ಆಜಾದಿ ಕಿ ರೇಲ್‌ ಗಾಡಿ ಔರ್‌ ಸ್ಟೇಷನ್ಸ್‌ಗೆ ಹಾವೇರಿಯ ರೈಲ್ವೆ ನಿಲ್ದಾಣ ಸೇರ್ಪಡೆ

Team Udayavani, Jul 18, 2022, 5:42 PM IST

24

ಹಾವೇರಿ: ರೈಲ್ವೆ ಸಚಿವಾಲಯ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ 75 ರೈಲ್ವೆ ನಿಲ್ದಾಣಗಳನ್ನು ಗುರುತಿಸಿದ್ದು, ಈ ಪಟ್ಟಿಯಲ್ಲಿ ಹಾವೇರಿಯ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣವೂ ಸ್ಥಾನ ಪಡೆದಿದೆ. ಜತೆಗೆ ನೈಋತ್ಯ ರೈಲ್ವೆ ಮೈಸೂರು ವಿಭಾಗದ ರೈಲುಗಳ ವಿಭಾಗದಲ್ಲಿ “ಟಿಪ್ಪು ಎಕ್ಸ್‌ಪ್ರೆಸ್‌’ ಅನ್ನು ನಾಮನಿರ್ದೇಶನ ಮಾಡಲಾಗಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಜು.18ರಿಂದ 23ರವರೆಗೆ “ಆಜಾದಿ ಕಿ ರೇಲ್‌ ಗಾಡಿ ಔರ್‌ ಸ್ಟೇಷನ್ಸ್‌’ ಕಾರ್ಯಕ್ರಮದ ಸಾಂಪ್ರದಾಯಿಕ ಸಪ್ತಾಹ ಆಚರಿಸಲಿದೆ.

ಇದು 75 ವರ್ಷಗಳ ಸ್ವಾತಂತ್ರ್ಯ ಮತ್ತು ದೇಶದ ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಸ್ಮರಿಸಲು ಭಾರತ ಸರ್ಕಾರದ “ಆಜಾದಿ ಕಾ ಅಮೃತ್‌ ಮಹೋತ್ಸವ’ದೊಂದಿಗೆ ಹೊಂದಿಕೆ ಮಾಡಲಾಗುತ್ತದೆ. ಜು.18ರಂದು ಸಂಜೆ 4 ಗಂಟೆಗೆ ರೈಲ್ವೆ ಮಂಡಳಿಯ ರೈಲ್ವೆ ಭವನದಿಂದ ಕೇಂದ್ರ ಕಾರ್ಯದ ಆಚರಣೆಯಾದ “ಸಾಂಪ್ರದಾಯಿಕ ಸಪ್ತಾಹ ಐಕಾನಿಕ್‌ ವೀಕ್‌’ ಅನ್ನು ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿ.ಕೆ.ತ್ರಿಪಾಠಿ ಉದ್ಘಾಟಿಸಲಿದ್ದಾರೆ.

ಕರ್ನಾಟಕದಲ್ಲಿ ಬ್ರಿಟಿಷ್‌ ಆಳ್ವಿಕೆಯ ವಿರುದ್ಧ ಕ್ರಾಂತಿಕಾರಿ ಕಾರ್ಯಗಳಿಗಾಗಿ ಮೈಲಾರ ಮಹದೇವಪ್ಪ ಅವರನ್ನು “ಕರ್ನಾಟಕದ ಭಗತ್‌ ಸಿಂಗ್‌’ ಎಂದು ಪ್ರಶಂಸಿಸಲಾಗಿತ್ತು. ದಂಡಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿ ಅವರೊಂದಿಗೆ ನಡೆದವರಲ್ಲಿ ಅವರು ಅಂದಿನ ಮೈಸೂರು ಸಂಸ್ಥಾನದ ಏಕೈಕ ಪ್ರತಿನಿಯಾಗಿದ್ದರು. ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದರು.

ಮೈಸೂರು ವಿಭಾಗ ಹಾವೇರಿ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿರುವ ರೈಲ್ವೆಯ ಎಲ್ಲಾ ಪಾಲುದಾರರೊಂದಿಗೆ, ಶಾಲಾ-ಕಾಲೇಜುಗಳು ಮತ್ತು ವಸತಿ ಕಾಲೋನಿಗಳನ್ನು ಸೇರಿಸಿಕೊಂಡು ವಾರ ಪೂರ್ತಿ ಕಾರ್ಯಕ್ರಮಗಳ ಸರಣಿಯನ್ನು ಆಯೋಜಿಸಿದೆ.

ವಾರ ಪೂರ್ತಿ ಕಾರ್ಯಕ್ರಮ: ವಾರ ಪೂರ್ತಿ ಮಹದೇವಪ್ಪ ಮೈಲಾರ ಹಾವೇರಿ ನಿಲ್ದಾಣದ ದೀಪಾಲಂಕಾರ ಮತ್ತು ಸಿಂಗಾರ, ಡಿಜಿಟಲ್‌ ಪರದೆ ಅಳವಡಿಸುವುದು ಮತ್ತು ಐತಿಹಾಸಿಕ ವಿಷಯಗಳ ಛಾಯಾಚಿತ್ರ ಪ್ರದರ್ಶನ, ವಿಡಿಯೋ ಚಿತ್ರ, ದೇಶಭಕ್ತಿ ಗೀತೆಗಳು, ಸ್ಥಳೀಯ ಭಾಷೆಯಲ್ಲಿ ತನ್ನದೇ ಆದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಬಗ್ಗೆ ಬೀದಿ ನಾಟಕವನ್ನು ಪ್ರತಿದಿನ ಸಂಜೆ 6ರಿಂದ 7ರವರೆಗೆ ಒಂದು ಗಂಟೆ ಕಾಲ ನಡೆಸಲಾಗುವುದು.

ವಾರದ ಕೊನೆಯ ದಿನದಂದು ತಮ್ಮ ಕಥೆಯನ್ನು ಹಂಚಿಕೊಳ್ಳಲು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರನ್ನು ಆಹ್ವಾನಿಸಲಿದೆ. ನಿಲ್ದಾಣದಲ್ಲಿ “ಆಜಾದಿ ಕಿ ರೇಲ್‌ ಗಾಡಿ ಔರ್‌ ಸ್ಟೇಷನ್‌’ ಸಂದರ್ಭದಲ್ಲಿ ಸೆಲ್ಫಿ ಪಾಯಿಂಟ್‌ ರಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ|ಮಂಜುನಾಥ್‌ ಕನಮಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.