ಯುವಶಕ್ತಿ ಸದ್ಭಳಕೆಯಿಂದ ದೇಶ ಅಭಿವೃದ್ಧಿ


Team Udayavani, Jan 13, 2019, 10:14 AM IST

13-january-18.jpg

ಬ್ಯಾಡಗಿ: ವಿಶ್ವದ ಇನ್ನಿತರ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವುದನ್ನು ನೋಡಿದರೆ ಯುವಶಕ್ತಿ ಸದ್ಭಳಕೆ ಮಾಡಿಕೊಂಡ ದೇಶಗಳಿಗೆ ಉತ್ತಮ ಭವಿಷ್ಯವಿದೆ ಎಂಬುದು ಸಾಬೀತಾಗಿದೆ. ಭಾರತ ಶೇ. 45 ರಷ್ಟು ಯುವಕರನ್ನು ಹೊಂದಿದ್ದರೂ ಇನ್ನೂ ಟೇಕಾಫ್‌ ಆಗದಿರುವುದು ಖೇದಕರ ಸಂಗತಿ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಬಿ.ಎಂ. ಮುಜಾವರ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಬಿಇಎಸ್‌ ಮಹಾವಿದ್ಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ‘ಚೇತನ ಚಿಲುಮೆ’ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಏರ್ಪಡಿಸಿದ್ದ ‘ರಾಷ್ಟ್ರೀಯ ಯುವ ದಿವಸ’ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತು ಏಳು ದಶಕ ಕಳೆದರೂ ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಅಪೌಷ್ಟಿಕತೆ, ಬಡತನ ಸೇರಿದಂತೆ ಹಲವಾರು ಸಾಮಾಜಿಕ ಸಮಸ್ಯೆಗಳು ಬಗೆಹರಿದಿಲ್ಲ. ಹಾಗಿದ್ದರೇ ನಮ್ಮಲ್ಲಿನ ಯುವಶಕ್ತಿ ಎತ್ತ ಸಾಗುತ್ತಿದೆ? ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಥವಾ ಪಾತ್ರವೇನು ಎಂಬುದನ್ನು ನಮ್ಮೊಳಗೆ ಒಮ್ಮೆ ಪ್ರಶ್ನೆಗಳನ್ನು ಮಾಡಿಕೊಳ್ಳುವ ಮೂಲಕ ದೇಶಕ್ಕಾಗಿ ನಾನು ನೀಡಿರುವಂತಹ ಕೊಡುಗೆಗಳೇನು ಎಂಬುದನ್ನು ಪ್ರಶ್ನಿಸಿಕೊಳ್ಳುವುದು ಹೆಚ್ಚು ಸೂಕ್ತವಾಗಿದೆ ಎಂದರು.

ಕಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ರಾಜೇಶ್‌ ಹೊಸ್ಮನಿ ಮಾತನಾಡಿ, ‘ಏಳಿ ಏದ್ದೇಳಿ ಗುರಿ ಮುಟ್ಟುವವರೆಗೂ ನಿಲ್ಲದಿರಿ’ ಎಂಬುದಾಗಿ ಯುವಕರನ್ನುದ್ದೇಶಿಸಿ ಸ್ವಾಮಿ ವಿವೇಕಾನಂದ ಅವರು ನುಡಿದಂತಹ ವಾಣಿ ಈ ಸಂದರ್ಭದಲ್ಲಿ ಹೆಚ್ಚು ಸೂಕ್ತವಾಗಿದೆ. ಅವರ ತತ್ವಾದರ್ಶಗಳ ಪಾಲನೆ ಜೊತೆಗೆ ದೇಶದ ಯುವಕರು ತೋರಬೇಕಾದ ಸಾಮೂಹಿಕ ಹೊಣೆಗಾರಿಕೆ ಮರೆತರೆ ಬಹುಶಃ ದೇಶ ಇನ್ನಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಉಪನ್ಯಾಸ ನೀಡಿ ಮಾತನಾಡಿದ ಪ್ರೊ| ಡಾ| ಎಸ್‌.ಡಿ. ಬಾಲಾಜಿರಾವ್‌, ಜಾಗತೀಕರಣದ ನೆಪದಲ್ಲಿ ದೇಶದ ಯುವ ಸಮೂಹ ಕವಲುದಾರಿಯಲ್ಲಿ ಮುಳುಗಿದ್ದು, ಭಾರತೀಯ ಸಂಸ್ಕೃತಿ ಹಾಗೂ ಆಚಾರ ವಿಚಾರಗಳ ಪಾಲನೆಯಿಂದ ಹಿಂದೆ ಸರಿಯುತ್ತಿರುವುದು ದುರಂತದ ಸಂಗತಿ, ಯುವಕರು ಇನ್ನೊಬ್ಬರ ತಪ್ಪುಗಳನ್ನು ಪ್ರಶ್ನಿಸುವ ಮೊದಲು, ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಕ್ರೀಯಾಶೀಲರಾಗುವ ಮೂಲಕ ಇನ್ನೊಬ್ಬರಿಗೆ ಆದರ್ಶವಾಗಬೇಕು ಎಂದು ಕರೆ ನೀಡಿದರು.

ಪ್ರಾಚಾರ್ಯ ಕೆ.ಜಿ. ಖಂಡೇಬಾಗೂರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪಿಎಸ್‌ಐ ಎಂ.ಎಂ. ಮಹಾಂತೇಶ್‌, ಎಎಸ್‌ಐ ಖಾಜಿ, ಉಪ ತಹಶೀಲ್ದಾರ್‌ ಮೋಹನ ಕಡೂರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಎಸ್‌.ತಟ್ಟಿ, ಕಾರ್ಯದರ್ಶಿ ಎಚ್.ಎಸ್‌.ಜಾಧವ, ಉಪನ್ಯಾಸಕರಾದ ಡಾ| ಎಸ್‌.ಜಿ. ವೈದ್ಯ, ಪಿ.ಎಂ .ರಾಮಗಿರಿ, ಎಸ್‌.ವಿ. ಉಜ್ಜಯನಿಮಠ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.