ಸರಕಾರಿ ಆಸ್ಪತ್ರೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ
Team Udayavani, Dec 19, 2017, 3:00 PM IST
ರಾಣಿಬೆನ್ನೂರ: ಸರ್ಕಾರಿ ಆಸ್ಪತ್ರೆಗಳಿರುವುದೇ ಬಡವರ ಸೇವೆಗಾಗಿ. ಇಲ್ಲಿನ ವೈದ್ಯರು ಜನಸಾಮಾನ್ಯರ ರೋಗಗಳಿಗೆ ಸೂಕ್ತ ಚಿಕಿತ್ಸೆ ನೀಡಿ ರೋಗಿಗಳ ಪ್ರೀತಿ ವಿಶ್ವಾಸ ಗಳಿಸಬೇಕು. ಅಂದಾಗ ಮಾತ್ರ ಆಸ್ಪತ್ರೆಗೆ ಹೆಸರು ಉಳಿಯಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಸಭಾಭವನದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯರ ಕೊರತೆ ಕೇವಲ ಇಲ್ಲಿನ ಸಮಸ್ಯೆಯಲ್ಲ. ಇದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಗಳಾಗಿವೆ. ಹಣ ಕೊಡುತ್ತೇವೆಂದರೂ ವೈದ್ಯರು ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನಸಾಮಾನ್ಯರೂ ಸರ್ಕಾರಿ ಆಸ್ಪತ್ರೆಗೆ ಬರಲು ಸೂಕ್ತ ವ್ಯವಸ್ಥೆ ಇಲ್ಲವೆಂಬ ಕಾರಣಒಡ್ಡಿ ಹಿಂದೇಟು ಹಾಕುವಂತಾಗಿದೆ ಎಂದರು.
ಸಮಿತಿಗೆ ನೇಮಕಗೊಂಡ ನೂತನ ಸದಸ್ಯರು ಇಲ್ಲಿನ ಮೂಲ ಸಮಸ್ಯೆಗಳ ಕಡೆಗೆ ಗಮನಹರಿಸಬೇಕು. ಆಡಳಿತದೊಂದಿಗೆ ಪರಸ್ಪರ ಸಮಾಲೋಚನೆ ನಡೆಸುವುದರ ಮೂಲಕ ಅದರ ಪರಿಹಾರಕ್ಕೆ ಶ್ರಮಿಸಬೇಕು. ಸಾರ್ವಜನಿಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರು ಇದರಲ್ಲಿ ಪಾಲ್ಗೊಳ್ಳಬೇಕಾದ ಅಗತ್ಯವಿದೆ. ಯಾವುದೇ ಮಡಿವಂತಿಕೆ ಇದರಲ್ಲಿ ತೋರಿಸುವ ಅವಶ್ಯಕತೆ ಇಲ್ಲ
ಎಂದರು.
ತಾಪಂ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಉಪಾಧ್ಯಕ್ಷೆ ಚೈತ್ರಾ ಮಾಗನೂರ, ತಹಶೀಲ್ದಾರ ಬಿ. ರಾಮಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ| ರಾಜು ಶಿರೂರ, ಆಡಳಿತ ವೈದ್ಯಾಧಿಕಾರಿ ಡಾ| ಆರ್.ಸಿ. ಪರಮೇಶ್ವರಪ್ಪ, ಡಾ| ಎಸ್. ಎಸ್. ಗಡಾದ, ಶೇರುಖಾನ ಕಾಬೂಲಿ, ಕೃಷ್ಣಪ್ಪ ಕಂಬಳಿ, ಶಿವಾನಂದ ಕನ್ನಪ್ಪಳವರ, ಬಸವರಾಜ ಹುಚಗೊಂಡರ, ಸುರೇಶ ಜಾಡಮಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.