ಹಂಚಿನಮನಿಯಲ್ಲೀಗ ಆರ್ಟ್‌ಗ್ಯಾಲರಿ
¬ಚಿತ್ರಕಲಾವಿದರಿಗೊಂದು ವೇದಿಕೆ , ಗ್ಯಾಲರಿ ಮಾಡಿ ಕಲಾಪ್ರೀತಿ ಮೆರೆದ ಕರಿಯಪ್ಪ
Team Udayavani, Sep 20, 2019, 1:29 PM IST
ಹಾವೇರಿ: “ನಗರಕ್ಕೊಂದು ಆರ್ಟ್ ಗ್ಯಾಲರಿ ಮಾಡಿಕೊಡಿ’ ಎಂದು ಎರಡು ದಶಕಗಳ ಕಾಲ ಹೋರಾಡಿದರೂ ಸರ್ಕಾರ ಸ್ಪಂದಿಸದೆ ಇದ್ದಾಗ ಕಲಾವಿದರೋರ್ವರು ತನ್ನ ಮನೆಯನ್ನೇ ಆಟ್ ಗ್ಯಾಲರಿ ಮಾಡಿ ಕಲಾವಿದರಿಗೆ ವೇದಿಕೆ ಕಲ್ಪಿಸಿ ಗಮನಸೆಳೆದಿದ್ದಾರೆ.
ಲಕ್ಷಾಂತರ ರೂ. ವೆಚ್ಚ ಮಾಡಿ ತನ್ನ ಮನೆಯಲ್ಲಿಯೇ ಸುಂದರ, ಸುಸಜ್ಜಿತ ಆರ್ಟ್ ಗ್ಯಾಲರಿ ಮಾಡಿ ತನ್ನ ಕಲಾಪ್ರೀತಿ ಮೆರೆದ ಈ ಕಲಾವಿದನ ಹೆಸರು ಕರಿಯಪ್ಪ ಹಂಚಿನಮನಿ. ಇವರು ವೃತ್ತಿಯಲ್ಲಿ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಆಗಿದ್ದರೂ ಪ್ರವೃತ್ತಿಯಲ್ಲಿ ಪ್ರತಿಭಾವಂತ ಚಿತ್ರಕಲಾವಿದ. ಅವರು ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ವಿವಿಧೆಡೆ ತಮ್ಮ ಚಿತ್ರಕಲೆ ಪ್ರದರ್ಶಿಸಿ ಹೆಸರುವಾಸಿಯಾಗಿದ್ದಾರೆ.
ಹಾವೇರಿ ನಗರದಲ್ಲೊಂದು ಸುಸಜ್ಜಿತ ಆರ್ಟ್ ಗ್ಯಾಲರಿ ನಿರ್ಮಾಣ ಆಗಬೇಕು ಎಂದು ಜಿಲ್ಲೆಯ ಕಲಾವಿದರು, ಸಾಹಿತಿಗಳು 25-30
ವರ್ಷಗಳಿಂದಲೂ ಹೋರಾಟ, ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಬೀದಿಯಲ್ಲಿ ಚಿತ್ರಕಲೆ ಬಿಡಿಸಿ, ಬೀದಿಯಲ್ಲಿ ಚಿತ್ರಕಲೆ ಪ್ರದರ್ಶನ ಮಾಡಿ, ರಸ್ತೆ ಮೇಲೆ ಚಿತ್ರ ಬಿಡಿಸಿ ಭಿನ್ನ ವಿಭಿನ್ನವಾಗಿ ಪ್ರತಿಭಟನೆ ಮಾಡಿ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಿದ್ದಾರೆ. ಆದರೆ, ಇದ್ಯಾವುದಕ್ಕೂ ಸರ್ಕಾರ ಈವರೆಗೂ ಸ್ಪಂದಿಸಿಯೇ ಇಲ್ಲ.
“ಹಂಚಿನಮನಿ ಆರ್ಟ್ ಗ್ಯಾಲರಿ’: ಕಲೆ ಪ್ರದರ್ಶನಕ್ಕೆ ಉತ್ತಮ ಗ್ಯಾಲರಿ ವ್ಯವಸ್ಥೆ ಇಲ್ಲದೇ ಚಿತ್ರಕಲಾವಿದರು ಪರದಾಡುವುದನ್ನು ಮನಗಂಡ ಕರಿಯಪ್ಪ ಹಂಚಿನಮನಿ, ನಗರದ ನಂದಿ ಲೇಔಟ್‌ನಲ್ಲಿರುವ ತಮ್ಮ ನೂತನ ಮನೆಯ ಮಹಡಿಯ ಒಂದು ಭಾಗವನ್ನು ಆರ್ಟ್ ಗ್ಯಾಲರಿಗೆ ಮೀಸಲಿಟ್ಟಿದ್ದಾರೆ. ಇದಕ್ಕೆ “ಹಂಚಿನಮನಿ ಆರ್ಟ್ ಗ್ಯಾಲರಿ’ ಎಂದು ಹೆಸರಿಟ್ಟಿದ್ದಾರೆ. ಇಲ್ಲಿ ಚಿತ್ರಕಲೆ ಪ್ರದರ್ಶನಕ್ಕೆ ಬೇಕಾದ ವಿಶೇಷ ವಿದ್ಯುತ್ ವ್ಯವಸ್ಥೆ, ಕಲಾಕೃತಿಗಳ ಪ್ರದರ್ಶನಕ್ಕೆ ಬೇಕಾದ ಹ್ಯಾಂಗರ್ ಸೇರಿದಂತೆ ಕಲಾ ಪ್ರದರ್ಶನಕ್ಕೆ ಬೇಕಾದ ಅಗತ್ಯ ಎಲ್ಲ ವ್ಯವಸ್ಥೆ ಮಾಡಿದ್ದಾರೆ.
ಕಲಾ ಪ್ರದರ್ಶನಕ್ಕೆ ಬಂದ ಕಲಾವಿದರ ವಾಸ್ತವ್ಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿ ವ್ಯವಸ್ಥೆವೂ ಮಾಡಿದ್ದಾರೆ. ಸುಮಾರು 30-35 ಕಲಾಕೃತಿಗಳು ಪ್ರದರ್ಶನ ಮಾಡುವಷ್ಟು ವಿಶಾಲವಾದ ಗ್ಯಾಲರಿ ಇದಾಗಿದ್ದು, ಕಲಾ ಗ್ಯಾಲರಿಗೆ ತಕ್ಕಂತೆ ಜನಪದ ಕಲಾ ಶೈಲಿಯಲ್ಲಿ ಗ್ಯಾಲರಿಯ ಗೋಡೆ, ಬಾಗಿಲು, ಕಿಟಕಿ, ಅಲಂಕಾರ ಸಾಮಗ್ರಿ ಅಳವಡಿಸಿ ತಮ್ಮ ಗ್ಯಾಲರಿ ವಿಶಿಷ್ಟ, ವಿಭಿನ್ನ ಹಾಗೂ ಆಕರ್ಷಣೀಯವನ್ನಾಗಿಸಿದ್ದಾರೆ.
ಮನೆಯೂ ವಿಭಿನ್ನ: ಕರಿಯಪ್ಪ ಹಂಚಿನಮನಿಯರು ಕಟ್ಟಿಸಿದ ನೂತನ ಮನೆ ಕೂಡ ವಿಶಿಷ್ಟವಾಗಿದ್ದು ಮನೆಯೇ ಒಂದು ಸುಂದರ ಕಲಾಕೃತಿಯಂತಿದೆ. ಮನೆಯ ಕಾಂಪೌಂಡ್ ಮೇಲೆ ಜನಪದ ಕಲಾಚಿತ್ರಗಳು, ಗೇಟಿಗೆ ಎತ್ತಿನಗಾಡಿಯ ಚಕ್ರ, ನೈಸರ್ಗಿಕವಾಗಿರುವ ಮರದ ಹಲಗೆಗಳನ್ನು ಕಲಾತ್ಮಕವಾಗಿಟ್ಟು ಜೋಡಿಸಿರುವ ಬಾಗಿಲು-ಚೌಕಟ್ಟು ಹೀಗೆ ಎಲ್ಲವೂ ವಿಶಿಷ್ಟವಾಗಿದ್ದು ಒಟ್ಟಾರೆ ಮನೆ ಅಕ್ಷರಶಃ “ಕಲಾ ಮನೆ’ಯಂತಾಗಿದೆ. ಇದು ಕರಿಯಪ್ಪ ಅವರಿಗೆ ಕಲೆ ಮೇಲಿನ ಪ್ರೀತಿ, ಅಭಿಮಾನದ ಸಂಕೇತದಂತಿದೆ.
ಉದ್ಘಾಟನೆಯೂ ವಿಶೇಷ: ಕರಿಯಪ್ಪ ಹಂಚಿನಮನಿಯವರು ಸೆ. 22ರಂದು ಬೆಳಗ್ಗೆ 10ಗಂಟೆಗೆ “ಹಂಚಿನಮನಿ ಆರ್ಟ್ ಗ್ಯಾಲರಿ’ಯ ಉದ್ಘಾಟನೆ ಇಟ್ಟುಕೊಂಡಿದ್ದು ಇದನ್ನೂ ವಿಶಿಷ್ಟವಾಗಿ ಆಯೋಜಿಸಿಕೊಂಡಿದ್ದಾರೆ. ಅಂದು ರಾಜ್ಯಾದ್ಯಂತದಿಂದ 50ಕ್ಕೂ ಹೆಚ್ಚು ಕಲಾವಿದರನ್ನು ಕರೆಸಿ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಶಿಬಿರ ಏರ್ಪಡಿಸಿದ್ದಾರೆ. ಉದ್ಘಾಟನೆಯ ದಿನ ನೂತನ ಗ್ಯಾಲರಿಯಲ್ಲಿ ಹಂಚಿನಮನಿಯವರ ಕಲಾಕೃತಿಗಳು ರಾರಾಜಿಸಿದರೆ, ಮರುದಿನ ಉಳಿದ ಕಲಾವಿದರ ಕಲಾಕೃತಿಗಳು ಗ್ಯಾಲರಿಯಲ್ಲಿ ಪ್ರದರ್ಶನಗೊಳ್ಳಲಿವೆ. ಒಟ್ಟಾರೆ “ಹಂಚಿನಮನಿ ಆರ್ಟ್ ಗ್ಯಾಲರಿ’ ಚಿತ್ರಕಲಾವಿದರಿಗೆ ಒಂದು ವೇದಿಕೆ ಕಲ್ಪಿಸಿ, ಕಲೆಗೆ ಪ್ರೋತ್ಸಾಹದಾಯಕವಾಗಲಿದೆ ಎಂದು ಅಪೇಕ್ಷಿಸಲಾಗಿದೆ.
-ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.