ವೋಟರ್ ಐಡಿಗೆ ಆಧಾರ್ ಲಿಂಕ್-ಜಿಲ್ಲೆ ಗೆ 5ನೇ ಸ್ಥಾನ
ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆಯಲ್ಲಿ ಶೇ. 21.41 ಪ್ರಗತಿ ಸಾಧನೆ
Team Udayavani, Aug 19, 2022, 3:44 PM IST
ಹಾವೇರಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಗೆ ಚುನಾವಣಾ ಆಯೋಗ ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಆರಂಭಗೊಂಡಿದ್ದು, ಶೇ. 21.41ರಷ್ಟು ಪ್ರಗತಿ ಸಾಧಿಸಲಾಗಿದೆ.
ಜಿಲ್ಲೆಯಲ್ಲಿ ಆ.1ರಿಂದ ಈ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಇದುವರೆಗೆ 12,70,440 ಮತದಾರರಲ್ಲಿ 2,71,988ರಷ್ಟು ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವ ಮೂಲಕ ರಾಜ್ಯದಲ್ಲಿ ಜಿಲ್ಲೆ ಈ ಕಾರ್ಯದಲ್ಲಿ 5ನೇ ಸ್ಥಾನದಲ್ಲಿದೆ.
ಜಿಲ್ಲೆಯಲ್ಲಿ 6,51,543 ಪುರುಷ, 6,18,718 ಮಹಿಳೆಯರು ಹಾಗೂ 27ಜನರ ತೃತೀಯ ಲಿಂಗಿಗಳು ಸೇರಿ 12,70,440 ಮತದಾರರಿದ್ದಾರೆ. ಈಗಾಗಲೇ ಜಿಲ್ಲೆಯ 18 ವರ್ಷ ಮೇಲ್ಪಟ್ಟ 13,51,232 ಜನರಿಗೆ ಆಧಾರ್ ಕಾರ್ಡ್ ನೀಡಲಾಗಿದೆ. ಎಲ್ಲರೂ ತಮ್ಮ ಆಧಾರ್ ಸಂಖ್ಯೆಗಳನ್ನು ಮತದಾರರ ಚೀಟಿಗೆ ಲಿಂಕ್ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದ್ದಾರೆ.
ಆಧಾರ್ ಇಲ್ಲದವರಿಗೆ ಅನ್ಯ ಕಾರ್ಡ್‌ಗೆ ಅವಕಾಶ: ಈವರೆಗೆ ಆಧಾರ್ ಕಾರ್ಡ್ ಪಡೆಯದವರು ಮತದಾರರ ಚೀಟಿಗೆ ನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್‌ಪುಸ್ತಕಗಳು, ಕಾರ್ಮಿಕ ಮಂತ್ರಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‌ಕಾರ್ಡ್, ಎನ್‌ಪಿಆರ್ ಅಡಿ ಆರ್ ಜಿಐ ಮೂಲಕ ನೀಡಲಾದ ಸ್ಮಾರ್ಟ್‌ಕಾರ್ಡ್, ಇಂಡಿಯನ್ ಪಾಸ್‌ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ, ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆಗಳು ಅಥವಾ ಸಾರ್ವಜನಿಕ ನಿಯಮಿತ ಕಂಪನಿಗಳಿಂದ ಉದ್ಯೋಗಿಗಳಿಗೆ ನೀಡಲಾದ ಭಾವಿಚಿತ್ರರುವ ಸೇವಾ ಗುರುತಿನ ಚೀಟಿ, ಸಂಸತ್, ವಿಧಾನಸಭೆ, ವಿಪ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಮೂಲಕ ನೀಡಲಾದ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಈ ದಾಖಲೆಗಳಲ್ಲಿ ಯಾವುದಾದರೊಂದನ್ನು ಅಪ್ ಲೋಡ್ ಮಾಡಬಹುದು. ಮತದಾರರ ಚೀಟಿಗೆ ಆಧಾರ್ ಜೋಡಣೆ ಕುರಿತು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಹಾಗೂ ದುರ್ಬಲ ಪ್ರದೇಶಗಳಲ್ಲಿ ವಿಶೇಷ ಪ್ರಾಶಸ್ತÂ ನೀಡಲು ಚುನಾವಣಾ ಆಯೋಗ ಸೂಚಿಸಿದೆ.
ಜಿಲ್ಲೆಯ 6ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,470 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರು ತಮ್ಮ ಹೆಸರಿನೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಬೇಕು. ನಮೂನೆ-6ಬಿ ನಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿ ಸಿದ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಅಥವಾ ಸ್ವತಃ ಮತದಾರರೇ ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಮುಖಾಂತರ ಆನ್‌ಲೈನ್ ಮೂಲಕ ಚುನಾವಣಾ ಆಯೋಗದ ನಿಗದಿತ ಸಾಫ್ಟ್‌ವೇರ್‌ಗಳ ಮೂಲಕ ಅರ್ಜಿ ಸಲ್ಲಿಸಿ ಆಧಾರ್ ಸಂಖ್ಯೆ ಜೋಡಣೆಗೆ ಅವಕಾಶ ಕಲ್ಪಿಸಲಾಗಿದೆ.
ಮತದಾರರ ಚೀಟಿಗೆ ಬೀಳಲಿದೆ ಕಡಿವಾಣ
ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಇಲ್ಲದ್ದರಿಂದ ಒಬ್ಬರೇ ಎರಡು ಕಡೆಗಳಲ್ಲಿ ಮತದಾರರ ಚೀಟಿ ಪಡೆಯುವುದಕ್ಕೆ ಕಡಿವಾಣ ಬೀಳಲಿದೆ. ಬಹಳಷ್ಟು ಪ್ರಕರಣಗಳಲ್ಲಿ ಮದುವೆಯಾದ ನಂತರ ಮಹಿಳೆಯದ್ದು ತವರು ಮನೆ ಹಾಗೂ ಪತಿಯ ಮನೆಯಲ್ಲೂ ಮತದಾರರ ಗುರುತಿನ ಚೀಟಿಗಳು ಚಾಲ್ತಿಯಲ್ಲಿರುತ್ತವೆ. ಬಿಎಲ್‌ಒಗಳು ಹುಡುಕಿ ಈಗಾಗಲೇ ಅಂತಹ ಪ್ರಕರಣಗಳನ್ನು ಡಿಲೀಟ್ ಮಾಡುತ್ತಿದ್ದಾರೆ. ಆದರೂ, ಕೆಲವು ಹಾಗೆಯೇ ಉಳಿದುಕೊಂಡಿದ್ದವು. ಆಧಾರ್ ಲಿಂಕ್ ಆದರೆ ಒಂದು ಕಡೆಯಲ್ಲಿ ಮಾತ್ರ ವೋಟರ್ ಐಡಿ ಉಳಿದುಕೊಳ್ಳಲಿದೆ.
ಮತದಾರರ ಗುರುತಿನ ಚೀಟಿ ಹೊಂದಿರುವ ಜಿಲ್ಲೆಯ ಪ್ರತಿಯೊಬ್ಬ ಮತದಾರರು ತಮ್ಮ ವೋಟರ್ ಐಡಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು. ಈ ಕಾರ್ಯ ಯಶಸ್ವಿಯಾಗಲು, ದೋಷರಹಿತ ನಿಖರವಾದ ಮತದಾರರ ಪಟ್ಟಿ ತಯಾರಿಕೆಗೆ ಎಲ್ಲರೂ ಕೈಜೋಡಿಸಬೇಕು. ಮತದಾರರು ನೇರವಾಗಿ ವೆಬ್‌ಸೈಟ್ ಮೂಲಕ ಲಿಂಕ್‌ಗೆ ಅವಕಾಶವಿದೆ. ಇಲ್ಲವೇ, ನಿಮ್ಮ ಮತಗಟ್ಟೆಯ ಬಿಎಲ್‌ಒ ಬಳಿಯೂ ಅರ್ಜಿ ಸಲ್ಲಿಸಿ ಲಿಂಕ್ ಮಾಡಿಸಬಹುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.