ಹಿಂದುಳಿದವರ ಚೈತನ್ಯ ಶಕ್ತಿ ದೇವರಾಜ ಅರಸು

ಶಾಸಕ ನೆಹರು ಓಲೇಕಾರ ಅಭಿಮತ; ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 107ನೇ ಜನ್ಮ ದಿನಾಚರಣೆ

Team Udayavani, Aug 21, 2022, 2:49 PM IST

15

ಹಾವೇರಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಅಲ್ಲದೇ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿರಂತರ ಶ್ರಮಿಸಿದ ಧೀಮಂತ ನಾಯಕ ಎಂದು ಶಾಸಕ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಹೇಳಿದರು.

ನಗರದ ಡಾ|ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಪರಿವರ್ತನೆಯ ಮಾರ್ಗದಲ್ಲಿ ಅಸಮಾನತೆಯನ್ನು ತೊಡೆದು ವ್ಯಕ್ತಿಯ ಸ್ವಾತಂತ್ರÂಕ್ಕೆ ಬೆಲೆ ನೀಡಿದ ಅರಸು ಅವರು, ಜೀತ ವಿಮುಕ್ತಿ ಜಾರಿಗೆ ತಂದರು. ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ, ವಿದ್ಯಾರ್ಥಿನಿಲಯ, ವೃದ್ಧಾಪ್ಯವೇತನ, ಸ್ಟೈಫಂಡ್‌, ಭಾಗ್ಯಜ್ಯೋತಿ ಹೀಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಅರಸು ಅವರು ಹಿಂದುಳಿದ ವರ್ಗಗಳ ಜನರು ಹೊಸ ಬದುಕು ಪಡೆದು ಹೊಸ ಚೈತನ್ಯದಿಂದ ಬದುಕಲು ರೂವಾರಿಗಳಾದರು ಎಂದು ಹೇಳಿದರು.

ಸನ್ಮಾನ: ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾದ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಚಂದ್ರಶೇಖರ ಅವರಿಗೆ 50 ಸಾವಿರ ರೂ. ಚೆಕ್‌, ಪ್ರಮಾಣಪತ್ರ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.

ಜಿಲ್ಲಾ ಮಟ್ಟದ ಡಿ.ದೇವರಾಜ್‌ ಅರಸ್‌ ಪ್ರಶಸ್ತಿ ಸ್ವೀಕರಿಸಿದ ಜಿ.ಟಿ.ಚಂದ್ರಶೇಖರ ಅವರು ಮಾತನಾಡಿ, ಬಸವಣ್ಣನವರು ಸಮಾನತೆ ಸಾರಿದರು. ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಮೀಸಲಾತಿ ತಂದರು. ಡಿ.ದೇವರಾಜ ಅರಸು ಅವರು ಎಲ್ಲವನ್ನೂ ಜಾರಿಗೆ ತಂದರು. ಹಿಂದುಳಿದ ವರ್ಗ, ಎಸ್ಸಿ, ಎಸ್ಟಿ ಸಮುದಾಯ ಡಿ.ದೇವರಾಜ ಅರಸು ಅವರನ್ನು ಸ್ಮರಿಸುವಂತಾಗಿದೆ ಎಂದರು.

ಡಿ.ದೇವರಾಜ ಅರಸು ಅವರ ಜೀವನ ಮತ್ತು ಚಿಂತನೆ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಪ್ರಮೋದ ನಲವಾಗಲ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿವಿಧ ಹಿಂದುಳಿದ ವರ್ಗಗಳ ವಸತಿ ಶಾಲೆಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬೀದಿ ನಾಟಕ ಕಲಾವಿದರಿಂದ ಡಿ.ದೇವರಾಜ ಅರಸು ಜೀವನ ಕುರಿತು ರೂಪಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಶೋಕ ಗದ್ದಿಗೌಡರ, ಮಹೇಂದ್ರ ಪಡಿಕರ, ಚಂದ್ರಪ್ಪ ಚಕ್ರಸಾಲಿ, ಬಸವರಾಜ, ಮಂಜುನಾಥ, ರಮೇಶ ಆನವಟ್ಟಿ, ಎಂ.ಎಸ್‌.ಕೋರಿಶೆಟ್ಟರ ಇತರರು ಇದ್ದರು.

ಇಂದಿನ ಯುವ ಪೀಳಿಗೆ ಡಿ.ದೇವರಾಜ ಅರಸು ಅವರ ಹೆಸರು ಉಳಿಸುವ ಕೆಲಸ ಮಾಡಬೇಕು. ಅವರ ಕಾರ್ಯಗಳನ್ನು ಸ್ಮರಿಸಬೇಕು ಹಾಗೂ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಹಿಂದುಳಿದ ವರ್ಗಗಳ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. -ನೆಹರು ಓಲೇಕಾರ, ಶಾಸಕರು

ಟಾಪ್ ನ್ಯೂಸ್

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.