ಗ್ರಾಮ ವಾಸ್ತವ್ಯ ಅಧಿಕಾರಿಗಳು ಮತ್ತು ಜನರ ನಡುವಿನ ಸಂಪರ್ಕ ಸೇತುವೆ: ಸಚಿವ ಆರ್.ಅಶೋಕ್
13ನೇ ಗ್ರಾಮ ವಾಸ್ತವ್ಯ; ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿ ಕಂದಾಯ ಸಚಿವರಿಗೆ ಭವ್ಯ ಸ್ವಾಗತ....
Team Udayavani, Dec 17, 2022, 4:44 PM IST
ಬಾಡ (ಹಾವೇರಿ): ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡುವ ಪ್ರತೀ ಗ್ರಾಮದ ಅಭಿವೃದ್ಧಿಗಾಗಿ 1 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಭಾಗವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಶಿಗ್ಗಾವಿ ತಾಲೂಕು ಬಾಡ ಗ್ರಾಮದಲ್ಲಿ ನಡೆ ಸಿದ ಗ್ರಾಮ ವಾಸ್ತವ್ಯ ಹಾಗೂ 28 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿ ಯವರು ಮಾತನಾಡಿದರು. ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡುವ ಗ್ರಾಮದಲ್ಲಿ ಅಲ್ಲಿನ ಗ್ರಾಮಸ್ಥರು ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಾರೆ. ಪ್ರೀತಿಯ ಆತಿಥ್ಯ ನೀಡುತ್ತಾರೆ.
ಅಂತಹ ಗ್ರಾಮಕ್ಕೆ ಏನಾದರೂ ವಿಶೇಷ ಕೊಡುಗೆ ನೀಡಬೇಕೆಂಬ ಚಿಂತನೆ ಯೊಂದಿಗೆ 1 ಕೋಟಿ ರೂ.ಗಳ ನೆರವು ನೀಡುವ ತೀರ್ಮಾನ ಕೈಗೊಂಡಿದ್ದೇನೆ. ಘೋಷಣೆಯ ಭಾಗವಾಗಿ ಬಾಡ ಗ್ರಾಮಕ್ಕೆ 1 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗುವುದು ಎಂದು ಘೋಷಿಸಿದರು. ಕನಕದಾಸರ ಪುಣ್ಯ ಭೂಮಿಯಲ್ಲಿ ಸುಮಾರು 30 ಸಾವಿರ ಫಲಾನುಭವಿಗಳಿಗೆ ಏಕಕಾಲಕ್ಕೆ ಸೌಲಭ್ಯಗಳ ವಿತರಣೆ ದಾಖಲೆಯಾಗಿದೆ. ಪ್ರತೀ ಜಿಲ್ಲೆ, ತಾಲೂಕಿನಲ್ಲಿಯೂ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದರು.
ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ
ಪಿಪಿಪಿ ಮಾದರಿಯಲ್ಲಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವ ಯತ್ನ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಇದನ್ನು ಅನುಷ್ಠಾನಗೊಳಿಸಲಾಗುವುದು. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಅನೇಕ ಕಡೆ ಬಸ್ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸರಕಾರ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆಸಿದ್ದು, ಖಾಸಗಿ ಸಹಭಾಗಿತ್ವದಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಮೊದಲ ಪ್ರಯೋಗವನ್ನು ಶಿಗ್ಗಾವಿ ಕ್ಷೇತ್ರದಲ್ಲೇ ಕೈಗೊಳ್ಳುವೆ ಎಂದು ಸಿಎಂ ಹೇಳಿದರು.
ಭಾವುಕರಾದ ಸಿಎಂ
ಶಿಗ್ಗಾವಿ-ಸವಣೂರು ಕ್ಷೇತ್ರದ ಜನತೆ ರೊಟ್ಟಿ, ಹೋಳಿಗೆ, ಬುತ್ತಿ ನೀಡಿ ಪ್ರೀತಿ ತೋರಿದ್ದೀರಿ. ನೀವು ನನ್ನನ್ನು ಗೆಲ್ಲಿಸಿದ್ದರಿಂದಲೇ ನಾನು ಸಿಎಂ ಆಗಿ ನಿಮ್ಮ ಮುಂದೆ ನಿಂತಿದ್ದೇನೆ. ನಿಮ್ಮ ಋಣ ತೀರಿಸುವುದು ಅಸಾಧ್ಯ. ನನ್ನ ದೇಹಾಂತ್ಯ ವಾದಾಗ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲೇ ನಡೆಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.