ನವೀನ್ ಮೃತದೇಹಕ್ಕೆ ಅಂತಿಮ ನಮನ; ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಗಣ್ಯರಿಂದ ಅಂತಿಮ ಗೌರವ
Team Udayavani, Mar 22, 2022, 6:25 AM IST
ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ 21 ದಿನಗಳ ಬಳಿಕ ಸೋಮವಾರ ತವರಿಗೆ ಆಗಮಿಸಿತು.
ನವೀನ್ ಮೃತಪಟ್ಟ ದಿನದಿಂದಲೇ ಪಾರ್ಥಿವ ಶರೀರ ತರುವಂತೆ ಗ್ರಾಮಸ್ಥರು, ಕುಟುಂಬಸ್ಥರು ಸರಕಾರವನ್ನು ಒತ್ತಾಯಿಸಿದ್ದರು. ಪ್ರಧಾನಿ ಮೋದಿ ಅವರು ನವೀನ್ ಕುಟುಂಬದವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಪ್ರಮುಖ ನಾಯಕರು ಚಳಗೇರಿಗೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪಾರ್ಥಿವ ಶರೀರ ತರುವ ಭರವಸೆ ನೀಡಿದ್ದರು.
ಸಿಎಂ ಅಂತಿಮ ದರ್ಶನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಳಗೇರಿ ಗ್ರಾಮಕ್ಕೂ ಆಗಮಿಸಿ ಅಂತಿಮ ದರ್ಶನ ಪಡೆದರು. ಸಿರಿಗೆರಿಯ ತರಳಬಾಳು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಮುಂತಾದವರಿದ್ದರು.
ಈ ವೇಳೆ ಮಾತನಾಡಿದ ನವೀನ್ ತಂದೆ ಶೇಖರಗೌಡ ಅವರು, ಸಾಕಷ್ಟು ಪ್ರಯತ್ನಪಟ್ಟು ಮಗನ ಶವವನ್ನು ತರಿಸಿದ್ದೀರಿ. ಕೊನೆಯ ಬಾರಿ ಮಗನ ಮುಖ ನೋಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ನಿಮಗೆಲ್ಲÉ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿ ಕಣ್ಣೀರಿಟ್ಟರು.
ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನಾವು ಎಷ್ಟೇ ಪ್ರಯತ್ನ ಮಾಡಿದರೂ ನಿಮ್ಮ ಪ್ರಾಮಾಣಿಕತೆ, ಪುಣ್ಯದ ಫಲ, ದೈವ ಸಂಕಲ್ಪದಿಂದ ಯುದ್ಧಪೀಡಿತ ಉಕ್ರೇನ್‌ನಿಂದ ಪಾರ್ಥಿವ ಶರೀರ ತರಲು ಸಾಧ್ಯವಾಗಿದೆ. ನವೀನ್‌ನನ್ನು ಜೀವಂತವಾಗಿ ಕರೆತರಲು ಸಾಧ್ಯವಾಗಲಿಲ್ಲ, ಆದರೆ ಸತತ ಪ್ರಯತ್ನದಿಂದ ಪಾರ್ಥಿವ ಶರೀರ ತರಲಾಗಿದೆ. ಯಾವುದೇ ಸಂದರ್ಭದಲ್ಲೂ ಎದೆಗುಂದದೆ ಧೈರ್ಯವಾಗಿರಿ, ಏನಾದರೂ ಸಮಸ್ಯೆ ಆದರೆ ನಮ್ಮ ಗಮನಕ್ಕೆ ತನ್ನಿ ಎಂದು ಸಾಂತ್ವನ ಹೇಳಿದರು.
ವಿದ್ಯಾರ್ಥಿಗಳೊಂದಿಗೆ ಸಿಎಂ ಸಮಾಲೋಚನೆ
ಸಿಎಂ ಬಸವರಾಜ ಬೊಮ್ಮಾಯಿ ಚಳಗೇರಿಗೆ ಆಗಮಿಸಿದ್ದ ವಿದ್ಯಾರ್ಥಿಗಳನ್ನು ತಮ್ಮ ಬಳಿ ಕರೆಸಿಕೊಂಡು ಸಮಾಲೋಚನೆ ನಡೆಸಿದರು. ಅಂದು ನವೀನ್ ಕೂಡ ನಿಮ್ಮೊಂದಿಗೆ ಇದ್ದಿದ್ದರೆ ಇಂದು ಜೀವಂತವಾಗಿ ಮರಳಿ ಬರುತ್ತಿದ್ದ. ಆದರೆ ವಿಧಿ ಹೀಗೆ ಆಟ ಆಡಿದೆ ಎಂದು ಹೇಳಿ ಭಾವುಕರಾದರು. ನಿಮ್ಮ ಶಿಕ್ಷಣ ಮುಂದುವರಿಕೆಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಉಕ್ರೇನ್ ಯುದ್ಧಪೀಡಿತ ಪ್ರದೇಶದಿಂದ ಮೃತದೇಹವನ್ನು ತರಲು ಎಷ್ಟು ಕಷ್ಟ ಎದುರಾಯಿತು ಎಂಬುದರ ಬಗ್ಗೆ ಬೊಮ್ಮಾಯಿ ಹಾಗೂ ತರಳಬಾಳು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.