ಬ್ಲ್ಯಾಕ್ ಫಂಗಸ್ ರೋಗಿಗೆ ಸಿಗ್ತಿಲ್ಲ ಚಿಕಿತ್ಸೆ
ರೋಗಿಗಳಿಗೆ ಚಿಕಿತ್ಸೆ ನೀಡದೇ ಮರಳಿ ಕಳುಹಿಸುತ್ತಿರುವ ಕಿಮ್ಸ್, ಜಿಲ್ಲಾಸ್ಪತ್ರೆಯಲ್ಲೇ ಅಗತ್ಯ ಔಷಧ ಕೊರತೆ-ರೋಗಿಗಳಲ್ಲಿ ಆತಂಕ
Team Udayavani, May 26, 2021, 9:08 PM IST
ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಹಿಳೆಯೊಬ್ಬರಿಗೆ ಬ್ಲ್ಯಾಕ್ ಫಂಗಸ್ ರೋಗ ಕಂಡು ಬಂದಿದ್ದು, ಚಿಕಿತ್ಸೆಗೆ ಸೂಕ್ತ ಔಷಧ ವಿಲ್ಲದೇ ಸಾವು ಬದುಕಿನ ನಡುವೆ ಹೋರಾಡುವಂತಾಗಿದೆ.
ಹಾನಗಲ್ಲ ತಾಲೂಕಿನ ಮಾಸನಕಟ್ಟಿ ಗ್ರಾಮದ ಲಲಿತಾ ಸಂಕಣ್ಣನವರ ಎಂಬ 45 ವರ್ಷದ ಮಹಿಳೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗ ಕಾಣಿಸಿಕೊಂಡಿದೆ. ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ಕಳುಹಿಸಿದ್ದರೂ ಅಲ್ಲಿ ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸಿದ್ದಾರೆ. ನಮ್ಮಲ್ಲೇ ಬ್ಲ್ಯಾಕ್ ಫಂಸಗ್ ರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ನಿಮ್ಮಲ್ಲೇ ನೋಡಿಕೊಳ್ಳಿ ಎಂದು ಕಿಮ್ಸ್‌ನವರು ಹೇಳಿ ಕಳುಹಿಸಿದ್ದಾರೆ. ಈ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಹಿಂದೆ ಬ್ಲ್ಯಾಕ್ ಫಂಗಸ್ ಲಕÒಣಗಳು ಕಂಡು ಬಂದಿವೆ. ಇಲ್ಲಿಯ ಜಿಲ್ಲಾಸ್ಪತ್ರೆಗೆ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ನೀಡುವ ಯಾವ ಔಷಧಿಯೂ ಪೂರೈಕೆಯಾಗಿಲ್ಲ. ಅತ್ತ ಹುಬ್ಬಳ್ಳಿ ಕಿಮ್ಸ್‌ನಲ್ಲೂ ಜಿಲ್ಲೆಯ ಫಂಗಸ್ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಔಷಧ ಇಲ್ಲದ ಕಾರಣ ಕೊರೊನಾ ಪಾಸಿಟಿವ್ ಸೋಂಕಿತರಿಗೆ ನೀಡುವ ಚಿಕಿತ್ಸೆಯನ್ನಷ್ಟೇ ನೀಡಲಾಗುತ್ತಿದೆ. ಎಲ್ಲೆಡೆ ಬ್ಲ್ಯಾಕ್, ವೈಟ್ ಮತ್ತು ಹೊಸದಾಗಿ ಹಳದಿ ಫಂಗಸ್ ರೋಗ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಆದರೆ ಜಿಲ್ಲೆಯಲ್ಲಿ ಈ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯ ಔಷ ಧಿಯೇ ಇಲ್ಲ ಎನ್ನುವುದು ಆತಂಕ ಮೂಡಿಸಿದೆ.
ಜಿಲ್ಲಾಸ್ಪತ್ರೆಯಲ್ಲೇ ಔಷ ಧ ಕೊರತೆ: ಇತ್ತೀಚೆಗೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗ ಕಂಡು ಬರುತ್ತಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಸೂಕ್ತ ಔಷಧ ಸಂಗ್ರಹಣೆಗೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಜಿಲ್ಲಾಡಳಿತ ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದು, ಸೂಕ್ತ ಸಮಯಕ್ಕೆ ಔಷ ಧ ತರಿಸಿಕೊಳ್ಳದೇ ರೋಗಿಗಳ ಪ್ರಾಣದ ಜತೆ ಚೆಲ್ಲಾಟವಾಡುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ವ್ಯಕ್ತವಾಗುತ್ತಿದೆ.
ಜಿಲ್ಲಾಸ್ಪತ್ರೆಯಲ್ಲಿಯೇ ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗೆ ಔಷಧ ಕೊರತೆ ಸಮಸ್ಯೆಯಾಗಿದ್ದರೆ, ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಸ್ಥಿತಿ ಏನು ಎಂಬ ಪ್ರಶ್ನೆ ಎದುರಾಗಿದೆ. ಜಿಲ್ಲಾಡಳಿತ ಇನ್ನಾದರೂ ಎಚ್ಚೆತ್ತುಕೊಂಡು ರೋಗಿಗಳ ಚಿಕಿತ್ಸೆಗೆ ಔಷಧ ತರಿಸಿ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು ಎಂಬುದು ರೋಗಿಗಳ ಸಂಬಂಧಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.