ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್
Team Udayavani, Sep 29, 2020, 4:37 PM IST
ಹಾವೇರಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಎಲ್ಲೂ ಇದರ ಕುರಿತು ಚರ್ಚೆ, ಮಾತುಕತೆಯಾಗಿಲ್ಲ. ಯಾರೂ ಕೂಡ ಇದರ ಬಗ್ಗೆ ಮಾತನಾಡಿಲ್ಲ. ಮುಂದಿನ ಮೂರು ವರ್ಷ ಬಿಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ಸುರೇಶ್ ಅಂಗಡಿಯವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹಿಂದೆ ಸಭೆಯಾಗಿತ್ತು ಎಂಬ ಸೋದರ ಮಾವ ಲಿಂಗರಾಜ ಹೇಳಿಕೆ ವಿಚಾರವಾಗಿ ಮಾತನಾಡಿದ ಕಟೀಲ್, ಸುರೇಶ್ ಅಂಗಡಿ ನನಗೆ ಬಹಳ ಆತ್ಮೀಯರು ಅವರು ಎಂದು ಹಾಗೇ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಪರವಾದ ಕಾಯ್ದೆ ವಿರುದ್ಧ ಕಾಂಗ್ರೆಸ್ ರಾಜಕಾರಣ ಮಾಡಿದೆ. ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತನೆ ತನ್ನ ಬೆಳೆಗಳ ಮಾರುಕಟ್ಟೆ ಧಾರಣೆ ರೈತನೇ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿದೆ. ಈ ಕಾಯ್ದೆಯಿಂದ ಬಿಜೆಗೆ ಲಾಭವಾಗುತ್ತದೆ ಎಂದು ವಿರೋಧಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ:ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್
ದಲ್ಲಾಳಿಗಳ ಪರವಾಗಿ ಕಾಂಗ್ರೆಸ್ ಬ್ಯಾಟಿಂಗ್ ಮಾಡುತ್ತಿದೆ. ರೈತರ ದಲ್ಲಾಳಿಗಳ ತುಳಿತಕ್ಕೆ ಒಳಗಾಗಿದ್ದಾರೆ. ಇವತ್ತಿನಿಂದ ಅದು ಪರಿವರ್ತನೆಯಾಗಿದೆ. ಮುಂದೆ ರೈತನ ತೀರ್ಮಾನವೇ ಅಂತಿಮ ತೀರ್ಮಾನವಾಗುತ್ತದೆ. ದಲ್ಲಾಳಿಗಳು ರೈತ ಮನೆ ಬಾಗಿಲಿಗೆ ಬರುತ್ತಾರೆ. ರೈತ ವಿರೋಧಿಯಾಗಿ ಕಾಂಗ್ರೆಸ್ ತೀರ್ಮಾನ ಮಾಡಿದೆ.
ನಿನ್ನೆಯ ಬಂದ್ ಗೆ ಬೆಂಬಲ ಸೂಚಿಸಿ ಕಿಚ್ಚು ಹಚ್ಚುವ ಪ್ರಯತ್ನ ಮಾಡಿದ್ದಾರೆ. ಬಂದ್ ವಿಫಲವಾಗಿದೆ, ರಾಜ್ಯದ ಜನರು ಕೇಂದ್ರ,ರಾಜ್ಯ ಸರ್ಕಾರದ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್ ರೈತ ವಿರೋಧಿಯಾಗಿದೆ ಎಂದು ಕಟೀಲ್ ವಾಗ್ದಾಳಿ ನಡೆಸಿದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.