Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Team Udayavani, Nov 5, 2024, 4:00 PM IST

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

ಹಾವೇರಿ (ಶಿಗ್ಗಾವಿ): ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೆ ಜೊತೆಯಲ್ಲಿದ್ದೆ ಯಡಿಯೂರಪ್ಪಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.‌

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು.

ಮೋದಿ ಮಹಾನ್ ಸುಳ್ಳುಗಾರ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಭಾಯ್ ಭಾಯ್ ಆಗಿದ್ದಾರೆ ಎಂದರು.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದರು.

ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿಯವರೇ? ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗೂದೂ ಇಲ್ಲ, ಜಗ್ಗೂದೂ ಇಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದರು.

40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೇನೆ. ಮುಖ್ಯಮಂತ್ರಿಯಾಗಿದ್ದೇನೆ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡುತ್ತೇನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡು ಕೂತಿದ್ದ ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ. ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಆಚರಿಸಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಟೀಕಿಸಿದರು.

ನಾವು ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದ ನೈತಿಕತೆ ಆಧಾರದಲ್ಲಿ‌ ಮತ್ತೆ ಜನರ ಬಳಿಗೆ ಬಂದು ಮತ ಕೇಳುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು

ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ ಎಂದರು.

ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದ್ದೇವೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ. ಬಸವರಾಜ ಬೊಮ್ಮಾಯಿಯನ್ನು ಶಕುನಿ ಎಂದು ಈಗಷ್ಟೆ ಎಲ್ಲಾ ಹೇಳಿದರು. ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತವರು ರಾಜಕಾರಣದಲ್ಲಿ ಇರಬಾರದು. ಆದ್ದರಿಂದ ಪಠಾಣ್ ಅವರನ್ನು ಗೆಲ್ಲಿಸಿ ಕಳುಹಿಸಿ. ಅಜ್ಜಂಪೀರ್ ಖಾದ್ರಿ ಅವರಿಗೂ ಒಳ್ಳೆಯ ಅವಕಾಶ ಕಲ್ಪಿಸುತ್ತೇನೆ ಎಂದರು.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಈ ಬಾರಿ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅಷ್ಟೇ ಸತ್ಯ. ಇಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ ಎಂದರು.

ಸಮಾವೇಶದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ಕೆ.ಜೆ.ಜಾರ್ಜ್, ರಹೀಂ ಖಾನ್, ವಿಪಕ್ಷ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವರಾದ ಎಚ್.ಆಂಜನೇಯ, ಆರ್.ಶಂಕರ್, ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಪ್ರಸಾದ ಅಬ್ಬಯ್ಯ, ವಿಪ ಸದಸ್ಯರಾದ ಪ್ರಕಾಶ ರಾಠೋಡ, ನಾರಾಯಣ ಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಾಜಿ ಶಾಸಕರಾದ ಅಜ್ಜಂಫೀರ್ ಖಾದ್ರಿ, ಅಶೋಕ ಮನಗೂಳಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ, ಬಿ.ಆರ್.ಯಾವಗಲ್ಲ, ವಿ.ಎಸ್.ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Naxaliam-End

Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.