ಬ್ಯಾಡಗಿಯಲ್ಲಿ ನಟ ದರ್ಶನ್ ನೋಡಲು ಜನಸಾಗರ
ಮಾಜಿ ಶಾಸಕ ಸುರೇಶಗೌಡ ಪಾಟೀಲಗೆ ಜನ್ಮದಿನದ ಶುಭಾಶಯ ಕೋರಲು ಆಗಮಿಸಿದ್ದ ಚಾಲೆಂಜಿಂಗ್ ಸ್ಟಾರ್
Team Udayavani, Jul 22, 2021, 7:46 PM IST
ಬ್ಯಾಡಗಿ: ಪಟ್ಟಣದ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರ ಅತಿಥಿ ಗೃಹಕ್ಕೆ ಖಾಸಗಿ ಭೇಟಿ ನೀಡಿದ್ದ ಚಿತ್ರ ನಟ ದರ್ಶನ್ ಅವರನ್ನು ನೋಡಲು ಬುಧವಾರ ಜನಸಾಗರವೇ ಸೇರಿತ್ತು.
ಕಳೆದ ಕೆಲ ದಿನಗಳಿಂದ ವಿವಿಧ ಕಾರಣಗಳಿಗೆ ಸುದ್ದಿಯಲ್ಲಿರುವ ಚಿತ್ರ ನಟ ದರ್ಶನ್ ಕಳೆದ ಸೋಮವಾರ ರಾತ್ರಿ ಪಟ್ಟಣಕ್ಕೆ ಆಗಮಿಸಿ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರಿಗೆ 74ನೇ ಜನ್ಮದಿನದ ಶುಭಾಶಯ ತಿಳಿಸಲು ಬಂದಿದ್ದರು ಎನ್ನಲಾಗಿದೆ.
ನಟ ದರ್ಶನ್ ಅವರು ಬ್ಯಾಡಗಿ ಪಟ್ಟಣಕ್ಕೆ ಗೌಪ್ಯವಾಗಿ ಭೇಟಿ ನೀಡಿದ ಕುರಿತು ಮಾಹಿತಿ ಪಡೆದ ಅಭಿಮಾನಿಗಳು ಮಂಗಳವಾರ ತಡರಾತ್ರಿಯೂ ಗುಮ್ಮನಹಳ್ಳಿ ರಸ್ತೆಯಲ್ಲಿರುವ ಗೆಸ್ಟ್‌ಹೌಸ್ ಬಳಿ ಸೇರಿ ನೆಚ್ಚಿನ ನಟನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರು.
ಅಭಿಮಾನಿಗಳ ಒತ್ತಡಕ್ಕೆ ಮಣಿದು ದರ್ಶನ್ ಕೆಲವರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಬುಧವಾರ ಸಹ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಗೆಸ್ಟ್‌ಹೌಸ್ ಬಳಿ ಸೇರಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಹೊರ ಬಂದ ದರ್ಶನ್ ನೇರವಾಗಿ ಕಾರನ್ನೇರಿ ಸುರೇಶಗೌಡ ಪಾಟೀಲ ಮನೆಗೆ ತೆರಳಿ ಉಪಾಹಾರ ಸೇವಿಸಿದರು. ನಂತರ ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.