ಕೋವಿಡ್ ಸಂಕಷ್ಟದಲ್ಲೂ ಮೂಲ ಸೌಲಭ್ಯ: ಶಾಸಕ ಪೂಜಾರ
Team Udayavani, Aug 14, 2020, 12:29 PM IST
ರಾಣಿಬೆನ್ನೂರ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೋವಿಡ್ ಹರಡುವಿಕೆಯ ಸಂಕಷ್ಟದಲ್ಲಿದ್ದರೂ ಸಹ ಸಾರ್ವಜನಿಕರ ಆರೋಗ್ಯ ಸಂರಕ್ಷಣೆಯ ಜೊತೆಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಗುರುವಾರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬಸ್ ನಿಲ್ದಾಣದ ಆವರಣದಲ್ಲಿ ಕಾಂಕ್ರೀಟ್ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆರೋಗ್ಯ ಲೆಕ್ಕಿಸದೇ ಜನರ ಸಮಸ್ಯೆಗಳ ಬಗ್ಗೆ ಸ್ಪಂದಿಸುತ್ತಿದ್ದಾರೆ ಎಂದರು.
ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಿಂದ ತಾಲೂಕಿನಲ್ಲಿ ಮನೆಗಳು ಬಿದ್ದಿವೆ. ಅವುಗಳನ್ನು ಸರ್ವೇ ಮಾಡಿ ಮನೆ ಬಿದ್ದ ಫಲಾನುಭವಿಗಳಿಗೆ 10 ಸಾವಿರ ರೂ. ಪರಿಹಾರ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಈಗಾಗಲೇ ತಾಲೂಕಿನಲ್ಲಿ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಕೊಡಲಾಗುವುದು ಎಂದರು.
ಗ್ರಾಪಂ ಸದಸ್ಯ ತಿಪ್ಪೇಶ ಮಡಿವಾಳರ, ಎಂ.ಎನ್. ಬಾಳಣ್ಣನವರ, ನೂರ್ ಸಾಬ್ ಕುಪ್ಪೇಲೂರು, ನಾರಾಯಣಪ್ಪ ದುರಗೇರಿ, ನವೀನ್ ಗಡ್ಡದ, ಮಂಜುನಾಥ ಗಂಜಾಮದ, ಶಿವು ಗುರುಂ, ಬಸವರಾಜ ಕೇಲಗಾರ, ರಮೇಶ ಪಾಟೀಲ, ಕುಬೇರಪ್ಪ ಒದರರ, ಮಾರುತಿ ಬೆನಕನಕೊಂಡ, ಮಾರುತಿ ದೊಡ್ಮನಿ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.