ಸದೃಢ ಕನ್ನಡ ನಾಡು ಕಟ್ಟಲು ಕಟಿಬದ್ದ


Team Udayavani, Jan 27, 2021, 3:17 PM IST

basavaraja bommayi speach

ಹಾವೇರಿ: ಹೊಸ ಚಿಂತನೆ, ಹೊಸ ಕಲ್ಪನೆ ಹೊಸ ಕಾರ್ಯಗಳ ಮೂಲಕ ಎಲ್ಲರನ್ನೂ ಒಳಗೊಂಡ ನಯಾ ಭಾರತ ನಿರ್ಮಾಣಕ್ಕೆ ಭಾರತದ ಪ್ರಧಾನಮಂತ್ರಿಗಳು ಸಂಕಲ್ಪ ಮಾಡಿದ್ದಾರೆ. ಕರ್ನಾಟಕದಲ್ಲೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿಯ ಸದೃಢ ಕನ್ನಡ ನಾಡು ಕಟ್ಟುವ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ ಏರ್ಪಡಿಸಿದ್ದ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯತೆ, ಎಲ್ಲರ ಒಳಗೊಂಡಂತೆ ಅಭಿವೃದ್ಧಿ ಹಾಗೂ ಆಂತರಿಕ ಹಾಗೂ ಬಾಹ್ಯ ಸುರಕ್ಷತೆಯ ಮೂರು ಅಂಶಗಳ ಆಧಾರದಮೇಲೆ ನಯಾ ಭಾರತದ ನಿರ್ಮಾಣಕ್ಕೆ ಕರೆ ಕೊಟ್ಟಿದ್ದಾರೆ.  ಈ ಮಾದರಿಯಲ್ಲಿ ರಾಜ್ಯದ ಅಭಿವೃದ್ಧಿಯ ಕಾರ್ಯಗಳು ಮುಂದುವರೆದಿವೆ. ಕಳೆದ ಒಂದೂವರೆ ವರ್ಷ ಸಂಕಷ್ಟದ ವರ್ಷದವಾಗಿ ಆಡಳಿತಕ್ಕೆ ಪರೀಕ್ಷೆಯ ಕಾಲವಾಗಿತ್ತು. ಕೋವಿಡ್‌ ಹಾಗೂ ಪ್ರಾಕೃತಿಕ ವಿಕೋಪಗಳು ಕರ್ನಾಟಕದ ಆರ್ಥಿಕತೆಯನ್ನೇ ಅಲ್ಲಾಡಿಸಿದ ವರ್ಷವಾಗಿದೆ. ಕೋವಿಡ್‌ ಕಾರಣದಿಂದ ದೇಶ ಸೇರಿದಂತೆ ವಿಶ್ವದ ಆರ್ಥಿಕತೆಯೇ ಅಲ್ಲಾಡಿದೆ. ಸಂಕಷ್ಟಗಳ ದಾರಿಯಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನಮ್ಮ ಸರ್ಕಾರಗಳು ಕಾರ್ಯನಿರ್ವಹಿಸಿವೆ ಎಂದರು.

ಕೋವಿಡ್‌ ಸಂಕಷ್ಟವನ್ನು ಸೈದ್ಧಾಂತಿಕವಾಗಿ ಎದುರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಭೂತ ಸೌಕರಗಳನ್ನು ಅಭಿವೃದ್ಧಿಪಡಿ ಸಲಾಗಿದೆ. ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಐಸಿಯು ಲ್ಯಾಬ್‌, ಆಕ್ಸಿಜನ್‌, ವೆಂಟಿಲೇಟರ್‌ ವ್ಯವಸ್ಥೆ ಸೇರಿದಂತೆ ಪ್ರಮುಖ ಸುಧಾರಣೆ ತರಲಾಗಿದೆ ಎಂದರು.

ವಿಶ್ವ ಆರ್ಥಿಕ ಒಪ್ಪಂದದ ಪ್ರಕಾರ ಮುಕ್ತ ಮಾರುಕಟ್ಟೆಯಲ್ಲಿ ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿ ಪ್ರಾಯಗಳು ಸಹಜ. ಒಟ್ಟಾಗಿ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳ ಬೇಕಾಗಿದೆ. ರೈತರ ಅನುಕೂಲಕ್ಕಾಗಿ ಸಬ್ಸಿಡಿ ಸಾಲ, ಬಡ್ಡಿ ರಹಿತ ಸಾಲ, ಸಬ್ಸಿಡಿ ಯೋಜನೆಳನ್ನು ಜಾರಿಗೊಳಿಸಲಾಗಿದೆ. ನೀರಾವರಿಕ್ಷೇತ್ರಕ್ಕೆ 7300 ಕೋಟಿಅನ್ನು ಜಿಲ್ಲೆಗೆ ನೀಡಲಾಗಿದೆ.  2021ರ ವರ್ಷಾಂತ್ಯಕ್ಕೆ ಜಿಲ್ಲೆಯ ನೀರಾವರಿ ಯೋಜನೆಗಳು ಪೂರ್ಣ ಗೊಳ್ಳಲಿವೆ ಎಂದರು.

ಜ.26 ಭಾರತಕ್ಕೆ ಸಂವಿಧಾನ ಸಿಕ್ಕ ದಿನ. ಆಡಳಿತ ವ್ಯವಸ್ಥೆ ಸಿಕ್ಕ ದಿನ. ವಿಶ್ವಕ್ಕೆ ಮಾದರಿಯಾದ ದೊಡ್ಡ ಲಿಖೀತ ಸಂವಿಧಾನವನ್ನು ಜಾರಿಗೆ ತಂದ ದಿನ. ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕಟ್ಟಿಕೊಟ್ಟದ್ದು ಡಾ| ಬಿ.ಆರ್‌.ಅಂಬೇಡ್ಕರ್‌ನೇತೃತ್ವದ ಹಿರಿಯರ ತಂಡ. ಅವರ ಅವಿರತ ಪ್ರಯತ್ನ ಫಲವಾಗಿ  ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂವಿಧಾನ ರೂಪುಗೊಂಡಿದೆ. ಇವರನ್ನು ಹೃದಯಪೂರ್ವಕವಾಗಿ, ಚಿರಸ್ಮರಣೀಯವಾಗಿ ಅಭಿನಂದಿಸುತ್ತೇನೆ ಎಂದು ಸ್ಮರಿಸಿದರು.

ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆನೋವು; ಹಾಸ್ಪತ್ರೆಗೆ ದಾಖಲು

ಸಾಧಕರಿಗೆ ಸನ್ಮಾನ: ಸಮಾರಂಭದಲ್ಲಿ ಜನಪದ ಕಲಾವಿದ ಬಸವರಾಜ ಶಿಗ್ಗಾವಿ, ಪತ್ರಕರ್ತ ವೀರೇಶ ಮಡ್ಲೂರ, ವೀಡಿಯೋ ಛಾಯಾಗ್ರಾಹಕ ರವಿ ಹೂಗಾರ ಅವರನ್ನು ಸನ್ಮಾನಿಸಲಾಯಿತು. ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ, ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಪಂ ಸದಸ್ಯರಾದಸಿದ್ದರಾಜ ಕಲಕೋಟಿ, ವಿರೂಪಾಕ್ಷಪ್ಪ ಕಡ್ಲಿ, ಡಿಸಿ ಸಂಜಯ  ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಎಸ್ಪಿ ಕೆ.ಜಿ.ದೇವರಾಜು, ಅಪರ ಡಿಸಿ ಎಸ್‌.ಯೋಗೇಶ್ವರ, ಎಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಇತರರಿದ್ದರು.

ಟಾಪ್ ನ್ಯೂಸ್

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.