ಕೆಲಸ ಬಹಿಷ್ಕರಿಸಿ ಪ್ರತಿಭಟನೆ
Team Udayavani, Jul 11, 2020, 4:29 PM IST
ಹಾವೇರಿ: ಆಶಾ ಕಾರ್ಯಕರ್ತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಕೆಲಸ ಬಹಿಷ್ಕರಿಸಿ ಹೋರಾಟ ಆರಂಭಿಸಿದ್ದು ಶುಕ್ರವಾರ ತಾಲೂಕಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ, ತಹಶೀಲ್ದಾರ್, ರಾಜ್ಯದ ಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಈ ಜನವರಿಯಿಂದ ಸುಮಾರು 10 ಮನವಿ ಪತ್ರವನ್ನು ಸಲ್ಲಿಸಿದ್ದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಇಂದಿನಿಂದ ಕೆಲಸ ಬಹಿಷ್ಕರಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ಒಂದೇ ನಿಶ್ಚಿತ ಗೌರವಧನ 12,000 ರೂ. ನೀಡಬೇಕು. ಮಾಸ್ಕ್-ಸ್ಯಾನಿಟೈಸರ್ ಗಳಂತಹ ಸುರಕ್ಷಾ ಸಾಧನಗಳೂ ಎಲ್ಲರಿಗೂ ಸರಿಯಾಗಿ ಸಿಕ್ಕಿಲ್ಲ. ಇದರಿಂದಾಗಿ ಜಿಲ್ಲೆಯ 17 ಜನ ಆಶಾ ಕಾರ್ಯಕರ್ತೆಯರಿಗೆ ಸೋಂಕು ತಗುಲಿದೆ. ಇದಕ್ಕೆ ಸರ್ಕಾರವೇ ಹೊಣೆ. ಎಲ್ಲಾ ರಕ್ಷಣಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕು. ಸರ್ಕಾರ ಸ್ಪಂದಿಸುವವರೆಗೂ ನಮ್ಮ ಕೆಲಸ ಬಹಿಷ್ಕಾರದ ನಿರ್ಧಾರ ಅಚಲ ಎಂದು ಆಶಾ ಕಾರ್ಯಕರ್ತರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.