ಪ್ಲಾಸ್ಟಿಕ್ ಬಳಕೆ ನಿಷೇಧ ಜಾಗೃತಿ ಜಾಥಾ
Team Udayavani, Oct 6, 2019, 12:57 PM IST
ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ಶಿರಗಂಬಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಪಂ ಸದಸ್ಯ ಮಹೇಶ ಗುಬ್ಬಿ, ಪ್ರಸ್ತುತ ದಿನದಲ್ಲಿ ನಾವೆಲ್ಲರು ಅತೀ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡಿ, ಎಲ್ಲೆಂದರಲ್ಲಿ ಬೀಸಾಡುವುದರಿಂದ ಫಲವತ್ತಾದ ಮಣ್ಣು ಹಾಗೂ ಕೆರೆ, ನದಿ, ಹಳ್ಳ ಕೊಳ್ಳಗಳನ್ನು ಸೇರುತ್ತಿರುವುದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿ ಬೆಳೆಗಳ ಇಳುವರಿ ಕಡಿಮೆಯಾಗುತ್ತಿದೆ. ಜೀವಜಲ ಕಲುಷಿತಗೊಂಡು ಜಲಚರಗಳು ನಾಶವಾಗುತ್ತಿವೆ.ನಾವೆಲ್ಲರು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಲ್ಲಿಸದಿದ್ದರೆ ಮುಂದಿನ ದಿನದಲ್ಲಿ ಆರೋಗ್ಯವಂತ ಬದುಕಿಗಾಗಿ ಪರದಾಡಬೇಕಾದೀತು ಎಂದು ಎಚ್ಚರಿಸಿದರು.
ಎಸ್‌ಡಿಎಂಸಿ ಸದಸ್ಯರಾದ ಹನುಂತಗೌಡ ಕೆರೂರ, ರಾಜಶೇಖರ ಬಿಸಲೀಹಳ್ಳಿ, ಹಾಲಪ್ಪ ಮಡಿವಾಳರ, ಕರಬಸಪ್ಪ ಬಸಲೀಹಳ್ಳಿ, ರವೀಂದ್ರ ಮುದ್ನಳ್ಳಿ, ಅಶೋಕ ಬಸಲೀಹಳ್ಳಿ ಶಾಲೆ ಮತ್ತು ಗ್ರಾಪಂ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.