ಅಪರಿಚಿತರೊಂದಿಗೆ ಜಾಗೃತರಾಗಿರಿ: ದೊಡ್ಡಕುರುಬರ

ಅಕ್ಕಿಆಲೂರು ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೈಬರ್‌ ಕ್ರೈಂ ಜಾಗೃತಿ ಕಾರ್ಯಕ್ರಮ

Team Udayavani, Jun 17, 2022, 5:34 PM IST

25

ಹಾನಗಲ್ಲ: ಅಪರಿಚಿತರೊಂದಿಗೆ ಜಾಗೃತವಾಗಿದ್ದು, ಹಣ ಹಾಗೂ ಗೌರವ ಉಳಿಸಿಕೊಳ್ಳುವ ಜವಾಬ್ದಾರಿ ಸಾರ್ವಜನಿಕರದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್‌ ಕ್ರೈಂ ಹೆಚ್ಚಾಗುತ್ತಿವೆ ಎಂದು ಹಾವೇರಿ ಜಿಲ್ಲಾ ಸೈಬರ್‌ ಕ್ರೈಂ ಪೇದೆ ಆನಂದ ದೊಡ್ಡಕುರುಬರ ತಿಳಿಸಿದರು.

ತಾಲೂಕಿನ ಅಕ್ಕಿಆಲೂರು ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಸೈಬರ್‌ ಕ್ರೈಂ ವಿಭಾಗದ ಅಧಿಕಾರಿಗಳು ಆಯೋಜಿಸಿದ್ದ ಸೈಬರ್‌ ಕ್ರೈಂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ಗಳಲ್ಲಿ ಆನ್‌ಲೈನ್‌ ಮೂಲಕ ವ್ಯವಹರಿಸುವಾಗ ಎಚ್ಚರಿಕೆ ಇರಲಿ. ಮೊಬೈಲ್‌ ಸಂದೇಶಗಳ ಮೂಲಕ ಅಪರಿಚಿತರು ಹಣಕಾಸು ಹಾಗೂ ಇತರ ಮಾಹಿತಿ ಕೇಳಿದಾಗ ಪ್ರತಿಕ್ರಿಯಿಸುವುದು ಒಳ್ಳೆಯದಲ್ಲ. ಬ್ಯಾಂಕ್‌ಗಳ ಹೆಸರಿನಲ್ಲಿ ಮೊಬೈಲ್‌ ಮೂಲಕ ಮಾಹಿತಿ ಕೇಳಿದರೆ ನೇರವಾಗಿ ತಮಗೆ ಸಂಬಂಧಿಸಿದ ಬ್ಯಾಂಕ್‌ ಗಳನ್ನು ಸಂಪರ್ಕಿಸಬೇಕು. ಹೀಗೆ ಮಾಡದೆ ಮೊಬೈಲ್‌ ಮೂಲಕ ಕೇಳಿದ ಹಣಕಾಸು ಹಾಗೂ ಇತರೇ ಮಾಹಿತಿ ನೀಡಿ ಲಕ್ಷಾಂತರ ರೂ. ನಷ್ಟ ಮಾಡಿಕೊಂಡವರಿದ್ದಾರೆ. ಹೀಗಾಗಿ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಮೈಮರೆಯಬಾರದು ಎಂದರು.

ಫೇಸ್‌ಬುಕ್‌ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮಾಹಿತಿಗಳನ್ನು ಹಾಕುವುದು. ಕೋಮು ಸಂದೇಶಗಳನ್ನು ಬಿಡುಗಡೆ ಮಾಡುವುದು ಬಹುದೊಡ್ಡ ಅಪರಾಧವಾಗುತ್ತದೆ. ಇದರಿಂದ ಸಾಮಾಜಿಕ ಗೊಂದಲಗಳುಂಟಾಗಿ ಇಂತಹ ಸಂದೇಶ ಹಾಕಿದವರು ಪೊಲೀಸ್‌ ಬಂಧನಕ್ಕೆ ಒಳಗಾಗಿ ವಿಚಾರಣೆ ಎದುರಿಸಬೇಕಾದೀತು. ಇಂತಹ ವಿಷಯದಲ್ಲಿ ಬಹುತೇಕ ಯುವಕರು ಅಪರಾಧಿಗಳಾಗುತ್ತಿರುವುದು ವಿಷಾದದ ಸಂಗತಿ. ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಮಾಹಿತಿಗಳಿಗೆ ಮುಂದಾಗದೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ಎಂ. ಎನ.ಕಡ್ಡಿಪುಡಿ, ಸೈಬರ್‌ ಕ್ರೈಂ ವಿಭಾಗ ಯುವಕರು ಹಾಗೂ ಸಾರ್ವಜನಿಕರು ಅಪರ  ಕೃತ್ಯಗಳಲ್ಲಿ ಭಾಗಿಯಾಗದಂತೆ ಅರಿವು ನೀಡುತ್ತಿರುವುದು ಅತ್ಯಂತ ಶ್ಲಾಘನೀಯ. ವಿಶೇಷವಾಗಿ ಮೊಬೈಲ್‌ ಬಳಸುತ್ತಿರುವ ಯುವಕರಿಗೆ ಈ ಸಂದೇಶ ಅತ್ಯವಶ್ಯಕವಾಗಿದೆ. ಇಂತಹ ಅತ್ಯುತ್ತಮ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಗ್ರಾಮಗಳ ಜನರಿಗೆ ಹೇಳಿ ಜಾಗೃತಿ ಮೂಡಿಸಬೇಕೆಂದರು.

ಕಾರ್ಯಕ್ರಮದಲ್ಲಿ ಪ್ರೊ.ದಿಲೀಪ ಕಂಬಳಿ, ಪ್ರೊ.ರಾಜಕುಮಾರ, ಪ್ರೊ.ಯಮುನಾ ಕೋನೇಸರ, ಪ್ರೊ.ಬಸವಣ್ಣ, ಪ್ರೊ.ಬಿ.ಆರ್‌.ಗಿರಿಯಪ್ಪನವರ, ಪ್ರೊ. ಎಚ್‌.ಡಿ.ಕೆಂಗೊಂಡ, ಪ್ರೊ.ಮಂಜುನಾಥ ಬಾರ್ಕಿ, ಪ್ರೊ. ಎಸ್‌.ಎಫ್‌.ಲಮಾಣಿ, ಪೊಲೀಸ್‌ ಪೇದೆಗಳಾದ ಮಂಜುನಾಥ ಎರೆಸೀಮಿ, ಶಿವಾನಂದ ಜಾಡರ ಇತರರಿದ್ದರು.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.