ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಸಹಾಯಧನಕ್ಕೆ ಮನವಿ
Team Udayavani, Jul 2, 2020, 2:07 PM IST
ರಾಣಿಬೆನ್ನೂರ: ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಸಹಾಯ ಧನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ರಾಣಿಬೆನ್ನೂರ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ನೂರಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಅವರಿಗೆ ಸಹಾಯಧನ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಶಾಶ್ವತ ಅನುದಾನ ರಹಿತ ಆಡಳಿತ ಮಂಡಳಿಗಳ ಸಂಘದ ಸಂಚಾಲಕ ಯು.ಎಂ. ಗುರುಲಿಂಗಪ್ಪಗೌಡ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಮೇ 20ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಖಾಸಗಿ ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂ ದಿಗಳ ಮೇಲೆ ಕೃಪೆ ತೋರದ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಖಾಸಗಿ ಶಾಲಾ ಶಿಕ್ಷಕರು ಇದೀಗ ಬದುಕಿನ ದಾರಿ ಕಾಣದೇ ತಮ್ಮ ಶಿಕ್ಷಣ ವೃತ್ತಿಯ ಘನತೆ ಗೌರವ ಮರೆತು ಬೀದಿಬದಿಯಲ್ಲಿ ಇಡ್ಲಿ, ವಡೆ, ಚಹಾ, ತರಕಾರಿ ಮತ್ತಿತರೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಂಡು ತಾತ್ಕಾಲಿಕವಾಗಿ ಜೀವನ ಸಾಗಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಶಿಕ್ಷಕರ ವೃತ್ತಿ ಸಮಾಜದಲ್ಲಿ ಅತ್ಯುನ್ನತ ಶ್ರೇಷ್ಠ ವೃತ್ತಿಯಾಗಿದೆ. ದೇಶದ ಭವಿಷ್ಯ, ಅಭಿವೃದ್ಧಿ ಹಾಗೂ ದೇಶದ ಸಂಸ್ಕೃತಿ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ವೃತ್ತಿ ಇದಾಗಿದೆ. ಆದರೆ ಪರಿಸ್ಥಿತಿ ತುಂಬಾ ಹದಗೆಡುತ್ತಲಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗುತ್ತಿರುವ ಘಟನೆಗಳು ಸಹ ಅಲ್ಲಲ್ಲಿ ನಡೆಯುತ್ತಲಿವೆ. ಕೊರೋನಾ ಮಹಾಮಾರಿ ಸಂಬಂಧ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿ ಜನಪರ ಕಾರ್ಯನಿರ್ವಹಿಸಿದೆ. ರಾಜ್ಯದಲ್ಲಿ 2,500 ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2.50 ಲಕ್ಷಕ್ಕೂ ಅಧಿಕ ಶಿಕ್ಷಕರು ತಮ್ಮ ವೃತ್ತಿಯಲ್ಲಿದ್ದಾರೆ. ಅವರಿಗೆ ಕನಿಷ್ಠ ಬದುಕು ಸಾಗಿಸಲು ಕೂಡಲೇ ಸಹಾಯಧನ ಬಿಡುಗಡೆ ಮಾಡಿ ಮಾನವೀಯತೆ ಮೆರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.