ವಿವಿಧ ಇಲಾಖೆಗಳಿಗೆ ಸಿಇಒ ದಿಢೀರ್‌ ಭೇಟಿ

Team Udayavani, Jun 28, 2019, 2:29 PM IST

hv-tdy-4…

ಹಾನಗಲ್ಲ: ಸರ್ಕಾರಿ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಜಿಪಂ ಸಿಇಒ ಕೆ.ಲೀಲಾವತಿ ರೋಗಿಗಳಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಹಾನಗಲ್ಲ: ಜಿಪಂ ಸಿಇಒ ಕೆ.ಲೀಲಾವತಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳಿಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಮೂಲ ಸೌಕರ್ಯ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿದರು.

ಗುರುವಾರ ಬೆಳಗ್ಗೆ ತಾಲೂಕಿನ ಅಕ್ಕಿಆಲೂರು ಎನ್‌ಡಿಎಚ್ಎಸ್‌ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷಾ ಚಟುವಟಿಕೆಗಳನ್ನು ಪರಿಶೀಲಿಸಿದರು.

ಗೆಜ್ಜಿಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಆಹಾರ ಸಾಮಗ್ರಿ, ಅಡುಗೆಕೋಣೆ ಸ್ವಚ್ಛತೆ ಪರಿಶೀಲಿಸಿದರು. ನಂತರ ಹಾನಗಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸಮಸ್ಯೆ ಆಲಿಸಿದರು. ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ ಬಗ್ಗೆ ವಿವರ ಪಡೆದರು. ಆಸ್ಪತ್ರೆಯಲ್ಲಿ ಡಿ-ದರ್ಜೆಯ ನೌಕರರ ಅವಶ್ಯಕತೆಯಿದ್ದು, ಇದರಿಂದಾಗಿ ಸ್ವಚ್ಛತೆ ಕಾಪಾಡಲು ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ, ಕೂಡಲೇ ಡಿ ದರ್ಜೆ ನೌಕರರನ್ನು ನೇಮಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ, ವೈದ್ಯರ ಕೊರತೆ ನಿವಾರಣೆಗಾಗಿ ಪ್ರತಿ ಸೋಮವಾರ ಜಿಲ್ಲಾಧಿಕಾರಿಗಳು ನೇಮಕಾತಿಗಾಗಿ ಸಂದರ್ಶನ ಕೈಗೊಳ್ಳುತ್ತಿದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಆಯುಷ್‌ ವೈದ್ಯರ ಸೇವೆಯನ್ನೂ ಪಡೆದುಕೊಳಲಾಗುತ್ತಿದೆ. ಜಿಲ್ಲಾ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಹೆಚ್ಚುವರಿಯಾಗಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ ಒದಗಿಸಲು ಸೂಚಿಸಲಾಗುವುದು. ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅವುಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಕಟ್ಟಡ ಮಂಜೂರಾತಿ ದೊರೆತಿವೆ. ಒಂದು ವರ್ಷದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿವೆ. ಮಾತೃಪೂರ್ಣ ಯೋಜನೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಮಹಿಳೆಯರು ಅಂಗನವಾಡಿ ಕೇಂದ್ರಗಳಿಗೆ ಬರಲು ಮುಜುಗರ ಪಡುತ್ತಿದ್ದಾರೆ. ಹೀಗಾಗಿ ಊಟವನ್ನು ಮನೆಗಳಿಗೇ ಕೊಂಡೊಯ್ಯುತ್ತಿದ್ದಾರೆ ಎಂದು ವಿವರಿಸಿದರು.

ನಂತರ ಪಟ್ಟಣದ ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ತೆರಳಿ ಮಕ್ಕಳೊಂದಿಗೆ ಚರ್ಚಿಸಿದರು. ವಿದ್ಯಾರ್ಥಿಗಳ ಹಾಜರಾತಿ ಹಾಗೂ ವಸತಿ ವ್ಯವಸ್ಥೆ, ಕುಡಿಯುವ ನೀರು, ಅಡುಗೆ ಕೋಣೆ ವೀಕ್ಷಿಸಿ, ಮಕ್ಕಳಿಗೆ ಪೌಷ್ಟಿಕ ಆಹಾರ ನಿಗದಿತ ವೇಳೆ ನೀಡುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.