ಹಕ್ಕುಪತ್ರಕ್ಕೆ ಆಗ್ರಹಿಸಿ ಡಿಸಿಗೆ ಮನವಿ
Team Udayavani, May 22, 2020, 2:29 PM IST
ಶಿಗ್ಗಾವಿ: ಕಳೆದ 26 ವರ್ಷದಿಂದ ತಾಲೂಕಿನ ಹೆಳವ ತರ್ಲಘಟ್ಟ ಗ್ರಾಮದ ಕಂದಾಯ ಇಲಾಖೆಗೆ ಸೇರಿದ 212 ಎಕರೆ ಜಮೀನನ್ನು ಸಾಗುವಳಿ ಮಾಡುತ್ತಿರುವ ರೈತ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ರೈತ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಕಂದಾಯ ಇಲಾಖೆಯ ಸಂಬಂಧಿತ ಹುಲ್ಲುಗಾವುಲು ಪ್ರದೇಶವಾದ ಈ ಜಮೀನನ್ನು 2004ರ ವರೆಗೆ 26 ವರ್ಷದಿಂದ 80 ರೈತರು ನಿರಂತರ ಸಾಗುವಳಿ ಮಾಡಿದ್ದಾರೆ. ಬಳಕೆ ಬಗ್ಗೆ ಆಕ್ಷೇಪಿಸಿದ ಇಲಾಖೆ ವಿರುದ್ಧ ಧಾರವಾಡ ಉಚ್ಚ ನ್ಯಾಯಾಲಯದ ನ್ಯಾಯದ ಮೊರೆ ಹೋದ ರೈತರು, ನಮಗೆ ಬದುಕಿಗೆ ಯಾವುದೇ ಕೃಷಿ ಭೂಮಿ ಇಲ್ಲ. ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಕೋರಿದ್ದರು. ಮನವಿ ಆಲಿಸಿದ ನ್ಯಾಯಾಲಯವು ಅಕ್ರಮ-ಸಕ್ರಮ ಸಮಿತಿಯಲ್ಲಿ ನಿರ್ಣಯಿಸಿ ರೈತರಿಗೆ ನ್ಯಾಯ ನೀಡುವಂತೆ ಆದೇಶಿಸಿದೆ. ಆದರೆ, ಇಲ್ಲಿವರೆಗೂ ಸಮಿತಿ ರಚನೆಯಾಗಿಲ್ಲ. ರೈತರಿಗೆ ನ್ಯಾಯ ಸಿಕ್ಕಿಲ್ಲ. ಈಗ ಅರಣ್ಯ ಇಲಾಖೆ ಗಿಡ ನೆಡಲು ಮುಂದಾಗುತ್ತಿದೆ. ಇದನ್ನು ತಡೆದು ರೈತರ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.