ಬಂಕಾಪುರ: ಉಚಿತ ಬಸ್‌ ಪ್ರಯಾಣಕ್ಕೆ ಪರದಾಟ

ಕೆಲಸಕ್ಕೆ ಹೋಗುವ ಮಹಿಳೆಯರಿಗೆ ತುಂಬಾ ತೊಂದರೆಯಾಗುತ್ತಿದೆ.

Team Udayavani, Jun 17, 2023, 6:40 PM IST

ಬಂಕಾಪುರ: ಉಚಿತ ಬಸ್‌ ಪ್ರಯಾಣಕ್ಕೆ ಪರದಾಟ

ಬಂಕಾಪುರ: ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಜಾರಿಗೊಳಿಸಿದೆ. ಆದರೆ, ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್‌ಗಳನ್ನು ಬಿಡದಿರುವುದು ಸರ್ಕಾರದ ಉಚಿತ ಯೋಜನೆ ವಿಫಲವಾಗಲು ಕಾರಣವಾಗಬಹುದು ಎಂದು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದರು.

ಪಟ್ಟಣದಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿನಿಯರು ಶಾಲಾ, ಕಾಲೇಜುಗಳಿಗೆ ತೆರಳಿದರೆ, ನೂರಾರು ಸಂಖ್ಯೆಯ ಮಹಿಳೆಯರು, ಸರ್ಕಾರಿ, ಅರೆ ಸರ್ಕಾರಿ ನೌಕರರು, ಖಾಸಗಿ ಕಾರ್ಖಾನೆ, ಫ್ಯಾಕ್ಟರಿಗಳಲ್ಲಿ ಕೆಲಸಕ್ಕೆ ತೆರಳುವ ಜೊತೆಗೆ, ವ್ಯಾಪಾರಕ್ಕಾಗಿ ಪಟ್ಟಣದಿಂದ ವಿವಿಧ ಗ್ರಾಮ, ಪಟ್ಟಣಗಳಿಗೆ ಬಂದು ಹೋಗುತ್ತಾರೆ. ಆದರೆ, ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಚಾಲನೆ ನೀಡಿದಾಗಿನಿಂದ ಎಲ್ಲ ಬಸ್‌ಗಳು ರಶ್‌ ಆಗಿಯೇ ಬರುತ್ತಿವೆ. ಇದರಿಂದ ದಿನನಿತ್ಯ ಸರಿಯಾದ ವೇಳೆಗೆ ಶಾಲಾ, ಕಾಲೇಜು ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ, ಅನಿವಾರ್ಯವಾಗಿ ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ.

ಇದು ಕೂಲಿ ಕೆಲಸ, ಖಾಸಗಿ ಕಂಪನಿಗಳಿಗೆ ತೆರಳುವ ಮಹಿಳೆಯರ ಆರೋಪವಾದರೆ, ಶಾಲಾ, ಕಾಲೇಜುಗಳಿಗೆ ತೆರಳುವ
ವಿದ್ಯಾರ್ಥಿನಿಯರು ಬೆಳಿಗ್ಗೆ 8 ರಿಂದ 10ರವರೆಗೆ ಹಾವೇರಿ ಹುಬ್ಬಳ್ಳಿ ಕಡೆ ಚಲಿಸುವ ಬಸ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ಸರಿಯಾದ ವೇಳೆಗೆ ಶಾಲಾ, ಕಾಲೇಜುಗಳಿಗೆ ಹೋಗಲು ಆಗುತ್ತಿಲ್ಲ. ಈ ಮೊದಲೇ ಹಾವೇರಿ ಕಡೆ ಹೋಗಲು ಹಾಗೂ ಬರಲು ಪರದಾಡಬೇಕಾಗಿತ್ತು. ಆದರೆ, ಈಗ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದಾಗಿನಿಂದ ಶಾಲಾ, ಕಾಲೇಜುಗಳಿಗೆ ತೆರಳುವ ಗೋಳು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ಆರೋಪಿಸುತ್ತಿದ್ದಾರೆ. ಸರ್ಕಾರದ ಈ ಯೋಜನೆ ಸಫಲವಾಗಬೇಕಾದರೆ, ಹೆಚ್ಚುವರಿ ಬಸ್‌ಗಳನ್ನು ಬಿಡಬೇಕೆಂಬುದು ಮಹಿಳಾಮಣಿಗಳ ಒತ್ತಾಸೆಯಾಗಿದೆ.

ಬೆಳಿಗ್ಗೆ 10 ಗಂಟೆ ಒಳಗಾಗಿ ವಿದ್ಯಾರ್ಥಿನಿಯರು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ತಲುಪಬೇಕಾಗಿರುವುದರಿಂದ, ಆ ವೇಳೆಗೆ ಬಸ್‌ಗಳ ಕೊರತೆ ಇರುತ್ತದೆ. ಇದರಿಂದ ನಾವು ಅನಿವಾರ್ಯವಾಗಿ ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ. ಆದ್ದರಿಂದ, ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ಹೆಚ್ಚುವರಿ ಬಸ್‌ ಬಿಟ್ಟು ಮಹಿಳೆಯರಿಗೆ
ಅನುಕೂಲ ಕಲ್ಪಿಸಬೇಕು.
ಸ್ವಾತಿ ಹಿರೇಮಠ, ಬಂಕಾಪುರ

ಟಾಪ್ ನ್ಯೂಸ್

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.