ಬೆನ್ನುಹುರಿ ಚಿಕಿತ್ಸೆಗೆ ರಾಣಿಬೆನ್ನೂರಲ್ಲಿ ಕೇಂದ್ರ ಆರಂಭ

Team Udayavani, Dec 23, 2019, 1:06 PM IST

hv-tdy-3

ರಾಣಿಬೆನ್ನೂರ: ಯಾರೂ ಅಸಹಾಯಕರಲ್ಲ. ಅಸಹಾಯಕರಿಗೆ ಭಗವಂತ ಸಹಾಯ ಮಾಡುವವರನ್ನು ನಿರ್ಮಾಣ ಮಾಡಿರುತ್ತಾರೆ. ಬೆನ್ನುಹುರಿ ಚಿಕಿತ್ಸೆಗೆ ಸೌಲಭ್ಯಗಳನ್ನು ಒದಗಿಸಿ ಅವರಲ್ಲಿ ಮಾನಸಿಕ ಸಮತೋಲನೆ ತುಂಬುವುದಕ್ಕಾಗಿ ಪುನರ್ವಸತಿ ಕೇಂದ್ರವನ್ನು ನಿಶಾರ್ಡ್‌ ಸಂಸ್ಥೆಯ ಸಹಕಾರದೊಂದಿಗೆ ತೆರೆಯಲಾಗಿದೆ ಎಂದು ಸ್ಥಳೀಯ ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ ಹೇಳಿದರು.

ಇಲ್ಲಿನ ಮೇಡ್ಲೆರಿ ರಸ್ತೆಯ ಓಂ ಆಸ್ಪತ್ರೆಯಲ್ಲಿ ರವಿವಾರ ದೈಹಿಕ ಮತ್ತು ಸಾಮಾಜಿಕ ಪುನಶ್ಚೇತನ ಕೇಂದ್ರ ಮತ್ತು ಮಕ್ಕಳ ಶೀಘ್ರ ಮಧ್ಯಸ್ತಿಕೆ ಕೇಂದ್ರವನ್ನು ನಿಶಾರ್ಡ್‌ ಸೇವಾ ಸಂಸ್ಥೆ, ಓಂ ಆಸ್ಪತ್ರೆ ಮತ್ತು ಬೆಂಗಳೂರಿನ ದಿ ಅಸೋಸಿಯೇಷನ್‌ ಆಫ್‌ ಪೀಪಲ್‌ ವಿತ್‌ ಡಿಸೆಬಿಲಿಟಿ ಇವರುಗಳ ಸಹಯೋಗದಲ್ಲಿ ದೈಹಿಕ ಮತ್ತು ಸಾಮಾಜಿಕ ಪುನಶ್ಚೇತನ ಕೇಂದ್ರದ ಉದ್ಘಾಟಿಸಿ ಅವರು ಮಾತನಾಡಿದರು. ಬೆನ್ನುಹುರಿಯಿಂದ ಬಳಲುವವರು ಮಾನಸಿಕ ಸಾಮಾರ್ಥ್ಯವನ್ನು ಅವರೇ ನಿರ್ಮಾಣ ಮಾಡಿಕೊಳ್ಳಬೇಕಿದೆ ಎಂದರು. ಓಂ ಆಸ್ಪತ್ರೆಯ ಮುಖ್ಯಸ್ಥ ಡಾ| ಮನೋಜ ಸಾವಕಾರ ಮಾತನಾಡಿ, ಬೆನ್ನುಹುರಿ ಅಪಘಾತವು ಇತರೆ ಅಪಘಾತಗಳಿಗೆ ಹೋಲಿಸಿದರೆ ಹೆಚ್ಚು ವಿನಾಶಕಾರಿ ಗಾಯವಾಗಿದೆ. ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಯು ಅಪಘಾತದ ಮಟ್ಟದಿಂದ ಕೆಳಗೆ ಸಂಪೂರ್ಣವಾಗಿ ಸ್ಪರ್ಶ ಜ್ಞಾನವನ್ನು ಕಳೆದುಕೊಂಡು, ದಿನನಿತ್ಯದ ಚಟುವಟಿಕೆಗಳಿಗೆ ಬೇರೋಬ್ಬರ ಮೇಲೆ ಅವಲಂಬಿತವಾಗಿರುತ್ತಾರೆ. ಈ ವ್ಯಕ್ತಿಗಳು ಅತಿ ಬೇಗನೆ ದ್ವಿತೀಯಾಂತರ ಸಮಸ್ಯೆಗಳಿಗೆ ಒಳಗಾಗಿ ಶವದ ರೂಪದಲ್ಲಿ ನರಳುತ್ತಿದ್ದಾರೆ ಎಂದರು. ದೈಹಿಕ ವ್ಯಾಯಾಮ, ಬೆನ್ನುಲುಬು ಆರೈಕೆ ಸಲಹಾ ಪಿಸಿಯೋಥೆರಪಿಸ್ಟ್‌, ಹಿರಿಯಸಿಯೋಥೇರಪಿ ತಂತ್ರಜ್ಞರು, 2 ಜೂನಿಯರ್‌ ಸಹಾಯಕ ಥೆರೆಪಿಸ್ಟ್‌ ಮತ್ತು ಕೀಲು-ಮೂಳೆ ತಜ್ಞರನ್ನು ಒಂದು ಪರಿಣಿತರ ತಂಡದೊಂದಿಗೆ ಬೆನ್ನುಹುರಿ ಅಪಘಾತದ ವಿವಿಧ ಕಾರ್ಯಕ್ರಮಗಳ ಬಗ್ಗೆ ಕಾರ್ಯನಿರ್ವಹಿಸುತ್ತಿದೆ ಎಂದರು.

ನಿಶಾರ್ಡ್‌ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವಕಾರ ಮಾತನಾಡಿ, ದೈನಂದಿನ ಚಟುವಟಿಕೆಗಳ ನಿರ್ವಹಣೆ, ಪ್ರಾಥಮಿಕ ಮತ್ತು ದ್ವೀತಿಯಾಂತರ ಸಮಸ್ಯೆಗಳ ನಿರ್ವಹಣೆ, ಪೋಷಕರಿಗೆ ನಿರ್ವಹಣೆಯ ತರಬೇತಿ, ವೈಯಕ್ತಿಕ ಮತ್ತು ಕೌಟುಂಬಿಕ ಆಪ್ತ ಸಮಾಲೋಚನೆ, ಸೂಕ್ತ ಸಾಧನ-ಸಲಕರಣೆಗಳನ್ನು ಬಳಸಿ ಮತ್ತು ಚಲನೆ ಮಾಡಿಸುವ ತರಬೇತಿ ನೀಡಲಾಗುವುದು ಎಂದರು. ಬೆಂಗಳೂರ ಎಪಿಡಿ ಸಂಸ್ಥೆಯ ನಿರ್ದೇಶಕ ಶಿವ ಹಿರೇಮಠ, ಡಾ| ಹೆವನ್ನಾ ಬಾಬು, ರವಿ ಬಿ.ಜೆ, ನಿಂಗಪ್ಪ ದೊಡ್ಡಮನಿ, ಮಂಜುನಾಥ ಮಳ್ಳಪ್ಪನವರ, ಶಿವಕುಮಾರ ದುಗ್ಗತ್ತಿಮಠ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

BSY-Shiggavi

By Election: ಒಂದುವರೆ ವರ್ಷದಿಂದ ಕಾಂಗ್ರೆಸ್‌ ಸರಕಾರ 1 ಕಿ.ಮೀ.ರಸ್ತೆ ಮಾಡಿಲ್ಲ: ಬಿಎಸ್‌ವೈ

Yathnal-Shiggavi

By Election: ದೇಶವನ್ನೇ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡ್ತೇವೆ: ಶಾಸಕ ಯತ್ನಾಳ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.