ಹುಷಾರ್..ರಸ್ತೆ ವಧ್ಯೆ ಇದೆ ವಿದ್ಯುತ್ ಕಂಬ
•ಅಧಿಕಾರಿಗಳ ನಿರ್ಲಕ್ಸ್ಯ ಕೈಗನ್ನಡಿ •ಕಂಬ ಸ್ಥಳಾಂತರಿಸದೆ ಡಾಂಬರೀಕರಣ
Team Udayavani, May 6, 2019, 4:10 PM IST
ಹಾವೇರಿ: ವಿದ್ಯಾನಗರ ಪಶ್ಚಿಮ ಬಡಾವಣೆಯಲ್ಲಿ ರಸ್ತೆ ಮಧ್ಯಲ್ಲಿಯೇ ವಿದ್ಯುತ್ ಕಂಬ ಬಿಟ್ಟು ಡಾಂಬರೀಕರಣ ಮಾಡಿರುವುದು.
ಹಾವೇರಿ: ಕೆಲ ರಸ್ತೆ ಮಧ್ಯೆ ಗುಂಡಿಗಳು ಇರುವುದು, ಇನ್ನು ಕೆಲ ರಸ್ತೆಗಳ ಮಧ್ಯೆಯೇ ಕಾಲುವೆ ಇರುವುದನ್ನೂ ನೋಡಿದ್ದೇವೆ. ಆದರೆ, ರಸ್ತೆ ಮಧ್ಯೆಯೇ ವಿದ್ಯುತ್ ಕಂಬ ಇರುವುದು ಕಾಣುವುದು ಅಪರೂಪ. ಇಂಥ ಅಪರೂಪದ ದೃಶ್ಯ ನೋಡಬೇಕೆಂದರೆ ಇಲ್ಲಿಯ ವಿದ್ಯಾನಗರದ ಪಶ್ಚಿಮ ಬಡಾವಣೆಯ ಎರಡನೇ ಕ್ರಾಸ್‌ಗೆ ಬರಬೇಕು.!
ಇಲ್ಲಿ ರಸ್ತೆ ಮಧ್ಯೆ ಇರುವ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಕಂಬ ಅಲ್ಲಿಯೇ ಇರಲು ಬಿಟ್ಟು ರಸ್ತೆಯ ಡಾಂಬರೀಕರಣ ಮಾಡಿದ್ದು ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ರಸ್ತೆಯ ಮಧ್ಯದಲ್ಲಿಯೇ ಹಲವಾರು ವರ್ಷಗಳಿಂದ ವಿದ್ಯುತ್ ಕಂಬವಿದ್ದರೂ ಇದನ್ನು ಸಂಬಂಧಪಟ್ಟ ಇಲಾಖೆ ಸ್ಥಳಾಂತರಿಸುವ ಗೋಜಿಗೆ ಹೋಗಿಲ್ಲ. ಪರಿಣಾಮ ಇಲ್ಲಿಯ ನಿವಾಸಿಗಳು ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ.
ರಾತ್ರಿ ಸಮಯದಲ್ಲಿ ಪರಸ್ಥಳಗಳಿಂದ ಬರುವ ಜನರು, ವಾಹನ ಸವಾರರು ವಿದ್ಯುತ್ ಕಂಬ ಕಾಣದೇ ಅವಘಡಗಳು ಸಂಭವಿಸಿದ ಘಟನೆಗಳು ಸಾಕಷ್ಟು ನಡೆದಿವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು. ರಸ್ತೆ ಮಧ್ಯದಲ್ಲಿಯೇ ವಿದ್ಯುತ್ ಕಂಬ ಬಂದಿರುವುದರಿಂದ ದೊಡ್ಡ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಿದಂತಾಗಿದೆ.
ಸ್ಥಳಾಂತರಿಸದೇ ಡಾಂಬರೀಕರಣ:
ಇಲ್ಲಿಯ ನಿವಾಸಿಗಳು ವಿದ್ಯುತ್ ಕಂಬ ಸ್ಥಳಾಂತರಗೊಳಿಸುವಂತೆ ನಗರಸಭೆ ಹಾಗೂ ಹೆಸ್ಕಾಂ ಕಚೇರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿಲ್ಲ. ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ವಿದ್ಯುತ್ ಕಂಬ ಅಡ್ಡ ಬಂದಿದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಅಡ್ಡಿಯಾಗಿತ್ತು. ಆದರೆ, ಈಗ ರಸ್ತೆ ಮಧ್ಯೆ ವಿದ್ಯುತ್ ಕಂಬ ಇದ್ದರೂ ಕೂಡ ಅದನ್ನು ಅಲ್ಲಿಯೇ ಹಾಗೆಯೇ ಬಿಟ್ಟು ರಸ್ತೆಯನ್ನು ಡಾಂಬರೀರಣಗೊಳಿಸಿ ಅಭಿವೃದ್ಧಿ ಪಡಿಸಲಾಗಿದೆ.
ರಸ್ತೆ ಮಧ್ಯದ ಕಂಬವನ್ನು ಸ್ಥಳಾಂತರಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರಿಗೆ, ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ನಗರಸಭೆಯವರು ವಿದ್ಯುತ್ ಕಂಬ ಸ್ಥಳಾಂತರಿಸುವುದು ಹೆಸ್ಕಾಂನವರ ಕೆಲಸ ಎಂದು ಸಬೂಬು ನೀಡುತ್ತಾರೆ. ಆದರೆ, ಹೆಸ್ಕಾಂ ಇಲಾಖೆ ಅಧಿಕಾರಿಗಳು ಇದು ನಗರಸಭೆಗೆ ಸಂಬಂಧಪಟ್ಟದು ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದ್ದು, ಯಾರೂ ವಿದ್ಯುತ್ ಕಂಬ ಸ್ಥಳಾಂತಕ್ಕೆ ಮುಂದಾಗುತ್ತಿಲ್ಲ. ಪರಿಣಾಮ ಇಲ್ಲಿನ ನಿವಾಸಿಗಳು ನಿತ್ಯ ಹೆಸ್ಕಾಂ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.