ಬಿಎಸ್‌ವೈ ಪ್ರಚಾರದಿಂದ ಬಿಜೆಪಿಗೆ ಆನೆ ಬಲ
Team Udayavani, Oct 24, 2021, 6:04 AM IST
ಹಾನಗಲ್: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.
ಎರಡೂ ಕ್ಷೇತ್ರಗಳಲ್ಲಿ ತಲಾ ಎರಡೆರಡು ದಿನ ಪ್ರಚಾರ ನಡೆಸಿರುವ ಯಡಿಯೂರಪ್ಪ ಅವರು ಬಿಜೆಪಿಯ ಗೆಲುವಿನ ಭರವಸೆಯನ್ನು ಹೆಚ್ಚಿಸುತ್ತಿದ್ದಾರೆ. ಇವರು ಇನ್ನಷ್ಟು ದಿನ ಪ್ರಚಾರ ನಡೆಸಬೇಕೆಂಬ ಬೇಡಿಕೆ ಹೆಚ್ಚಾಗಿದೆ.
ಶನಿವಾರ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜಂಟಿಯಾಗಿ ಹಾನಗಲ್ ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದು, ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರ ಮಾಡಲಿರುವ ಯೋಜನೆಗಳ ಪಟ್ಟಿಯನ್ನು ಬಿಚ್ಚಿಟ್ಟಿರುವುದು ಮತದಾರರ ಮನ ಸೆಳೆಯಲು ಅನುಕೂಲವಾಗುತ್ತದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ.
ಕಡಿಮೆಯಾಗದ ಯಡಿಯೂರಪ್ಪ ಜನಪ್ರಿಯತೆ:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರದಲ್ಲಿ ಇಲ್ಲದಿದ್ದರೂ, ಅವರ ಬಗ್ಗೆ ಜನರಿಗೆ ಅಭಿಮಾನ ಮತ್ತು ಪ್ರೀತಿ ಕಡಿಮೆಯಾಗಿಲ್ಲ. ಪ್ರಚಾರ ಸಂದರ್ಭದಲ್ಲಿ ಅವರು ಪಾಲ್ಗೊಳ್ಳುವ ಎಲ್ಲ ಸಭೆಗಳಲ್ಲಿಯೂ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದು, ಅವರ ಭಾಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ಅಲ್ಲದೇ ಅವರ ಹೆಸರು ಹೇಳಿದಾಗಲೂ ಜೈಕಾರ ಹಾಕಿ, ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿತ್ತು.
ಇದನ್ನೂ ಓದಿ:ಭೀಮಾ ಕೋರೆಗಾಂವ್ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್ ಸಿಂಗ್‌ಗೆ ಸಮನ್ಸ್ ಜಾರಿ
ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಬಾಲಕನೋರ್ವ ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಿರುವುದು ಅವರ ಜನಪ್ರಿಯತೆ ಇನ್ನೂ ಇದೆ ಎನ್ನುವುದನ್ನು ಸೂಚಿಸುವಂತಿದೆ.
ಇನ್ನೆರಡು ದಿನ ಪ್ರಚಾರಕ್ಕೆ ಬೇಡಿಕೆ
ಬಿ.ಎಸ್.ಯಡಿಯೂರಪ್ಪ ಎರಡೂ ಕ್ಷೇತ್ರಗಳಲ್ಲಿ ತಲಾ ಎರಡು ದಿನ ಪ್ರಚಾರ ನಡೆಸಿದ್ದು, ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಮತ್ತಷ್ಟು ಹೆಚ್ಚಾಗಿರುವುದರಿಂದ ಇನ್ನೆರಡು ದಿನ ತಮ್ಮ ಕ್ಷೇತ್ರಗಳಲ್ಲಿ ಇನ್ನೆರಡು ದಿನ ಪ್ರಚಾರ ನಡೆಸುವಂತೆ ಅಭ್ಯರ್ಥಿಗಳು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರಂತೆ. ಗುಪ್ತಚರ ಇಲಾಖೆಯ ಮಾಹಿತಿಯೂ ಯಡಿಯೂರಪ್ಪ ಅವರ ಪ್ರಚಾರದಿಂದ ಬಿಜೆಪಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂಬ ವರದಿ ನೀಡಿದೆಯಂತೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಎರಡೂ ಕ್ಷೇತ್ರದಲ್ಲಿ ಬಿಡುವಿಲ್ಲದೆ ಪ್ರಚಾರ ನಡೆಸುತ್ತಿದ್ದು, ತಮ್ಮೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರೂ ಸೇರಿಕೊಂಡಿದ್ದಕ್ಕೆ ಅವರ ಉತ್ಸಾಹವೂ ಹೆಚ್ಚಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.