ಮತದಾರರ ಗುರುತಿನ ಚೀಟಿ ಪರಿಶೀಲಿಸಿ
Team Udayavani, Oct 7, 2019, 1:15 PM IST
ಹಿರೇಕೆರೂರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ಮತದಾರರ ಪಟ್ಟಿಯ ಸ್ವಯಂ ಪರಿಶೀಲನೆ ಮತ್ತು ದೃಢೀಕರಣ ಕಾರ್ಯಕ್ರಮದ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ತಾಲೂಕು ಮಟ್ಟದ ಅಧಿಕಾರಿಗಳು, ಬಿಆರ್‌ಸಿ, ಸಿಆರ್‌ಪಿ ಮಟ್ಟದ ಅಧಿಕಾರಿಗಳು ಮತದಾರರ ಸ್ವಯಂ ಪರಿಶೀಲನೆ ಮತ್ತು ದೃಢೀಕರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ತಾಲೂಕಿನಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು. ಬಿಎಲ್‌ಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಕೂಡಲೇ ಮನೆ, ಮನೆಗೆ ಹೋಗಿ ಪ್ರತಿಯೊಬ್ಬ ಮತದಾರರನ್ನು ಭೇಟಿಯಾಗಿ ಗುರುತಿನ ಚೀಟಿ ಪರಿಶೀಲಿಸಬೇಕು. ಆ ಮೂಲಕ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ಯಾರೂ ಮತದಾದಿಂದ ವಂಚಿತರಾಗಬಾರದು ಎಂದರು.
ಸಭೆಯಲ್ಲಿ ತಹಶೀಲ್ದಾರ್ ಆರ್.ಎಚ್.ಭಾಗವಾನ್, ಶಿರಸ್ತೇದಾರ್ ಎಂ.ಎಲ್.ಸಾರಥಿ, ಪಪಂ ಮುಖ್ಯಾ ಧಿಕಾರಿ ರಾಜಾರಾಮ ಪವಾರ, ಎಚ್.ವೈ.ಕೊಪ್ಪದ, ಆರತಿ ಡೋಣಿ, ಎನ್.ಎಸ್.ಕಟ್ಟಿಮನಿ ಮತ್ತು ಗುಡಿಗೇರಿ, ಕಂದಾಯ ನಿರೀಕ್ಷಕರು, ತಹಶೀಲ್ದಾರ್ ಕಾರ್ಯಾಲಯದ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.