀರಭದ್ರೇಶ್ವರ ದೇವಸ್ಥಾನ ಹತ್ತಿರ ಹಾಗೂ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಬಲಿಪಾಡ್ಯದ ದಿನವಾದ ಶನಿವಾರ ಆಯೋಜಿಸಿದ್ದ ಈ ವರ್ಷದ ಮೊದಲ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕಂಡು ಬಂದ ದೃಶ್ಯ. ಬೆಳಗ್ಗೆಯಿಂದಲೇ ಆರಂಭಗೊಂಡ ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಹೋರಿಗಳು ಪಾಲ್ಗೊಂಡಿದ್ದವು.

ಕರ್ನಾಟಕ ರತ್ನ, ಪವರ್‌, ಕದಂಬ, ಬಲೆಟ್‌, ನಾಗರಹಾವು, ರಾಕಿಬಾಯ್‌, ಹಾವೇರಿ ಡಾನ್‌, ಟೈಗರ್‌, ರೆಬಲ್‌ಸ್ಟಾರ್‌, ಸಾಹಸಸಿಂಹ, ಡಾ|ರಾಜ್‌, ಚಾಮುಂಡಿ ಎಕ್ಸ್‌ಪ್ರೆಸ್‌, ಆಂಬ್ಯುಲೆನ್ಸ್‌, ಕರ್ನಾಟಕ ಎಕ್ಸ್‌ಪ್ರೆಸ್‌ ಹಾವೇರಿ ಕಾ ರಾಜಾ, ಹಾವೇರಿ ಕಾ ಸ್ಟಾರ್‌, ಸೂಪರ್‌, ಡಿಂಗ್‌, ಬಹದ್ದೂರ, ಕರ್ನಾಟಕದ ಹುಲಿ, ಹಾವೇರಿ ಹುಲಿ, ಸುರಂಗ, ಘಟಸರ್ಪ ಸೇರಿದಂತೆ ಹಲವಾರು ನಾಮದಿಂದ ಕರೆಯಲ್ಪಡುತ್ತಿದ್ದ ಈ ಹೋರಿಗಳನ್ನು ಅದರ ಮಾಲೀಕರು ಕೊಬ್ಬರಿ ಹರಿಯುವ ಯುವಕರ ಕೈಗೆ ಸಿಗದಂತೆ ಓಡಿಸುತ್ತಿದ್ದರು.

ಇನ್ನೊಂದೆಡೆ ಕೊಬ್ಬರಿ ಹರಿಯಲು ಯುವಕರು ಹರಸಾಹಸ ಪಡುತ್ತಿದ್ದ ದೃಶ್ಯ ನೋಡಲು ರೋಮಾಂಚನಕಾರಿಯಾಗಿತ್ತು. ಸ್ಪರ್ಧೆಗಿಳಿಸಲು ತಂದಿರುವ ಹೋರಿಗಳ ಕೊರಳಲ್ಲಿ 10-20 ಕೆಜಿಯವರೆಗೂ ಒಣಕೊಬ್ಬರಿಯ ಹಾರಗಳನ್ನು ಹಾಕಲಾಗಿತ್ತು. ಕೊರಳಲ್ಲಿರುವ ಈ ಕೊಬ್ಬರಿ ಹಾರವನ್ನು ಸಾಹಸಮಯವಾಗಿ ಕಿತ್ತುಕೊಂಡರೆ ಆ ಹೋರಿಯನ್ನು ಆ ಯುವಕ ಬೆದರಿಸಿದಂತೆ. ವಿಶಿಷ್ಟವಾಗಿ ಅದ್ಧೂರಿಯಾಗಿ ಅಲಂಕೃತ, ಕೆಜಿಗಟ್ಟಲೇ ಒಣಕೊಬ್ಬರಿ ಹಾರ ಹಾಕಿಕೊಂಡಿರುವ ಹೋರಿ, ಯಾರ ಕೈಗೂ
ಸಿಗದೇ ಛಂಗನೇ ಜಿಗಿದು…ಭರ್ರನೇ ಓಡಿದಾಗ ಅದರ ಮಾಲೀಕ ರೈತನಿಗಾಗುವ ಸಂತಸ ಅಷ್ಟಿಷ್ಟಲ್ಲ.

ಶೌರ್ಯದ ಪ್ರತೀಕವಾಗಿ ಬೆದರಿಸುವ ಕೊಬ್ಬರಿ ಹೋರಿ ಸ್ಪರ್ಧೆ ಅಷ್ಟೇ ಅಪಾಯಕಾರಿ ಆಟವೂ ಆಗಿದೆ. ಆದರೂ ದೀಪಾವಳಿ ಪಾಡ್ಯದಿಂದ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಯಾವುದೇ ಅಡೆತಡೆಯಿಲ್ಲದೇ ಸಂಭ್ರಮದಿಂದ ನಡೆಯಿತು. ಹೋರಿಯೊಂದಿಗೆ ಕಾದಾಡಿ ಕೊರಳಲ್ಲಿ ಕಟ್ಟಿದ ಕೊಬ್ಬರಿ ಹರಿಯಲು, ಯುವಕರು ಹಿಡಕೋರಿ ಹೋರಿ ಹಿಡಕೋರಿ ಎಂದು ಪ್ರಾಣದ ಹಂಗುದೊರೆದು ಮುಗಿ ಬೀಳುತ್ತಿದ್ದ ದೃಶ್ಯಗಳು ರೋಚಕವಾಗಿದ್ದವು.

ಕೆಲವೊಮ್ಮೆ ಜಾರಿ ಬೀಳುತ್ತಿದ್ದ ಯುವಕರಿಗೆ ಸಣ್ಣಪುಟ್ಟ ಗಾಯಗಳು ಸಾಮಾನ್ಯವಾಗಿದ್ದವು. ಅವುಗಳನ್ನು ಲೆಕ್ಕಿಸದೇ ಹೋರಿ ಹಿಡಿಯಲು ಮತ್ತೆ ಸಜ್ಜಾಗುತ್ತಿದ್ದರು. ಹೋರಿ ಓಡಿಸುವಾಗ ಕಾಲು ಜಾರದಿರಲಿ ಎಂದು ಡಾಂಬರ್‌ ರಸ್ತೆ ಮೇಲೆ ಮಣ್ಣು ಹಾಕಿ ಅಖಾಡ ಸಿದ್ಧಗೊಳಿಸಲಾಗಿತ್ತು. ಸ್ಪರ್ಧೆ ನಡೆಯುವ ರಸ್ತೆ ಇಕ್ಕೆಲಗಳಲ್ಲಿ ಓಡುವ ಹೋರಿಗಳಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಹಾಗೂ ಜನರಿಗೆ ವೀಕ್ಷಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಟ್ಟಿಗೆ ತಡೆಗೋಡೆ ನಿರ್ಮಿಸಲಾಗಿತ್ತು. ಹೋರಿ ಬೆದರಿಸುವ ಕಾರ್ಯಕ್ರಮ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ಹೋರಿಗಳಿಗೆ ವಿಶೇಷ ಅಲಂಕಾರ
ಹೋರಿಗಳಿಗೆ ವಿಶೇಷ ಅಲಂಕಾರ ಮಾಡಿ ಸ್ಪರ್ಧೆಯ ಅಖಾಡದಲ್ಲಿ ಬಿಡಲಾಗುತ್ತದೆ. ಈ ಹೊತ್ತಿನಲ್ಲಿ ಅವುಗಳ ಗತ್ತು ನೋಡುವುದೇ ಎಲ್ಲರಿಗೂ ಎಲ್ಲಿಲ್ಲದ ಸಂತಸ. ಹೋರಿಗಳಿಗೆ ರಂಗು ರಂಗಿನ ಜೂಲಾ ಹಾಕಿ, ಕೊರಳಲ್ಲಿ ಗೆಜ್ಜೆಸರ, ಕೊಂಬುಗಳಿಗೆ ಬಗೆಗೆಯ ಬಲೂನ್‌ ಹಾಗೂ ರಿಬ್ಬನ್‌ ಕಟ್ಟಿ ಸಿಂಗರಿಸಿ, ಕೊರಳಿಗೆ ಒಣ ಕೊಬ್ಬರಿ ಹಾರ ಕಟ್ಟಿ ಅಖಾಡದಲ್ಲಿ ಓಡಿಸಲಾಯಿತು. ಇದರಲ್ಲಿಯ ಕೆಲ ಹೋರಿಗಳನ್ನು ಫೈಲ್ವಾನರು ಹಿಡಿದು ಕೊಬ್ಬರಿ ಹರಿದುಕೊಳ್ಳುವ ಮೂಲಕ ತಮ್ಮ ಚಾಕಚಕ್ಯತೆ ಮೆರೆದರು. ನೋಡುಗರಿಗೆ ಉತ್ತಮ ಮನರಂಜನೆ ನೀಡಿತು.

ಹೋರಿ ಬೆದರಿಸುವ ಸ್ಪರ್ಧೆ ಆರಂಭ..
ನಗರದಲ್ಲಿ ವೀರಭದ್ರೇಶ್ವರ ದೇಗುಲದ ಎದುರು ಆರಂಭವಾದ ಈ ಹೋರಿ ಬೆದರಿಸುವ ಸ್ಪರ್ಧೆ ಎರಡು ತಿಂಗಳು ಕಾಲ ಜಿಲ್ಲೆಯಾದ್ಯಂತ ಈ ಜಾನಪದ ಕ್ರೀಡೆಯಾಗಿ ನಿರಂತರವಾಗಿ ನಡೆಯುತ್ತದೆ. ಬಲಿಪಾಡ್ಯದ ದಿನ ಆರಂಭವಾದ ಸ್ಪರ್ಧೆ ಜಿಲ್ಲೆಯ ವಿವಿಧ ಭಾಗದಲ್ಲಿ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಗಳು ಕೆಲ ಗ್ರಾಮಗಳಲ್ಲಿ ಆಯೋಜಿಸಲಾಗುತ್ತದೆ. ಬಂಗಾರ, ಬೆಳ್ಳಿ, ಬೈಕ್‌ ಸೇರಿದಂತೆ ನಾನಾ ಬಹುಮಾನಗಳನ್ನು ಸ್ಪರ್ಧೆಯಲ್ಲಿ ವಿಜೇತರಿಗೆ ನೀಡಲಾಗುತ್ತದೆ.

ಟಾಪ್ ನ್ಯೂಸ್

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.