ಬೆಂಕಿ ಅವಘಡವಾದರೆ ಮುಂಜಾಗ್ರತೆ ವಹಿಸಿ

Team Udayavani, Jul 31, 2019, 4:14 PM IST

haveri-tdy-4

ರಾಣಿಬೆನ್ನೂರ: ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಕಿ ನಂದಿಸುವ ವಿಧಾನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಪ್ರಾತ್ಯಕ್ಷಿಕೆ ನೀಡಿದರು.

ರಾಣಿಬೆನ್ನೂರ: ಬೆಂಕಿ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ಸಿಬ್ಬಂದಿ ಬರುವ ಮುನ್ನ ಅನಾಹುತ ತಪ್ಪಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಅಗ್ನಿ ಶಾಮಕ ಸಿಬ್ಬಂದಿ ಜಯದೇವ ವಾಸನದ ಹೇಳಿದರು.

ಮಂಗಳವಾರ ತಾಲೂಕಿನ ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ನಿಶಾಮಕ ಠಾಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಬೆಂಕಿಯ ವರ್ಗಿಕರಣ, ಬೆಂಕಿ ನಂದಿಸುವ ವಿಧಾನಗಳು ಹಾಗೂ ಅಗ್ನಿ ಮುಂಜಾಗ್ರತಾ ರಕ್ಷಣಾ ಕಾರ್ಯಗಳ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಬೆಂಕಿ ಅನಾಹುತ ನಿರ್ವಹಣೆ ಮತ್ತು ತಡೆಗಟ್ಟುವಿಕೆ ಕೇವಲ ಅಗ್ನಿ ಶಾಮಕ ಇಲಾಖೆಯೊಂದರಿಂದ ಸಾಧ್ಯವಿಲ್ಲ. ಈ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರೂ ವಿಷಯಗಳನ್ನು ಅರಿತುಕೊಂಡು ಭಾಗಿಯಾಗುವುದು ಅತ್ಯಗತ್ಯವಿದೆ. ಅಗ್ನಿ ದುರಂತಗಳು ಸಂಭವಿಸದಂತೆ ತಡೆಯಲು ತ್ಯಾಜ್ಯ ವಸ್ತುಗಳ ರಾಶಿಯ ಸರಿಯಾದ ನಿರ್ವಹಣೆ ಮಾಡಬೇಕು ಎಂದರು. ಪೆಟ್ರೋಲ್, ಡಿಸೇಲ್, ಸೀಮೆ ಎಣ್ಣೆಯಂತಹ ವಸ್ತುಗಳ ಸಂಗ್ರಹಣೆ ಮಾಡಿದಲ್ಲಿ ಅತ್ಯಂತ ಜಾಗೃತೆ ವಹಿಸಬೇಕು. ಸಂಘ ಸಂಸ್ಥೆಗಳು ಹಾಗೂ ಕಚೇರಿಗಳು ಮತ್ತು ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಅಗ್ನಿ ಶಾಮಕ ಇಲಾಖೆಯನ್ನು ಸಂಪರ್ಕಿಸಿ, ಅಲ್ಲಿ ಬೆಂಕಿ ಅನಾಹುತ ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮಗಳನ್ನು ಅವರ ಸಲಹೆಯಂತೆ ಸಲಕರಣೆ ಅಳವಡಿಸಿಕೊಂಡು, ಆ ವ್ಯವಸ್ಥೆಯು ಸರಿಯಾಗಿರುವುದನ್ನು ಪ್ರತಿವರ್ಷ ಇಲಾಖೆಯಿಂದ ಪ್ರಮಾಣಿಕರಿಸಿಕೊಳ್ಳಬೇಕು ಎಂದರು.

ಕಟ್ಟಡಗಳಲ್ಲಿ ಉತ್ತಮ ಗುಣಮಟ್ಟದ ವಿದ್ಯುತ್‌ ವೈಯರ್‌ ಅಳವಡಿಸಿರುವುದನ್ನು ಖಚಿತಪಡಿಸಿ ಕೊಳ್ಳಬೇಕು. ಬೆಂಕಿ ಅನಾಹುತಗಳು, ಅವುಗಳ ನಿರ್ವಹಣೆಗೆ ನಿರ್ದಿಷ್ಟ ಯಂತ್ರಗಳ ಬಳಸುವ ಬಗ್ಗೆ ತಿಳಿಸಿ ಪ್ರಾಯೋಗಿಕವಾಗಿ ಬೆಂಕಿ ನಂದಿಸುವ ವಿಧಾನಗಳನ್ನು ಸಿ.ಸಿ. ತಾವರಗೊಂದಿ, ಬಸವರಾಜ ಬಸವನಕೊಪ್ಪ, ವಿನಯ್‌ ಎಂ.ಕೆ., ಎಸ್‌.ಎಸ್‌.ರಾಠೊಡ ಅವರು ಪ್ರಾತ್ಯಕ್ಷತೆಯನ್ನು ನೀಡಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಪ್ರಾಚಾರ್ಯ ಪಿ.ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಶಿವಾನಂದ ಎಸ್‌., ಸುಮಾ ಜಿ., ಎಸ್‌.ಎಸ್‌.ಬಡ್ನಿ, ಕೆ.ಜೆ.ಆಶಾ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.