ಜಾನಪದ ವಿಶ್ವವಿದ್ಯಾಲಯ ವಿಶ್ವಮಟ್ಟಕ್ಕೆ ತಲುಪಿಸಲು ಯತ್ನ

ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿವಿ ಕುಲಪತಿ ಪ್ರೊ|ಸಿ.ಟಿ. ಗುರುಪ್ರಸಾದ್‌ ಅಭಿಮತ

Team Udayavani, Jun 5, 2022, 2:51 PM IST

9

ಶಿಗ್ಗಾವಿ: ಜಾನಪದ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾದದ್ದಲ್ಲ. ಅದರ ವ್ಯಾಪ್ತಿ ವಿಸ್ತಾರವಾಗಿದ್ದು, ಇಷ್ಟೊತ್ತಿಗೆ ಜಾನಪದ ವಿಶ್ವವಿದ್ಯಾಲಯ ವಿಶ್ವವ್ಯಾಪಿ ಯಾಗಬೇಕಾಗಿತ್ತು. ಆದರೆ, ಹಲವಾರು ಕೊರತೆಗಳಿಂದ ನಾವು ನೂ ಆ ಮಟ್ಟಕ್ಕೆ ತಲುಪಲು ಸಾಧ್ಯವಾಗಿಲ್ಲ. ಬರುವ ದಿನಗಳಲ್ಲಿ ಜಾನಪದ ವಿವಿಯನ್ನು ವಿಶ್ವಮಟ್ಟಕ್ಕೆ ತಲುಪಿಸಲು ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಪ್ರೊ|ಸಿ.ಟಿ. ಗುರುಪ್ರಸಾದ್‌ ಹೇಳಿದರು.

ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವವಿದ್ಯಾಲಯ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳು ಇದನ್ನು ಅರಿತು ನಡೆದಾಗ ನಾವು ಯಶಸ್ವಿಯಾಗುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳೇ ಇದರ ಕೇಂದ್ರ ಬಿಂಧು. ವಿವಿಯ ಕಾರ್ಯವನ್ನು ವಿಸ್ತರಿಸುವ ವಕ್ತಾರರು ನೀವು. ಆದ್ದರಿಂದ, ವಿಶ್ವವಿದ್ಯಾಲಯದಲ್ಲಿ ನಡೆಯುವ ಚಟುವಟಿಕೆಗಳಲ್ಲಿ ನೀವು ಸಕ್ರಿಯವಾಗಿ ಭಾಗವಹಿಸಬೇಕೆಂದು ಕಿವಿಮಾತು ಹೇಳಿದರು.

ಈಗಾಗಲೇ ವಿಶ್ವವಿದ್ಯಾಲಯದಲ್ಲಿ ಇರುವ ಮೂಲಭೂತ ಸೌಕರ್ಯಗಳ, ಕುಂದುಕೊರತೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ. ಆದಷ್ಟು ಬೇಗ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ. ವಿದ್ಯಾರ್ಥಿಗಳಿಗೆ ಈಗಾಗಲೇ ತರಗತಿಗಳಿಗೆ ಬರಲು ಬಸ್‌ ವ್ಯವಸ್ಥೆಯ ಕುರಿತು ಜಿಲ್ಲಾ ಧಿಕಾರಿಗಳ ಜೊತೆ ಚರ್ಚಿಸಿ ಸಾರಿಗೆ ಇಲಾಖೆ ಅಧಿಕಾರಿಗಳು ಹಾಜರಿದ್ದು ಬಸ್‌ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ವಿಶ್ವವಿದ್ಯಾಲಯದ ಆವರಣಕ್ಕೆ ಬರಲು ರಸ್ತೆ ಸಂಪರ್ಕ ಸಮಸ್ಯೆ ಇತ್ತು. ಈಗಾಗಲೇ ರಸ್ತೆ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ಇನ್ನು ಉತ್ತಮ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ನಮ್ಮ ವಿಶ್ವವಿದ್ಯಾಲಯಕ್ಕೆ ವಿಶಿಷ್ಟವಾದ ಅಸ್ಮಿತೆ ಇದೆ. ಇಲ್ಲಿ ಕೌಶಲ್ಯಾಭಿವೃದ್ಧಿಗೆ ಮತ್ತು ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಇಂತಹ ಕಲಿಕೆಗೆ ಪೂರಕವಾದ ಕೋರ್ಸ್‌ಗಳಿವೆ. ಅವುಗಳ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು.

ಇಲ್ಲಿ ನುರಿತ, ಪರಿಣಿತ ಯುವ ಅಧ್ಯಾಪಕರ ತಂಡವಿದೆ. ಹಾಗಾಗಿ, ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗಳಿಗೆ ಕಡ್ಡಾಯವಾಗಿ ಹಾಜರಿದ್ದು, ಆ ಜ್ಞಾನ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬೇಕು ಎನ್ನುವ ಹಲವಾರು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚಿಸಿ ಇದ್ದ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೌಲ್ಯಮಾಪನ ಕುಲಸಚಿವ ಪ್ರೊ|ಎನ್‌.ಎಂ.ಸಾಲಿ ಮಾತನಾಡಿ, ವಿದ್ಯಾರ್ಥಿಗಳಾದವರಿಗೆ ಮೊಟ್ಟ ಮೊದಲು ಶಿಸ್ತು ಬಹಳ ಮುಖ್ಯ. ವಿಶ್ವವಿದ್ಯಾಲಯದಲ್ಲಿ ಅಧಿಕಾರಿಗಳು, ಬೋಧಕರು, ಬೋಧಕೇತರ ಸಿಬ್ಬಂದಿ ಬಗ್ಗೆ ಪೂರ್ವ ಮಾಹಿತಿ ತಿಳಿದುಕೊಳ್ಳುವುದು ಅತಿ ಅವಶ್ಯಕ. ಹಾಗಾಗಿ, ವಿಶ್ವವಿದ್ಯಾಲಯದ ನಿಯಮಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು. ಆದಷ್ಟು ಬೇಗ ವಿಶ್ವವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕುಲಪತಿಗಳ ನೇತ್ರತ್ವದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಕುಲಸಚಿವರಾದ ಷಹಜಾನ್‌ ಮುದಕವಿ ವಿದ್ಯಾರ್ಥಿ ಎನ್‌ಎಸ್‌ಎಸ್‌ ಸಂಯೋಜನಾ ಧಿಕಾರಿ ಡಾ|ಮಲ್ಲಿಕಾರ್ಜುನ ಮಾನ್ಪಡೆ, ಡಾ|ಉತ್ತಮ ಕೆ.ಎಚ್‌. ಹಾಗೂ ಡಾ|ಚಂದ್ರಪ್ಪ ಸೊಬಟಿ ಇದ್ದರು.

ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿಯೇ ಅನೇಕ ಕಾರ್ಯಾಗಾರ, ವಿಚಾರ ಸಂಕಿರಣದಂತಗಳನ್ನು ಆಯೋಜಿಸಿ ಇದರಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳುವ ಹಾಗೆ ಯೋಜನೆ ರೂಪಿಸಲಾಗುವುದು. ಪ್ರೊ|ಸಿ.ಟಿ.ಗುರುಪ್ರಸಾದ್‌, ಕರ್ನಾಟಕ ಜಾನಪದ ವಿವಿ ಕುಲಪತಿ

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.