ಶಾಂತಿ ಕದಡಲು ಯತ್ನಿಸಿದರೆ ಸೂಕ್ತ ಕ್ರಮ
ಡಿಸಿ ಸಂಜಯ ಶೆಟ್ಟೆಣ್ಣನವರ ಎಚ್ಚರಿಕೆ; ವಂದೇ ಮಾತರಂ ಸಂಘದ ಗಣೇಶ ವಿಸರ್ಜನಾ ಕಾರ್ಯಕ್ರಮ ಹಿನ್ನೆಲೆ ಶಾಂತಿಸಭೆ
Team Udayavani, Sep 25, 2022, 4:43 PM IST
ರಾಣಿಬೆನ್ನೂರ: ಹಬ್ಬಗಳ ಆಚರಣೆ ನೆಪದಲ್ಲಿ ಸಮಾಜದಲ್ಲಿ ಶಾಂತಿ ಕದಡಲು ಮುಂದಾಗಿ ಕಾನೂನು ಉಲ್ಲಂಘಿಸಿದರೆ ಅಂತಹವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಎಚ್ಚರಿಕೆ ನೀಡಿದರು.
ನಗರದ ತಾಪಂ ಸಭಾಭವನದಲ್ಲಿ ಸೆ.28 ರಂದು ನಡೆಯಲಿರುವ ವಂದೇ ಮಾತರಂ ಸ್ವಯಂಸೇವಾ ಸಂಘದ ಗಣೇಶ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಶಾಂತಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅದನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಸೆ.20 ರಂದು ಗಣೇಶ ವಿಸರ್ಜನೆ ಸಂದರ್ಭದಲ್ಲಿ ಜರುಗಿದ ಗಲಾಟೆ ನಗರಕ್ಕೆ ಕಪ್ಪು ಚುಕ್ಕೆಯಾಗಿದೆ. ಇಲ್ಲಿಯವರೆಗೂ ನಗರದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೆ.28ರಂದು ನಡೆಯಲಿರುವ ವಂದೇ ಮಾತರಂ ಸ್ವಯಂಸೇವಾ ಸಂಘದ ಗಣೇಶ ವಿಸರ್ಜನೆ ಮೆರವಣಿಗೆಗೆ ಜವಾಬ್ದಾರಿ ಸ್ಥಾನದಲ್ಲಿರುವವರು, ಸಮಿತಿ ಸದಸ್ಯರು, ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ನಗರದ ಪ್ರಮುಖರನ್ನು ಒಳಗೊಂಡ ಗಣೇಶ ವಿಸರ್ಜನೆ ಸಮಿತಿ ರಚಿಸಿಕೊಂಡು ಪೊಲೀಸ್ ಇಲಾಖೆಗೆ ಮುಚ್ಚಳಿಕೆ ಪತ್ರ ಬರೆದುಕೊಡಬೇಕೆಂದರು.
ಎಸ್‌ಪಿ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಎಲ್ಲ ಕಡೆ ಅಲ್ಲಿನ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಗಣೇಶ ವಿಸರ್ಜನಾ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿವೆ. ಇದು ಕೊನೆಯ ಶೋಭಾಯಾತ್ರೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸುತ್ತೋಲೆ ಮತ್ತು ಸರ್ವೋತ್ಛ ನ್ಯಾಯಾಲಯದ ಆದೇಶವಿದೆ. ಸೆ.20ರಂದು ನಡೆದ ಅಹಿತಕರ ಘಟನೆ ಸಲುವಾಗಿ ಇದು ಶಾಂತಿಸಭೆ ಕರೆಯಲಾಗಿದೆ ಎಂದರು.
ಅಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಇದಕ್ಕೆ ಯಾರು ಹೊಣೆ ಇದು ಒಂದು ದಿನಕ್ಕೆ ಸೀಮಿತವಲ್ಲ. ನಗರದಲ್ಲಿ ಎಲ್ಲರಿಗೂ ಶಾಂತಿಯುತ ಜೀವನ ನಡೆಸುವ ಹಕ್ಕಿದೆ. ಜನರ ನೆಮ್ಮದಿ ಹಾಳು ಮಾಡಲು ಯಾರಿಗೂ ಅವಕಾಶವಿಲ್ಲ. ಸೆ.28ರಂದು ನಡೆಯಲಿರುವ ಗಣೇಶ ವಿಸರ್ಜನಾ ಮೆರವಣಿಗೆಯ ಮಾರ್ಗ ನಿಗದಿಪಡಿಸುವ ಸಲುವಾಗಿ ತಹಶೀಲ್ದಾರ್ ಸಮ್ಮುಖದಲ್ಲಿ ವಂದೇ ಮಾತರಂ ಸೇವಾ ಸಂಘದವರು ಮುಚ್ಚಳಿಕೆ ಪತ್ರ ಬರೆದು ಕೊಡಬೇಕೆಂದು ತಿಳಿಸಿದರು.
ಹೆಚ್ಚುವರಿ ಎಸ್‌ಪಿ ವಿಜಯಕುಮಾರ ಸಂತೋಷ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಸದಸ್ಯರಾದ ಪ್ರಕಾಶ ಪೂಜಾರ, ನಾಗರಾಜ ಅಡ್ಮನಿ, ಹುಚ್ಚಪ್ಪ ಮೆಡ್ಲೆàರಿ, ನಾಗರಾಜ ಪವಾರ, ಮಲ್ಲಿಕಾರ್ಜುನ ಅಂಗಡಿ, ನೂರುಲ್ಲಾ ಖಾಜಿ, ಪುಟ್ಟಪ್ಪ ಮರಿಯಮ್ಮನವರ, ಪ್ರಕಾಶ ಪೂಜಾರ, ನಾಗರಾಜ ಅಡ್ಮನಿ, ಮಾಜಿ ಸದಸ್ಯ ರಾಘವೇಂದ್ರ ಚಿನ್ನಿಕಟ್ಟಿ, ಪರಮೇಶ ಗೂಳಣ್ಣನವರ, ಜಮ್ಮಣ್ಣಿ ಅತ್ತಾರ, ವೀರೇಶ ಹೆದ್ದೇರಿ, ಹನುಮಂತ ಕಬ್ಟಾರ ಮಾತನಾಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್ ಶಂಕರ್ ಜಿ.ಎಸ್., ನಗರಸಭೆ ಪೌರಾಯುಕ್ತ ಉದಯಕುಮಾರ ಬಿ.ಟಿ., ಡಿವೈಎಸ್‌ಪಿ ಶ್ರೀಧರ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ತಿಳವಳ್ಳಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.