14ರಿಂದ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ
Team Udayavani, Jan 13, 2020, 1:14 PM IST
ಹಾವೇರಿ: ತಾಲೂಕಿನ ನರಸೀಪುರದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವ, ವಚನ ಮಹಾರಥೋತ್ಸವ, ಚೌಡಯ್ಯನವರ 900ನೇ ಜಯಂತಿ, ಲಿಂ| ಶಾಂತಮುನಿ ಸ್ವಾಮೀಜಿಗಳ 4ನೇ ಸ್ಮರಣೋತ್ಸವ, ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳ 3ನೇ ವರ್ಷದ ಪೀಠಾರೋಹಣ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಜ. 14ಹಾಗೂ 15ರಂದು ಆಯೋಜಿಸಲಾಗಿದೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.
ರವಿವಾರ ನಗರದ ಪ್ರವಾಸಿಗೃಹದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 14ರಂದು ಸಂಜೆ 5:30ಕ್ಕೆ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ಜರುಗಲಿದೆ. ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಉಪಸ್ಥಿತಿಯಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಬಾಗಲಕೋಟೆ ಬಸವಲಿಂಗ ಸ್ವಾಮೀಜಿ, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಸಿಂದಗಿಯ ಶಾಂತಗಂಗಾಧರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅಥಣಿಯ ಶಶಿಕಾಂತ ಪಡಸಲಗಿ ಸಮ್ಮುಖ ವಹಿಸುವರು. ಶಾಸಕ ಅರುಣಕುಮಾರ ಪೂಜಾರ ಉದ್ಘಾಟಿಸುವರು. ವಿಪ ಸದಸ್ಯ ಎನ್. ರವಿಕುಮಾರ ಅಧ್ಯಕ್ಷತೆ ವಹಿಸುವರು. ವಿಪ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ನೇತೃತ್ವ ವಹಿಸುವರು. ಶಾಸಕ ಬಿ. ನಾರಾಯಣರಾವ್, ವಿಪ ಸದಸ್ಯ ಶ್ರೀನಿವಾಸ ಮಾನೆ, ಜಿಪಂ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ ಇತರರು ಪಾಲ್ಗೊಳ್ಳುವರು ಎಂದರು.
ಜ. 15ರಂದು ಬೆಳಗ್ಗೆ 8ಕ್ಕೆ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಧರ್ಮ ಧ್ವಜಾರೋಹಣ ನೆರವೇರಿಸುವರು. ಬೆಳಗ್ಗೆ 11:30ಕ್ಕೆ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರಚೌಡಯ್ಯನವರ 900ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸುವರು. ನಿಡುಮಾಮಿಡಿ ಮಠದ ಚನ್ನಮಲ್ಲವೀರಭದ್ರ ಸ್ವಾಮೀಜಿ, ಇಳಕಲ್ಲನ ಗುರುಮಹಾಂತ ಸ್ವಾಮೀಜಿ, ಬಾಲೇಹೊಸೂರ ದಿಂಗಾಲೇಶ್ವರ ಸ್ವಾಮೀಜಿ, ಹೊಸದುರ್ಗದ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ನೇತೃತ್ವ ವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಗಂಗಾಪರಮೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡುವರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ದೋಣಿಗೆ ಪುಷ್ಪಾರ್ಪಣೆ ಮಾಡುವರು. ವೇದವ್ಯಾಸರ ಭಾವಚಿತ್ರಕ್ಕೆ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಪುಷ್ಪಾರ್ಪಣೆ ಮಾಡುವರು. ಡಾ| ಈಶ್ವರ ಮಂಟೂರ, ವಿಪ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಸಚಿವರಾದ ಜಗದೀಶ ಶೆಟ್ಟರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಎಂ. ಉದಾಸಿ, ವಿರುಪಾಕ್ಷಪ್ಪ ಬಳ್ಳಾರಿ, ಬಿ.ಸಿ. ಪಾಟೀಲ, ಲಾಲಾಜಿ ಮೆಂಡನ್, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ, ಪ್ರಮೋದ ಮಧ್ವರಾಜ, ಡಾ| ಜಿ. ಶಂಕರ, ಶರಣಪ್ಪ ಸುಣಗಾರ ಇತರರು ಪಾಲ್ಗೊಳ್ಳುವರು ಎಂದರು.
ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಭೋವಿ ಮಾತನಾಡಿ, ಜ. 14ರಂದು ಹೊರರಾಜ್ಯದ 10ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ.
ಜ್ಯೂನಿಯರ್ ರಾಜಕುಮಾರ ಖ್ಯಾತಿ ಅಶೋಕ ಬಸ್ತಿ ಅವರಿಂದ ವಿಭಿನ್ನ ಪಾತ್ರಗಳ ಅಭಿನಯ ನಡೆಯಲಿದೆ. ಒಡಿಸ್ಸಿ ನೃತ್ಯಪಟು ಮಮತಾ ಓಜಾ, ಅಸ್ಸಾಂನ ಬಿಹುನೃತ್ಯ, ಮಣಿಪುರದ ಟಾಂಗ್ಯಾ, ಛತ್ತೀಸ್‌ಗಡದ ಶಂಖವಾದನ, ರಾಜಸ್ಥಾನದ ಚಕ್ರಿ ಹಾಗೂ ಕೇರಳದ ಮೋಹಿನಿ ಅಟ್ಟಂ ನೃತ್ಯ, ತಮಿಳುನಾಡಿನ ಕಾವಡಿ ನೃತ್ಯ, ಆಂಧ್ರದ ತಪ್ಪಟ್ಟಗುಲ್ಲು, ಒರಿಸ್ಸಾದ ಒಟ್ಟಿಸ್ಸೀ ಮತ್ತು ಲಂಬಾಣಿ ನೃತ್ಯಗಳು ಪ್ರದರ್ಶನಗೊಳ್ಳಲಿವೆ. ಜಾದು ಕಲಾವಿದ ಕುದ್ರೋಳಿ ಗಣೇಶ ಅವರಿಂದ ಜಾದು ಪ್ರದರ್ಶನ, ತಿಪ್ಪೇಶ ಲಕ್ಕಿಕೋನಿ ಅವರಿಂದ ಜನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷ ಮಂಜುನಾಥ ಭೋವಿ, ಅಂಬಿಗರಚೌಡಯ್ಯ ಗುರುಪೀಠದ ಕಾರ್ಯಾಧ್ಯಕ್ಷ ಅಶೋಕ ವಾಲಿಕಾರ, ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಪರಶುರಾಮ ಸೊನ್ನದ, ತಾಲೂಕಾಧ್ಯಕ್ಷ ಬಸವರಾಜ ಕಳಸೂರ, ಪ್ರಕಾಶ ಅಂಬಿಗೇರ, ಕರಬಸಪ್ಪ ಹಳದೂರ, ರಾಜು ಕಲ್ಲೂರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.