ಚೀನಾ ವಿರುದ್ಧ ಬಿಜೆಪಿ ಆಕ್ರೋಶ
Team Udayavani, Jun 19, 2020, 2:45 PM IST
ಹಾವೇರಿ: ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚೀನಾ ಉತ್ಪಾದಿತ ವಸ್ತುಗಳನ್ನು ದಹಿಸುವ ಮೂಲಕ ಲಡಾಕ್ ಗಡಿಯಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಚೀನಾ ಉದ್ಧಟತನವನ್ನು ತೀವ್ರವಾಗಿ ಖಂಡಿಸಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಹೊತ್ತು ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು, ಚೀನಾ ಯೋಧರೊಂದಿಗೆ ಹೋರಾಡಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಚೀನಾ ವಿರುದ್ಧ ಧಿಕ್ಕಾರ ಕೂಗಿ ಚೀನಾ ಉತ್ಪಾದಿತ ವಸ್ತುಗಳಿಗೆ ಬೆಂಕಿ ಹಚ್ಚಿನ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಭಾರತದ ಶಾಂತ ಸ್ವಭಾವವನ್ನು ಚೀನಾ ದುರುಪಯೋಗ ಪಡಿಸಿಕೊಂಡರೆ ಸುಮ್ಮನಿರಲು ದೇಶ ನೆಹರು ನಾಯಕತ್ವದ ಸರ್ಕಾರವನ್ನು ಹೊಂದಿಲ್ಲ. ಬದಲಾಗಿ ತಲೆಗೆ ತಲೆಗಳ ಪ್ರತ್ಯುತ್ತರ ನೀಡುವ ಧೀಮಂತ ನಾಯಕ ನರೇಂದ್ರ ಮೋದಿ ನಾಯಕತ್ವದ ಸರ್ಕಾರವಿದೆ. ಹೀಗಾಗಿ ಭಾರತ ಸುರಕ್ಷಿತವಾಗಿರಲಿದೆ ಎಂದರು. ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಗಿರೀಶ ತುಪ್ಪದ, ಶಿವಕುಮಾರ ಸಂಗೂರ, ವಿರೂಪಾಕ್ಷಪ್ಪ ಕಡ್ಲಿ, ಚನ್ನಮ್ಮ ಬ್ಯಾಡಗಿ, ಕವಿತಾ ಯಲವಗಿಮಠ, ರತ್ನಾ ಭಿಮಕ್ಕನವರ, ಶಿವಯೋಗಿ ಹುಲಿಕಂತಿಮಠ, ಬಾಬುಸಾಬ ಮೋಮಿನಗಾರ, ಮುಖಂಡರಾದ ಪ್ರಭು ಹಿಟ್ನಳ್ಳಿ, ಗಿರೀಶ ಮಾಸೂರು, ಬಸವರಾಜ ಮಾಸೂರು, ನಂಜುಂಡೇಶ ಕಳ್ಳೇರ, ಗುಡ್ಡಪ್ಪ ಭರಡಿ ಇನ್ನಿತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.