ಆಧಾರ್ ತಿದ್ದುಪಡಿ ಅವ್ಯವಸ್ಥೆ ಸರಿಪಡಿಸಲು ಆಗ್ರಹ
Team Udayavani, Jul 16, 2019, 10:35 AM IST
ಹಿರೇಕೆರೂರ: ಆಧಾರ್ ತಿದ್ದುಪಡಿ ಕೇಂದ್ರಗಳಲ್ಲಿನ ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಿರೇಕೆರೂರ: ತಾಲೂಕಿನ ಆಧಾರ್ ತಿದ್ದುಪಡಿ ಕೇಂದ್ರಗಳಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಮತ್ತು ನಿಗದಿ ಮಾಡದೇ ನಿತ್ಯ ಜನತೆಗೆ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ನೋಂದಣಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘಟನೆ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಉಣಕಲ್, ಸಾರ್ವಜನಿಕರು ಆಧಾರ್ ತಿದ್ದುಪಡಿ ಮತ್ತು ನೋಂದಣಿ ಮಾಡಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿನ ಕೆವಿಜಿ ಬ್ಯಾಂಕ್, ಅಂಚೆ ಕಚೇರಿ ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳಲ್ಲಿ ನಿಗದಿತ ಅಂದರೆ 20 ರಿಂದ 40 ಜನತೆಯ ಆಧಾರ್ ತಿದ್ದುಪಡಿ ಮತ್ತು ನೋಂದಣಿ ಮಾಡಲಾಗುತ್ತಿದೆ. ಮತ್ತು ಇಲ್ಲಿ ಮಾಹಿತಿ ಕೊರತೆ ಮತ್ತು ಅವ್ಯವಸ್ಥೆಗಳಿಂದ ಕೂಡಿದ್ದು, ಇದರಿಂದ ಗ್ರಾಮೀಣ ಪ್ರದೇಶಗಳ ಜನತೆ, ಮಕ್ಕಳು, ಮಹಿಳೆಯರು ವೃದ್ಧರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಕೂಡಲೇ ನಿತ್ಯ ಇಂತಿಷ್ಟೇ ಎಂದು ನಿಗದಿ ಮಾಡದೇ ಹೆಚ್ಚು ಜನತೆಯ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ನೋಂದಣಿ ಮಾಡಬೇಕು ಎಂದು ಒತ್ತಾಯಿಸಿದರು.
ಆಹಾರ ಶಿರಸ್ತೇದಾರ ಅರುಣಕುಮಾರ ಕಾರಗಿ ಮನವಿ ಸ್ವೀಕರಿಸಿದರು.
ಸಂಘಟನೆಯ ರಾಜು ಜವಳಿ, ಕುಮಾರ ಬಣಕಾರ, ಮುಜೀಬ್ ಬಳಿಗಾರ, ಅಸ್ಲಾಂ ಮಕಾನ್ದಾರ್, ಮಾರುತಿ ಎಸ್., ಶರತ್ ಪೂಜಾರ, ಚಂದ್ರು ಹಂಪಾಳಿ, ಲಕ್ಷ ್ಮಣ ಗೌಡರ್, ಅಣ್ಣಪ್ಪ ಬಡಿಗೇರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.