ಬಿಜೆಪಿಗೆ ಬೇರೆ ಪಕ್ಷಗಳ ಬೆಂಬಲ ಬೇಕಿಲ್ಲ: ಸಿಎಂ
Team Udayavani, Nov 29, 2019, 8:36 PM IST
ಹಾವೇರಿ: ಉಪ ಚುನಾವಣೆಯಲ್ಲಿ ನಾವು ಎಲ್ಲ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ.
ಬಹುಮತದೊಂದಿಗೆ ಬಿಜೆಪಿ ಸರಕಾರ ಆಡಳಿತದಲ್ಲಿ ಇರುತ್ತದೆ. ನಮಗೆ ಬೇರೆ ಯಾವ ಪಕ್ಷದ ಬೆಂಬಲ ಪಡೆಯುವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ನಮಗೆ ಯಾರ ಸಹಕಾರದ ಆವಶ್ಯಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರಕ್ಕೆ ಬಹುಮತ ಬರದಿದ್ದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗಲಿದೆ ಎಂಬುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಬಹುಮತ ಬಂದೇ ಬರುತ್ತದೆ. ಜೆಡಿಎಸ್ ಬೆಂಬಲ ಪಡೆಯುವ ವಿಚಾರ ಇಲ್ಲವೇ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿಗೆ ಬರುತ್ತೇನೆ ಎಂದು ಬಹಳಷ್ಟು ಜನ ಹೇಳಿದ್ದಾರೆ. ಆದರೆ ನಮಗೆ ಅದರ ಅಗತ್ಯವೇ ಇಲ್ಲ. ನಮಗೆ ಬಹುಮತವಿದೆ ಎಂದು ಹೇಳಿದ್ದೇವೆ. ಹೊಸದಾಗಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಉಪ ಚುನಾವಣೆ ನಡೆಯುತ್ತಿರುವ ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಎಷ್ಟು ಅಂತರದಲ್ಲಿ ಗೆಲ್ಲಬೇಕು ಎಂಬುದಕ್ಕೆ ಮಾತ್ರ ಈಗ ಪೈಪೋಟಿ ಮಾಡುತ್ತಿದ್ದೇವೆ. ಮುಂದಿನ ಮೂರೂವರೆ ವರ್ಷಗಳ ಕಾಲ ಬಿಜೆಪಿ ಸರಕಾರ ಇರಬೇಕು ಎಂಬುದು ಜನರ ಅಪೇಕ್ಷೆ ಇದೆ. ವಿಪಕ್ಷದವರು ಏನು ಬೇಕಾದವರು ಹೇಳಬಹುದು. ಅವರಿಗೆ ಸ್ವಾತಂತ್ರ್ಯ
ಇದೆ. ಆದರೆ ಮತದಾರರು ನಮ್ಮ ಜತೆ ಇದ್ದಾರೆ. ನಾಲ್ಕು ತಿಂಗಳುಗಳ ಆಡಳಿತದ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮೂರೂವರೆ ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯ ಮಾಡಬೇಕು ಎಂಬ ಅಪೇಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.