ಜಿಲ್ಲೆಯಲ್ಲಿಯೇ ರಕ್ತವಿದಳನ ಘಟಕ ಆರಂಭ

ರಕ್ತ ಪಡೆಯಲು ಇನ್ನು ಮುಂದೆ ಬೇರೆ ಕಡೆ ಹೋಗುವ ಅಗತ್ಯವಿಲ್ಲ: ಓಲೇಕಾರ

Team Udayavani, Aug 16, 2019, 1:06 PM IST

hv-tdy-2

ಹಾವೇರಿ: ಶಾಸಕ ನೆಹರು ಓಲೇಕಾರ ರಕ್ತವಿದಳನ ಘಟಕ ಉದ್ಘಾಟಿಸಿದರು.

ಹಾವೇರಿ: ಜಿಲ್ಲೆಯಲ್ಲಿಯೇ ರಕ್ತವಿದಳನ ಘಟಕ ಆರಂಭವಾಗಿದ್ದರಿಂದ ರಕ್ತ ಪಡೆಯಲು ಇನ್ನು ಮುಂದೆ ಬೇರೆ ಕಡೆ ಹೋಗುವ ಅಗತ್ಯವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲೇ ಸುಲಭದಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವಿದಳನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ರಕ್ತಹೀನತೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿರುವ ಬಡವರಿಗೆ ಸಕಾಲದಲ್ಲಿ ಬೇಕಾದ ಗುಂಪಿನ ರಕ್ತ ದೊರೆಯದೆ ಕಷ್ಟಪಡುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ಪಾವತಿ ಮಾಡಲಾಗದೆ ತೊಂದರೆ ಅನುಭವಿಸುತ್ತಿದ್ದರು ಎಂದರು.

ಜಿಲ್ಲಾ ಆಸ್ಪತ್ರೆಗ ಅಗತ್ಯವಾದ ಸಂಚಾರಿ ರಕ್ತ ಪರೀಕ್ಷೆ ಅಂಬ್ಯುಲೆನ್ಸ್‌, ರಕ್ತವಿದಳನ ಘಟಕಕ್ಕೆ ಅಗತ್ಯವಾದ ಉನ್ನತ ವೈದ್ಯಕೀಯ ಉಪಕರಣಗಳು ಸೇರಿದಂತೆ ಅಸ್ಪತ್ರೆಗೆ ಬೇಕಾದ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಹಾಗೂ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾತನಾಡಿ, ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವಿದಳನ ಘಟಕವಿರಬೇಕು. ಜಿಲ್ಲೆ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ಈ ಘಟಕದ ಲಾಭ ಎಲ್ಲರಿಗೂ ಸಿಗಲಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ|ನಾಗರಾಜ ನಾಯಕ, ರಕ್ತದಲ್ಲಿ ನಾಲ್ಕು ಘಟಕಗಳಿರುತ್ತವೆ. ಕೆಂಪು ರಕ್ತಕಣ, ಬಿಳಿರಕ್ತಕಣ, ಪ್ಲಾಸ್ಮಾ ಮತ್ತು ಪ್ಲೇಟ್ಲೆಟ್. ದಾನಿಗಳಿಂದ ಸಂಗ್ರಗಹಿಸುವ ರಕ್ತದಲ್ಲಿರುವ ಈ ನಾಲ್ಕು ಅಂಶಗಳನ್ನು ಪ್ರತ್ಯೇಕಿಸುವ ಘಟಕವೇ ವಿದಳನ ಘಟಕವಾಗಿದೆ. ರಕ್ತದ ಕಣಗಳನ್ನು ಬೇರ್ಪಡಿಸಿ ರೋಗಿಗಳಿಗೆ ಬೇಕಾದಂತ ಅಗತ್ಯ ಕಣಗಳನ್ನು ಒದಗಿಸುವ ಕಾರ್ಯವನ್ನು ರಕ್ತವಿದಳನ ಘಟಕ ಮಾಡುತ್ತದೆ. ಒಂದು ಯುನಿಟ್ ರಕ್ತದಿಂದ ನಾಲ್ಕು ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಿಂದ ಗರಿಷ್ಠ ಪ್ರಯೋಜನ ಪಡೆಯಬಹುದು. ಪ್ಲೇಟ್ಲೆಟ್ ಐದು ದಿನ ಉಳಿಯುತ್ತದೆ. ಕೆಂಪು ರಕ್ತಕಣ ಮತ್ತು ಬಿಳಿ ರಕ್ತಕಣಗಳನ್ನು 35 ದಿನಗಳವರೆಗೆ ಹಾಗೂ ಪ್ಲಾಸ್ಮಾವನ್ನು ಒಂದು ವರ್ಷದವರೆಗೂ ಕಡೆದಂತೆ ಇಡಬಹುದು ಎಂದು ತಿಳಿಸಿದರು. ಎಡಿಸಿ ಎನ್‌.ತಿಪ್ಪೇಸ್ವಾಮಿ, ವೈದ್ಯಕೀಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.