ರಮೇಶ ಜಾರಕಿಹೊಳಿ ಪ್ರಕರಣದ ನಂತ್ರ ಬಹಳಷ್ಟು ಊಹಾಪೋಹಗಳು ಎದ್ದಿವೆ : ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ
Team Udayavani, Mar 6, 2021, 4:37 PM IST
ಹಾವೇರಿ : ರಮೇಶ ಜಾರಕಿಹೊಳಿ ಪ್ರಕರಣ ಆದ ಮೇಲೆ ಬಹಳಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ ಎಂದು ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ಮಾಡಲಾಗುವ ಸಾಧ್ಯತೆಯಲ್ಲಿ ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಅಲ್ಲದೇ ರಮೇಶ ಜಾರಕಿಹೊಳಿ ಮೇಲೆ ದೂರು ಬಂದಿದೆ. ಅದರ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ದೂರು ಕೊಟ್ಟವರು ಏನು ಮಾಹಿತಿ ಕೊಡಬೇಕಾಗಿತ್ತು, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು, ಇದುವರೆಗೆ ಕೊಟ್ಟಿಲ್ಲ ಎಂದರು.
ಇಂಥಾ ಕೇಸ್ ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ. ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.
ಎಚ್ ಡಿಕೆ ಹೇಳಿಕೆ ವಿಚಾರ : ಈ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ವಿಷಯದಲ್ಲಿ ಹಲವಾರು ಜನರು ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಕೆಲವರು ಹತ್ತೊಂಬತ್ತು ಜನ ಇದ್ದಾರೆ ಅಂತಿದ್ದಾರೆ. ಕೆಲವರು ಡೀಲ್ ಆಗಿದೆ ಅಂತಿದ್ದಾರೆ. ಎಲ್ಲ ವಿಚಾರಗಳನ್ನ ಗಮನಿಸಿದ್ದೇವೆ. ಎಲ್ಲೆಲ್ಲಿ ತನಿಖೆ ಮಾಡಬೇಕೋ ಅಲ್ಲಿ ಎಲ್ಲ ತನಿಖೆ ಮಾಡಲಾಗುವುದು ಎಂದರು.
ದಿನೇಶ ಕಲ್ಲಹಳ್ಳಿ ಬಿಜೆಪಿ ಜೊತೆ ಗುರ್ತಿಸಿಕೊಂಡಿರೋ ವಿಚಾರ : ಎಲ್ಲಾರೂ ಯಾವ್ಯಾವ ಪಕ್ಷದಲ್ಲಿ ಇದ್ದಾರೆ ಯಾರಿಗೊತ್ತು. ಏನು ದೂರು ಕೊಟ್ಟಿದ್ದಾರೆ. ಅದರ ಬಗ್ಗೆ ಎರಡು ಬಾರಿ ಕರೆದಿದ್ದೇವೆ. ಎರಡು ಬಾರಿ ಕರೆದಾಗಲೂ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದು ಮಾಧ್ಯಮಗಳ ಮುಂದೆಯೆ ಇದೆ. ಅದರ ಆಧಾರದ ಮೇಲೆ ತನಿಖೆ ಮಾಡಲಾಗುವುದು. ಅವರು ಯಾರು ಜೊತೆ ಗುರ್ತಿಸಿಕೊಂಡಿದ್ದಾರೆ ಅದು ನಮಗೆ ಸಂಬಂಧವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.